More

    ಮಕ್ಕಳಲ್ಲಿರುವ ಪ್ರತಿಭೆ ಪ್ರದರ್ಶನಕ್ಕೆ ಚರ್ಚಾ ಸ್ಪರ್ಧೆ ಸೂಕ್ತ ವೇದಿಕೆ

    ಕೆ.ಎಂ.ದೊಡ್ಡಿ: ಮಕ್ಕಳಲ್ಲಿರುವ ಪ್ರತಿಭೆ ಪ್ರದರ್ಶನ ಮಾಡಲು ಚರ್ಚಾ ಸ್ಪರ್ಧೆ ಸೂಕ್ತ ವೇದಿಕೆ ಎಂದು ಭಾರತೀ ಎಜುಕೇಷನ್ ಟ್ರಸ್ಟ್‌ನ ಕಾರ್ಯನಿರ್ವಾಹಕ ಟ್ರಸ್ಟಿ ಆಶಯ್ ಮಧು ಅಭಿಪ್ರಾಯಪಟ್ಟರು.

    ಕುವೆಂಪು ಸಭಾಂಗಣದಲ್ಲಿ ಭಾರತೀ ಪ್ರೌಢಶಾಲೆ ವತಿಯಿಂದ ಆಯೋಜಿಸಿದ್ದ ನಿವೃತ್ತ ಮುಖ್ಯ ಶಿಕ್ಷಕ ಎಚ್.ಕೆಂಡೇಗೌಡರ ಸ್ಮರಣಾರ್ಥವಾಗಿ ಬುಧವಾರ ಆಯೋಜಿಸಿದ್ದ ಜಿಲ್ಲಾ ಮಟ್ಟದ 46ನೇ ವರ್ಷದ ಅಂತರ ಪ್ರೌಢಶಾಲಾ ಚರ್ಚಾ ಸ್ಪರ್ಧಾ ಸಮಾರೋಪ ಸಮಾರಂಭದಲ್ಲಿ ವಿಜೇತರಿಗೆ ಬಹುಮಾನ ವಿತರಿಸಿ ಅವರು ಮಾತನಾಡಿದರು.

    ಮಕ್ಕಳಲ್ಲಿ ತನ್ನದೇ ಆದ ಒಂದು ಪ್ರತಿಭೆ ಇರುತ್ತದೆ. ಅದನ್ನು ಶಿಕ್ಷಕರು ಗುರುತಿಸಿ ಆ ಪ್ರತಿಭೆಗೆ ಪ್ರೋತ್ಸಹ ನೀಡುವ ಮೂಲಕ ಅವರ ಪ್ರತಿಭೆಯನ್ನು ಉತ್ತುಂಗದತ್ತ ಕೊಂಡೊಯ್ಯಲು ಸಹಕರಿಸಬೇಕು ಎಂದು ಕಿವಿಮಾತು ಹೇಳಿದರು.

    ಕಳೆದ 46 ವರ್ಷಗಳಿಂದಲೂ ಸಂಸ್ಥೆ ವತಿಯಿಂದ ಚರ್ಚಾಸ್ಪರ್ಧೆ ಕಾರ್ಯಕ್ರಮವನ್ನು ಆಯೋಜಿಸುತ್ತಾ ಬರಲಾಗಿದ್ದು ಒಂದು ಉತ್ತಮ ಕಾರ್ಯಕ್ರಮ ಇದಾಗಿದೆ. ಉತ್ತಮ ವಿಷಯದೊಂದಿಗೆ ವರ್ಷದಿಂದ ವರ್ಷಕ್ಕೆ ತನ್ನ ಚರ್ಚಸ್ಸನ್ನು ಹೆಚ್ಚಿಸಿಕೊಳ್ಳುತಿದ್ದು ಮುಂದಿನ ದಿನಗಳಲ್ಲಿ ವಿಭಿನ್ನವಾಗಿ ಕಾರ್ಯಕ್ರಮ ಆಯೋಜಿಸಲಾಗುವುದು ಎಂದರು.

    ಭಾರತೀ ಎಜುಕೇಷನ್ ಟ್ರಸ್ಟ್‌ನ ಕಾರ್ಯದರ್ಶಿ ಬಿ.ಎಂ.ನಂಜೇಗೌಡ, ಮುಖ್ಯಶಿಕ್ಷಕ ಪಿ.ರಾಜೇಂದ್ರ ರಾಜೇಅರಸು, ನಿವೃತ್ತ ಮುಖ್ಯಶಿಕ್ಷಕ ಎಂ.ಮಾಯಪ್ಪ, ಪ್ರಕಾಶ್, ಎಂ.ಎಸ್.ಶಿವಣ್ಣ, ಶಿಕ್ಷಕರಾದ ಜಗದೀಶ್, ದೇವರಾಜು, ನಾಗರಾಜು, ಬಸವರಾಜು, ನಂದಿನಿ, ಶಿವಮಣಿ, ಶಿಲ್ಪಾ ಸೇರಿದಂತೆ ಮತ್ತಿತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts