ಸವಣೂರ: ಸಾಲಬಾಧೆಯಿಂದ ರೈತರೊಬ್ಬರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಟನೆ ತಾಲೂಕಿನ ತಳ್ಳಿಹಳ್ಳಿಯಲ್ಲಿ ಭಾನುವಾರ ನಡೆದಿದೆ.
ಹವಳಪ್ಪ ಕರೆಯಲ್ಲಪ್ಪ ಗೌಡಗೇರಿ (35) ಮೃತ ರೈತ.
ಇವರು ಕೃಷಿಗಾಗಿ ಬ್ಯಾಂಕ್ ಹಾಗೂ ವಿವಿಧ ಸಂಗಳಲ್ಲಿ 4 ಲಕ್ಷ ರೂ. ಸಾಲ ಮಾಡಿಕೊಂಡಿದ್ದರು. ಜಮೀನಿನಲ್ಲಿ ಬೆಳೆದ ಬೆಳೆ ಸರಿಯಾಗಿ ಬಾರದ ಕಾರಣ ಸಾಲ ತೀರಿಸಲಾಗದೆ ಮನೆಯಲ್ಲಿಯೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಈ ಕುರಿತು ಸವಣೂರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
