ರಾಣೆಬೆನ್ನೂರ: ಸಾಲಬಾಧೆಯಿಂದ ರೈತರೊಬ್ಬರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಟನೆ ತಾಲೂಕಿನ ಮುಷ್ಟೂರು ಗ್ರಾಮದಲ್ಲಿ ಬುಧವಾರ ನಡೆದಿದೆ.
ಗ್ರಾಮದ ಹನುಮಂತಪ್ಪ ತಿರಕಪ್ಪ ಯಲ್ಲಕ್ಕನವರ (65) ಮೃತ ರೈತ.
ಇವರು ಬ್ಯಾಂಕ್ ಹಾಗೂ ಕೈಗವಾಗಿ ಲಾಂತರ ರೂ. ಸಾಲ ಮಾಡಿಕೊಂಡಿದ್ದರು. ಮಳೆ ಕೊರತೆಯಿಂದ ಜಮೀನಿನಲ್ಲಿ ಬೆಳೆದಿದ್ದ ಬೆಳೆ ಸಂಪೂರ್ಣ ಹಾಳಾಗಿತ್ತು. ಇದರಿಂದ ಮನನೊಂದು ಮನೆಯಲ್ಲಿಯೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.
ಈ ಕುರಿತು ಹಲಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
