ರಾಣೆಬೆನ್ನೂರ: ಸಾಲಬಾಧೆಯಿಂದ ರೈತರೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಕೋಣನತಲಿ ಗ್ರಾಮದಲ್ಲಿ ಗುರುವಾರ ನಡೆದಿದೆ.
ಮಹೇಶಪ್ಪ ಪಂಚಪ್ಪ ಬಣಕಾರ (52) ಮೃತ ರೈತ.
ಇವರು 1.25 ಎಕರೆ ಜಮೀನು ಹೊಂದಿದ್ದು ಬ್ಯಾಂಕ್ ಹಾಗೂ ಕೈಗಡವಾಗಿ 6.25 ಲಕ್ಷ ರೂ. ಸಾಲ ಮಾಡಿಕೊಂಡಿದ್ದರು. ಜಮೀನಿನಲ್ಲಿ ಬೆಳೆದಿದ್ದ ಬೆಳೆ ಸರಿಯಾಗಿ ಮಳೆ ಬಾರದ ಕಾರಣ ಹಾಳಾಗಿ ಹೋಗಿತ್ತು. ಇದರಿಂದ ಮನನೊಂದು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಈ ಕುರಿತು ಹಲಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸಾಲಬಾಧೆ ನೇಣು ಬಿಗಿದುಕೊಂಡು ರೈತ ಆತ್ಮಹತ್ಯೆ

You Might Also Like
ಹೃದ್ರೋಗ ದೂರ, ಮೆದುಳಿನ ಆರೋಗ್ಯಕ್ಕೆ ಬಲ: ಟ್ಯೂನ ಮೀನಿನಲ್ಲಿದೆ ಹಲವು ಆರೋಗ್ಯ ಪ್ರಯೋಜನಗಳು! Tuna Fish Benefits
Tuna Fish Benefits: ಮೀನು ತಿನ್ನುವುದು ಆರೋಗ್ಯಕ್ಕೆ ಒಳ್ಳೆಯದು ಎಂದು ಸಾಮಾನ್ಯವಾಗಿ ಹೇಳಲಾಗುತ್ತದೆ. ಮೀನಿನಲ್ಲಿ ಹಲವು…
ಯುವಜನರಲ್ಲಿ ಹೃದಯಾಘಾತ ಹೆಚ್ಚಾಗಲು ಪ್ರಮುಖ ಕಾರಣಗಳಿವು… ತಕ್ಷಣ ಎಚ್ಚೆತ್ತುಕೊಳ್ಳದಿದ್ರೆ ಅಪಾಯ ಫಿಕ್ಸ್! Cardiac Arrest
Cardiac Arrest : ಒಂದು ಕಾಲದಲ್ಲಿ ವಯಸ್ಸಾದವರಲ್ಲಿ ಮಾತ್ರ ಕಂಡುಬರುತ್ತಿದ್ದ ಹೃದಯ ಸಂಬಂಧಿ ಸಮಸ್ಯೆಗಳು ಈಗ…