More

    ಕತಾರ್​ನಲ್ಲಿ 8 ಮಂದಿ ಭಾರತೀಯರಿಗೆ ನೀಡಲಾಗಿದ್ದ ಮರಣದಂಡನೆ ಶಿಕ್ಷೆಯಲ್ಲಿ ಕಡಿತ

    ನವದೆಹಲಿ: ಕತಾರ್ ನ್ಯಾಯಾಲಯವು ಬೇಹುಗಾರಿಕೆ ಆರೋಪದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ತಿಂಗಳು ಭಾರತೀಯ ನೌಕಾಪಡೆಯ ಎಂಟು ಮಾಜಿ ಸಿಬ್ಬಂದಿಗೆ ನೀಡಲಾಗಿದ್ದ ಮರಣ ದಂಡನೆ ಶಿಕ್ಷೆಯನ್ನು ಕಡಿತಗೊಳಿಸಿದ್ದು, ಈ ಮೂಲಕ ಅವರ ಕುಟುಂಬಸ್ಥರಿಗೆ ಒಂದಿಷ್ಟು ನೆಮ್ಮದಿ ಮೂಡಿದೆ.

    ಕತಾರ್‌ನ ಮೇಲ್ಮನವಿ ನ್ಯಾಯಾಲಯವು ದಹ್ರಾ ಗ್ಲೋಬಲ್ ಪ್ರಕರಣದಲ್ಲಿ ಶಿಕ್ಷೆಯನ್ನು ಕಡಿಮೆ ಮಾಡಿದೆ ಎಂದು ಭಾರತೀಯ ವಿದೇಶಾಂಗ ವ್ಯವಹಾರಗಳ ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದೆ. ಆದರೆ, ನ್ಯಾಯಾಲಯವು ಏನು ಹೇಳಿದೆ ಎಂಬುದನ್ನು ಅದು ಸ್ಪಷ್ಟವಾಗಿ ತಿಳಿಸಿಲ್ಲ, ಈ ವಿಷಯದಲ್ಲಿ ವಿವರವಾದ ತೀರ್ಪನ್ನು ನಿರೀಕ್ಷಿಸಲಾಗುತ್ತಿದೆ ಎಂದು ಸಚಿವಾಲಯ ಹೇಳಿದೆ.

    ಬೇಹುಗಾರಿಕೆ ಆರೋಪ ಪ್ರಕರಣದಲ್ಲಿ ನೌಕಾಪಡೆಯ ಯೋಧರಿಗೆ ಮರಣದಂಡನೆ ವಿಧಿಸಿದ ವಿರುದ್ಧ ಭಾರತ ಸರ್ಕಾರ ಸಲ್ಲಿಸಿದ ಮೇಲ್ಮನವಿಯನ್ನು ಕತಾರ್‌ನ ಮೊದಲ ಪ್ರಕರಣದ ನ್ಯಾಯಾಲಯವು ಸ್ವೀಕರಿಸಿದ ವಾರಗಳ ನಂತರ ಈ ಬೆಳವಣಿಗೆಯಾಗಿದೆ.

    ಮುಂದಿನ ಕ್ರಮಗಳನ್ನು ನಿರ್ಧರಿಸಲು ಭಾರತೀಯ ಅಧಿಕಾರಿಗಳು, ಕಾನೂನು ತಂಡ ಮತ್ತು ಕುಟುಂಬದ ಸದಸ್ಯರೊಂದಿಗೆ ನಿಕಟ ಸಂಪರ್ಕದಲ್ಲಿದ್ದಾರೆ.

    “ದಹ್ರಾ ಗ್ಲೋಬಲ್ ಪ್ರಕರಣದಲ್ಲಿ ಕತಾರ್‌ನ ಮೇಲ್ಮನವಿ ನ್ಯಾಯಾಲಯದ ತೀರ್ಪನ್ನು ನಾವು ಇಂದು ಗಮನಿಸಿದ್ದೇವೆ, ಇದರಲ್ಲಿ ಶಿಕ್ಷೆಯನ್ನು ಕಡಿಮೆ ಮಾಡಲಾಗಿದೆ. ವಿವರವಾದ ತೀರ್ಪಿಗೆ ಕಾಯಲಾಗುತ್ತಿದೆ” ಎಂದು ಸಚಿವಾಲಯವು ಅಧಿಕೃತ ಹೇಳಿಕೆಯಲ್ಲಿ ತಿಳಿಸಿದೆ.

    “ಕತಾರ್‌ನಲ್ಲಿರುವ ನಮ್ಮ ರಾಯಭಾರಿ ಮತ್ತು ಇತರ ಅಧಿಕಾರಿಗಳು ಕುಟುಂಬ ಸದಸ್ಯರೊಂದಿಗೆ ಇಂದು ಮೇಲ್ಮನವಿ ನ್ಯಾಯಾಲಯಕ್ಕೆ ಹಾಜರಾಗಿದ್ದರು. ಆರಂಭದಿಂದಲೂ ನಾವು ಅವರ ಬೆಂಬಲಕ್ಕೆ ನಿಂತಿದ್ದೇವೆ. ನಾವು ಎಲ್ಲಾ ರಾಜತಾಂತ್ರಿಕ ಮತ್ತು ಕಾನೂನು ನೆರವು ನೀಡುವುದನ್ನು ಮುಂದುವರಿಸುತ್ತೇವೆ” ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

    ಖಾಸಗಿ ಕಂಪನಿ ಅಲ್ ದಹ್ರಾ ಜತೆ ಕೆಲಸ ಮಾಡುತ್ತಿದ್ದ ಭಾರತೀಯ ಪ್ರಜೆಗಳನ್ನು ಕಳೆದ ವರ್ಷ ಆಗಸ್ಟ್‌ನಲ್ಲಿ ಬೇಹುಗಾರಿಕೆ ಆರೋಪದಡಿಯಲ್ಲಿ ಬಂಧಿಸಲಾಗಿತ್ತು.

    ಏತನ್ಮಧ್ಯೆ, ನೌಕಾಪಡೆಯ ಮುಖ್ಯಸ್ಥ ಅಡ್ಮಿರಲ್ ಆರ್.ಹರಿ ಕುಮಾರ್ ಅವರು ಈ ತಿಂಗಳ ಆರಂಭದಲ್ಲಿ, ಕತಾರ್‌ನ​ ಸೆರೆಯಲ್ಲಿರುವ ಎಲ್ಲಾ ಮಾಜಿ ನೌಕಾಪಡೆಯ ಸಿಬ್ಬಂದಿಯನ್ನು ಮರಳಿ ಕರೆತರಲು ಸರ್ಕಾರವು ಎಲ್ಲಾ ಪ್ರಯತ್ನಗಳನ್ನು ಮಾಡುತ್ತಿದೆ ಎಂದು ಹೇಳಿದ್ದರು.

    ಅಕ್ಟೋಬರ್ 26 ರಂದು ಕತಾರ್‌ನ ಪ್ರಥಮ ನಿದರ್ಶನದ ನ್ಯಾಯಾಲಯವು ಮರಣದಂಡನೆ ಶಿಕ್ಷೆಯನ್ನು ನೌಕಾಪಡೆಯ ಈ ಮಾಜಿ ಸಿಬ್ಬಂದಿಗೆ ವಿಧಿಸಿತ್ತು. ಭಾರತವು ತೀರ್ಪನ್ನು ಈ ಆಘಾತಕಾರಿ ಎಂದು ಹೇಳಿತ್ತು. ಮಾರ್ಚ್ 25 ರಂದು ಭಾರತೀಯ ಪ್ರಜೆಗಳ ವಿರುದ್ಧ ಆರೋಪಗಳನ್ನು ದಾಖಲಿಸಿ, ಕತಾರ್ ಕಾನೂನಿನ ಅಡಿಯಲ್ಲಿ ಅವರನ್ನು ವಿಚಾರಣೆಗೆ ಒಳಪಡಿಸಲಾಗಿತ್ತು

    ಹೀಗೊಂದು ಗ್ಯಾಂಗ್ಸ್ ಆಫ್ ವಾಸೇಪುರ್: 21 ವರ್ಷಗಳ ನಂತರ ಸಿನಿಮಾ ಶೈಲಿಯಲ್ಲಿ ಕೊಲೆ ಆರೋಪಿ ಬಂಧನ

    ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ 400ಕ್ಕೂ ಹೆಚ್ಚು ಸೀಟು ಗೆಲ್ಲಬಹುದು: ಕಾಂಗ್ರೆಸ್‌ನ ಹಿರಿಯ ನಾಯಕ ಸ್ಯಾಮ್ ಪಿತ್ರೋಡಾ ಹೀಗೇಕೆ ಹೇಳಿದ್ದು?

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts