More

    ನಿರಂತರ ಮಳೆಯಿಂದಾಗಿ ಭೂ ಕುಸಿತ; ಮೃತರ ಸಂಖ್ಯೆ 21ಕ್ಕೆ ಏರಿಕೆ

    ಮುಂಬೈ: ಕಳೆದ ಕೆಲ ದಿನಗಳಿಂದ ಮಹಾರಷ್ಟ್ರದಲ್ಲಿ ಎಡಬಿಡದೆ ಮಳೆ ಸುರಿಯುತ್ತಿದ್ದು, ಇದರ ಪರಿಣಾಮವಾಗಿ ರಾಯಗಢ ಜಿಲ್ಲೆಯ ಕಾಲಾಪುರ ತಾಲ್ಲೂಕಿನ ಇರ್ಶಲವಾಡಿ ಪ್ರದೇಶದಲ್ಲಿ ನಡೆದಿದೆ.

    ಘಟನೆಯಲ್ಲಿ ಸಾವಿನ ಸಂಖ್ಯೆ 21ಕ್ಕೆ ಏರಿಕೆಯಾಗಿದ್ದು, 100ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಮೃತರು ಬುಡಕಟ್ಟು ಸಮುದಾಯಕ್ಕೆ ಸೇರಿದವರಾಗಿದ್ದು, ಅವಶೇಷಗಳಡಿ ಹಲವಾರು ಮಂದಿ ಸಿಲುಕಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ಗುರುವಾರ ರಾತ್ರಿ ಎಡಬಿಡದೆ ಮಳೆ ಸುರಿದ ಕಾರಣ ಕಾರ್ಯಾಚರಣೆಯನ್ನು ಅರ್ಧಕ್ಕೆ ಸ್ಥಗಿತಗೊಳಿಸಲಾಗಿತ್ತು. ಶುಕ್ರವಾರ ಮುಂಜಾನೆ ಮಳೆ ಬಿಡುವು ನೀಡಿದ ಕಾರಣ ಕಾರ್ಯಾಚರಣೆಯನ್ನು ಮುಂದುವರೆಸಲಾಯಿತು ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

    LandSlide

    ಇದನ್ನೂ ಓದಿ: ಅಮೆರಿಕಾದಲ್ಲಿ 8 ಕೋಟಿ ರೂ ವೆಚ್ಚದ ಕಾಲಭೈರವೇಶ್ವರ ದೇಗುಲ ನಿರ್ಮಾಣ; ನಿರ್ಮಲಾನಂದ ಶ್ರೀಗಳಿಂದ ಕಾಮಗಾರಿ ಪರಿಶೀಲನೆ

    NDRFನ ನಾಲ್ಕು ತಂಡಗಳು, SDRF, ಮಹಾರಾಷ್ಟ್ರದ ಪರ್ವತಾರೋಹಿ ರಕ್ಷಣಾ ತಂಡ, ಅಗ್ನಿಶಾಮಕ ಇಲಾಖೆಯ ಸಿಬ್ಬಂದಿ, ಚಾರಣಿಗರು ಹಾಗೂ ಸ್ಥಳೀಯರು ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ.

    ರಾಯಗಢ ಜಿಲ್ಲೆಯ ಕಾಲಾಪುರ ತಾಲ್ಲೂಕಿನ ಇರ್ಶಲವಾಡಿ ಪ್ರದೇಶದಲ್ಲಿ ನಡೆದಿದ್ದು, ಈ ಹಳ್ಳಿಯಲ್ಲಿ ಸುಮಾರು 48 ಮನೆಗಳಿದ್ದು ಈ ಪೈಕಿ 17 ನೆಲಸಮವಾಗಿದೆ. ಒಟ್ಟು 288ಜನ ಈ ಗ್ರಾಮದಲ್ಲಿ ವಾಸಿಸುತ್ತಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts