More

    ಸಾಲಬಾಧೆಯಿಂದ ರೈತ ಆತ್ಮಹತ್ಯೆ, ಪರಿಹಾರಕ್ಕಾಗಿ ಪ್ರತಿಭಟನೆ

    ರಾಣೆಬೆನ್ನೂರ: ಸಾಲಬಾಧೆಯಿಂದ ರೈತನೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಮೇಡ್ಲೇರಿ ತಾಂಡಾದಲ್ಲಿ ಸೋಮವಾರ ರಾತ್ರಿ ನಡೆದಿದೆ.

    ಬೀರಪ್ಪ ಕಣೆಪ್ಪ ಲಮಾಣಿ (30) ಆತ್ಮಹತ್ಯೆ ಮಾಡಿಕೊಂಡ ರೈತ. ಈತ 5 ಎಕರೆ ಜಮೀನು ಹೊಂದಿದ್ದು, ಬ್ಯಾಂಕ್​ನಲ್ಲಿ 5.35 ಲಕ್ಷ ರೂ. ಹಾಗೂ ಕೈಗಡವಾಗಿ 3 ಲಕ್ಷ ರೂ. ಸಾಲ ಮಾಡಿ ಮೆಕ್ಕೆಜೋಳ ಮತ್ತಿತರ ಬೆಳೆ ಬೆಳೆದಿದ್ದ. ಆದರೆ, ಅತಿವೃಷ್ಟಿಯಿಂದ ಬೆಳೆ ಸಂಪೂರ್ಣ ಹಾನಿಯಾಗಿ ನಷ್ಟ ಅನುಭವಿಸಿದ್ದ. ಇದರಿಂದ ಮನನೊಂದು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ. ಈ ಕುರಿತು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
    ಮೃತ ರೈತನ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಬೇಕು. ರೈತರ ಬೆಳೆ ಸಾಲವನ್ನು ಸಂಪೂರ್ಣ ಮನ್ನಾ ಮಾಡಬೇಕು ಎಂದು ಆಗ್ರಹಿಸಿ ರೈತ ಸಂಘದ ಕಾರ್ಯಕರ್ತರು ನಗರದ ಹಲಗೇರಿ ರಸ್ತೆಯ ಸರ್ಕಾರಿ ಆಸ್ಪತ್ರೆಯ ಎದುರು ಮೃತ ರೈತನ ಶವವಿಟ್ಟು ಪ್ರತಿಭಟನೆ ನಡೆಸಿದರು.

    ರೈತ ಮುಖಂಡ ರವೀಂದ್ರಗೌಡ ಪಾಟೀಲ, ದಿಳ್ಳೆಪ್ಪ ಸತ್ಯಪ್ಪನವರ, ಪರಮೇಶಪ್ಪ ಲಮಾಣಿ, ಶಿವಪ್ಪ ಲಮಾಣಿ, ದಿಳ್ಳೇಪ್ಪ ಲಮಾಣಿ, ಪುಟ್ಟಪ್ಪ ಲಮಾಣಿ, ಬೀರಪ್ಪ ಲಮಾಣಿ, ಬಸವರಾಜ ಕೊಂಗಿ, ಎಸ್.ಡಿ. ಹಿರೇಮಠ, ಲೋಕಪ್ಪ ಬಡಪ್ಪನವರ ಮತ್ತಿತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts