

ಬೆಂಗಳೂರು: ನಗರದ (Bengaluru) ಹೆಣ್ಣೂರು ಪೊಲೀಸ್ ಠಾಣೆ ವ್ಯಾಪ್ತಿಯ ಬಾಬುಸಾಬ್ಪಾಳ್ಯದಲ್ಲಿ ಸಂಭವಿಸಿದ್ದ ಕಟ್ಟಡ ಕುಸಿತ ಪ್ರಕರಣಕ್ಕೆ (Building Collapse Case) ಸಂಬಂಧಿಸಿದಂತೆ ಮೃತರ ಸಂಖ್ಯೆ 7ಕ್ಕೆ ಏರಿದ್ದು, ಪೊಲೀಸರು ಕಟ್ಟಡದ ಮಾಲೀಕನನ್ನು ಅರೆಸ್ಟ್ ಮಾಡಿದ್ದಾರೆ.
ಬಂಧಿತರನ್ನು ಭೂವನ್ ರೆಡ್ಡಿ ಎಂದು ಗುರುತಿಸಲಾಗಿದ್ದು, ಇವರು ಮೊದಲನೇ ಆರೋಪಿ ಮುನಿರಾಜಿರೆಡ್ಡಿಯ ಮಗ ಎಂದು ತಿಳಿದು ಬಂದಿದೆ. ಬಿಎನ್ಎಸ್ಎಸ್ (BNSS), ಬಿಬಿಎಂಪಿ(BBMP), ರೇರಾ (Rera) ಹಾಗೂ ಸಂಬಂಧಿತ ಕಾಯ್ದೆಯಡಿ ಪೊಲೀಸರು FIR ದಾಖಲಿಸಿ ವಿಚಾರಣೆ ನಡೆಸುತ್ತಿದ್ದಾರೆ.
ಕಟ್ಟಡ ಕುಸಿತಕ್ಕೆ ಸಂಬಂಧಿಸಿದಂತೆ ರಕ್ಷಣಾ ಕಾರ್ಯಾಚರಣೆ ಭರದಿಂದ ಸಾಗಿದ್ದು, ಸ್ಥಳದಲ್ಲಿ ಇನ್ನೋರ್ವನ ಮೃತದೇಹ ಪತ್ತೆಯಾಗಿದೆ. ಈ ಮೂಲಕ ಸಾವಿನ ಸಂಖ್ಯೆ 7ಕ್ಕೆ ಏರಿಕೆಯಾಗಿದೆ. ಪೊಲೀಸರು ಬಿಎನ್ಎಸ್ಎಸ್ 105, 125(A) 125(B), 270,3(5) ಬಿಬಿಎಂಪಿ ಆ್ಯಕ್ಟ್ 326, 327,328 RERA (u/s3) ಅಡ್ಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ವಿಚಾರಣೆ ನಡೆಸುತ್ತಿದ್ದಾರೆ.