ಕರೊನಾ ರೋಗಲಕ್ಷಣ ಕಾಣಿಸಿಕೊಂಡ ಕೆಲವೇ ಗಂಟೆಗಳಲ್ಲಿ ಸಾಯುತ್ತಿರುವ ಜನ

ವಿಶಾಖಪಟ್ಟಣ: ಆಂಧ್ರಪ್ರದೇಶದಲ್ಲಿ ಇತ್ತೀಚಿಗೆ ಕರೊನಾ ರೋಗಲಕ್ಷಣ ಕಾಣಿಸಿಕೊಂಡ ಕೆಲವೇ ಗಂಟೆಗಳಲ್ಲಿ ಸೋಂಕಿತರು ಸಾಯುತ್ತಿರುವ ಪ್ರಕರಣಗಳು ಹೆಚ್ಚಾಗುತ್ತಿವೆ. ಇದು ಆತಂಕಕ್ಕೆ ಕಾರಣವಾಗಿದೆ. ವಿಜಯವಾಡದ ಹಳೇ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯ ಕೋವಿಡ್​-19 ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದ ವೈದ್ಯರೊಬ್ಬರಿಗೆ ತೀವ್ರ ಸ್ವರೂಪದ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿತು. ತಕ್ಷಣವೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಅವರು ಆಸ್ಪತ್ರೆಗೆ ದಾಖಲಾದ ಅರ್ಧಗಂಟೆಯಲ್ಲೇ ಮೃತಪಟ್ಟರು ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ. ಉಸಿರಾಟದ ಸಮಸ್ಯೆ ಕಾಣಿಸಿಕೊಳ್ಳುವವರೆಗೂ ಕರೊನಾ ಸೋಂಕಿನ ಯಾವುದೇ ಲಕ್ಷಣಗಳು ಅವರಲ್ಲಿ ಇರಲಿಲ್ಲ. ಆಸ್ಪತ್ರೆಗೆ ದಾಖಲಾಗುವ ಕೆಲವೇ … Continue reading ಕರೊನಾ ರೋಗಲಕ್ಷಣ ಕಾಣಿಸಿಕೊಂಡ ಕೆಲವೇ ಗಂಟೆಗಳಲ್ಲಿ ಸಾಯುತ್ತಿರುವ ಜನ