More

    ಬೆಂಗ್ಳೂರಿನಲ್ಲಿ ಮಹಡಿಯಿಂದ ಬಿದ್ದು ಗಗನಸಖಿ ಸಾವು ಪ್ರಕರಣ: ಕೊನೆಗೂ ತಪ್ಪೊಪ್ಪಿಕೊಂಡ ಪ್ರಿಯಕರ

    ಬೆಂಗಳೂರು: ಪ್ರಿಯಕರನನ್ನು ಭೇಟಿಯಾಗಲು ಬಂದಿದ್ದ ಗಗನಸಖಿ ಅಪಾರ್ಟ್‌ಮೆಂಟ್‌ನ ನಾಲ್ಕನೇ ಮಹಡಿಯಿಂದ ಬಿದ್ದು ಅನುಮಾನಾಸ್ಪದವಾಗಿ ಮೃತಪಟ್ಟ ಪ್ರಕರಣ ಇದೀಗ ತಾರ್ಕಿಕ ಅಂತ್ಯ ಕಾಣವ ಹಂತಕ್ಕೆ ಬಂದಿದೆ. ಇದುವರೆಗೂ ಪ್ರಕರಣ ನಿಗೂಢವಾಗಿತ್ತು. ಆದರೆ, ಇದೀಗ ಗಗನಸಖಿಯ ಬಾಯ್​ಫ್ರೆಂಡ್​ ತಪ್ಪೊಪ್ಪಿಕೊಂಡಿದ್ದು, ಆತ್ಮಹತ್ಯೆ ಎಂದು ಶಂಕಿಸಲಾಗಿದ್ದ ಪ್ರಕರಣ ಇದೀಗ ಕೊಲೆ ಪ್ರಕರಣವಾಗಿ ತಿರುವು ಪಡೆದುಕೊಂಡಿದೆ.

    ಹಿಮಾಚಲಪ್ರದೇಶ ಮೂಲದ ಅರ್ಚನಾ ಧೀಮನ್ (28) ಮೃತ ಗಗನಸಖಿ. ಕೋರಮಂಗಲದ 8ನೇ ಬ್ಲಾಕ್‌ನ ರೇಣುಕಾ ರೆಸಿಡೆನ್ಸಿ ಅಪಾರ್ಟ್‌ಮೆಂಟ್‌ನ ತಾನು ವಾಸವಿದ್ದ ಬಾಲ್ಕನಿಯಿಂದ ಬಿದ್ದು ಅರ್ಚನಾ ಮೃತಪಟ್ಟಿದ್ದಳು. ಆರಂಭದಲ್ಲಿ ಆತ್ಮಹತ್ಯೆ ಎಂದು ಶಂಕಿಸಲಾಗಿತ್ತು. ಸಾವಿಗೀಡಾದ ದಿನ ಅರ್ಚನಾಳ ಬಾಯ್​ಫ್ರೆಂಡ್​ ಸುಳಿವು ಸಿಕ್ಕಿದ್ದರಿಂದ ಆತ್ಮಹತ್ಯೆ ಪ್ರಕರಣ ಅನುಮಾನಾಸ್ಪದಾ ಪ್ರಕರಣಕ್ಕೆ ತಿರುಗಿತ್ತು.

    ಇದನ್ನೂ ಓದಿ: ಕೈ ಹಿಡಿಯಲು ಬಯಸಿದವರಿಗೆ ಮಣೆ, ಆಕಾಂಕ್ಷಿಗಳಿಗೆ ಆತಂಕ!; ಕಾಂಗ್ರೆಸ್ ಟಿಕೆಟ್ ಹಂಚಿಕೆ ಕುರಿತು ದೆಹಲಿಯಲ್ಲಿ ಚರ್ಚೆ

    ಅರ್ಚನಾ ಬಾಯ್​ಫ್ರೆಂಡ್​ ಆದೇಶ್​ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಆಕೆಯನ್ನು ಬಾಲ್ಕನಿಯಿಂದ ತಳ್ಳಿ ಕೊಲೆ ಮಾಡಿರುವುದಾಗಿ ತಪ್ಪೊಪ್ಪಿಕೊಂಡಿದ್ದಾನೆ. ಮದುವೆ ಆಗಲು ಒಪ್ಪದಿದ್ದರೆ ಲೈಗಿಂಕ ದೌರ್ಜನ್ಯ ಪ್ರಕರಣ ದಾಖಲಿಸಿ ಕಾನೂನು ಕ್ರಮ ಜರುಗಿಸುತ್ತೇನೆ ಎಂದು ಅರ್ಚನಾ ಬೆದರಿಕೆ ಹಾಕಿದ್ದಳು. ಮೃತಪಟ್ಟ ದಿನವೂ ಕೂಡ ಇದೇ ಬೆದರಿಕೆ ಮುಂದುವರಿಸಿದ್ದಳು. ಇದರಿಂದ ಇಬ್ಬರ ನಡುವೆ ವಾಗ್ವಾದ ನಡೆಯಿತು. ಅಂತಿಮವಾಗಿ ಆಕೆಯನ್ನು ಬಾಲ್ಕನಿಯಿಂದ ತಳ್ಳಿ ಕೊಲೆ ಮಾಡಿದೆ ಎಂದು ಆದೇಶ್​ ತಪ್ಪೊಪ್ಪಿಕೊಂಡಿದ್ದಾನೆ.

    ಮೃತ ಅರ್ಚನಾ ಅಂತಾರಾಷ್ಟ್ರೀಯ ವಿಮಾನಯಾನ ಕಂಪನಿಯಲ್ಲಿ ಗಗನಸಖಿಯಾಗಿ ಕೆಲಸ ಮಾಡುತ್ತಿದ್ದಳು. ಆಕೆಯ ಪ್ರಿಯಕರ ಸಾಫ್ಟ್‌ವೇರ್ ಇಂಜಿನಿಯರ್ ಆದೇಶ್ ನಗರದ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ. ಆರು ತಿಂಗಳ ಹಿಂದೆ ಸ್ನೇಹಿತರ ಮೂಲಕ ಅರ್ಚನಾ ಮತ್ತು ಆದೇಶ್ ಪರಸ್ಪರ ಪರಿಚಿತರಾಗಿದ್ದರು. ಪರಿಚಯ ಸ್ನೇಹಕ್ಕೆ ತಿರುಗಿ ಇಬ್ಬರೂ ಪ್ರೀತಿಸಲು ಆರಂಭಿಸಿದ್ದರು. ಕೆಲ ವಿಚಾರಗಳಲ್ಲಿ ಇಬ್ಬರ ನಡುವೆ ಭಿನ್ನಾಭಿಪ್ರಾಯವಿತ್ತು. ಹೀಗಾಗಿ ಆಗಾಗ ಜಗಳವಾಡುತ್ತಿದ್ದರು ಎನ್ನಲಾಗಿದೆ.

    ಇದನ್ನೂ ಓದಿ: ರಾಜ್ಯಕ್ಕೆ ಬರಲಿದ್ದಾನೆ ಪಿಎಂ ಮಿತ್ರ: ಪ್ರಧಾನಿ ಮೋದಿ ಘೋಷಣೆ; ಕಲಬುರಗಿಯಲ್ಲಿ ಮೆಗಾ ಟೆಕ್ಸ್​ಟೈಲ್ ಪಾರ್ಕ್ ಸ್ಥಾಪನೆ

    ಕಾರ್ಯನಿಮಿತ್ತ ದುಬೈನಲ್ಲಿದ್ದ ಅರ್ಚನಾ ನಾಲ್ಕು ದಿನದ ಹಿಂದೆ ದುಬೈನಿಂದ ಬೆಂಗಳೂರಿಗೆ ಬಂದಿದ್ದಳು. ಈ ನಾಲ್ಕು ದಿನ ಇಬ್ಬರು ಒಟ್ಟಿಗಿದ್ದರು. ಶುಕ್ರವಾರ ಸಂಜೆ ಕೋರಮಂಗಲದ ಫೋರಂ ಮಾಲ್‌ನಲ್ಲಿ ಸಿನಿಮಾಕ್ಕೆ ತೆರಳಿದ್ದರು. ರಾತ್ರಿ ಸಿನಿಮಾ ನೋಡಿಕೊಂಡು ಅಪಾರ್ಟ್‌ಮೆಂಟ್‌ಗೆ ಬಂದಿದ್ದು, ಇಬ್ಬರೂ ಸೇರಿ ಪಾರ್ಟಿ ಮಾಡಿದ್ದಾರೆ. ಈ ವೇಳೆ ಯಾವುದೋ ವಿಚಾರಕ್ಕೆ ಇಬ್ಬರ ನಡುವೆ ಜಗಳ ಶುರುವಾಗಿದ್ದು, ವಾಗ್ವಾದವಾಗಿದೆ. ಮಧ್ಯರಾತ್ರಿ 12 ಗಂಟೆಗೆ ಅರ್ಚನಾ ಅಪಾರ್ಟ್‌ಮೆಂಟ್‌ನ ನಾಲ್ಕನೇ ಮಹಡಿಯಿಂದ ಕೆಳಗೆ ಬಿದ್ದಿದ್ದಳು. ಈ ವೇಳೆ ತಲೆಗೆ ಗಂಭೀರ ಪೆಟ್ಟು ಬಿದ್ದು ಸ್ಥಳದಲ್ಲೇ ಆಕೆ ಮೃತಪಟ್ಟಿದ್ದಾಳೆ.

    ಈ ಕುರಿತು ಪ್ರಕರಣ ದಾಖಲಿಸಿಕೊಂಡಿದ್ದ ಬೆಂಗಳೂರು ಪೊಲೀಸರು ಸಮೀಪದ ಸಿಸಿಟಿವಿ ಕ್ಯಾಮೆರಾಗಳನ್ನು ಪರಿಶೀಲಿಸಿ, ಅರ್ಚನಾ ಪ್ರಿಯಕರ ಆದೇಶ್​ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ತಾನೇ ಕೊಲೆ ಮಾಡಿರುವುದಾಗಿ ತಪ್ಪೊಪ್ಪಿಕೊಂಡಿದ್ದಾನೆ. (ಏಜೆನ್ಸೀಸ್​)

    ಪ್ರಿಯಕರನ ಭೇಟಿಗೆಂದು ಬಂದ ಗಗನಸಖಿ ಮಹಡಿಯಿಂದ ಕೆಳಕ್ಕೆ ಬಿದ್ದು ಸಾವು; ಪರಿಚಯ-ಪ್ರೇಮವಾದ 6 ತಿಂಗಳಲ್ಲೇ ಮರಣ

    ಉದ್ಯೋಗ ನಷ್ಟ, ಧೈರ್ಯದಿಂದ ಮೆಟ್ಟಿನಿಲ್ಲಿ ಸಂಕಷ್ಟ

    ಇನ್ನೂ ಮುಗಿಯದ ಕಬ್ಜ, ಸಾಹಸಪ್ರಿಯರಿಗೆ ಹಬ್ಬ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts