More

    ಮತ್ತೊಬ್ಬ ನಿರ್ಭಯಾ ಪ್ರಕರಣದ ಅಪರಾಧಿಯಿಂದ ಸುಪ್ರೀಂಕೋರ್ಟ್​ಗೆ ಕ್ಯುರೇಟಿವ್​ ಅರ್ಜಿ ಸಲ್ಲಿಕೆ

    ನವದೆಹಲಿ: ಫೆಬ್ರವರಿ 1ಕ್ಕೆ ನಿಗದಿಯಾಗಿರುವ ನಿರ್ಭಯಾ ಅತ್ಯಾಚಾರ ಮತ್ತು ಕೊಲೆ ಅಪರಾಧಿಗಳ ಗಲ್ಲು ಶಿಕ್ಷೆಯು ಮತ್ತೆ ಮುಂದಕ್ಕೆ ಹೋಗುವ ಲಕ್ಷಣಗಳು ಕಾಣುತ್ತಿವೆ. ಈಗಾಗಲೇ ಜನವರಿ 22ರಿಂದ ಫೆ.1ಕ್ಕೆ ಮುಂದೂಡಲಾಗಿತ್ತು. ಇದೀಗ ಮತ್ತೊಬ್ಬ ಅಪರಾಧಿ ಕ್ಯುರೇಟಿವ್​ ಅರ್ಜಿ ಸಲ್ಲಿಸಿರುವುದರಿಂದ ಈ ಪ್ರಶ್ನೆ ಉದ್ಭವವಾಗಿದೆ.

    ಅಪರಾಧಿ ಅಕ್ಷಯ್​ ಠಾಕೂರ್​ ಮಂಗಳವಾರ ಸುಪ್ರೀಂಕೋರ್ಟ್​ನಲ್ಲಿ ಕ್ಯುರೇಟಿವ್​ ಅರ್ಜಿ ದಾಖಲಿಸಿರುವುದಾಗಿ ತಿಹಾರ್​ ಜೈಲು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಇನ್ನೊಂದೆಡೆ ಕ್ಷಮಾಧಾನ ಅರ್ಜಿ ತಿರಸ್ಕರಿಸಿ ರಾಷ್ಟ್ರಪತಿ ರಾಮನಾಥ್​ ಕೋವಿಂದ್​ ಅವರ ನಡೆಯನ್ನು ಪ್ರಶ್ನಿಸಿ ಅಪರಾಧಿ ಮುಕೇಶ್​ ಕುಮಾರ್​ ಸಿಂಗ್​ ಸಲ್ಲಿಸಿರುವ ಅರ್ಜಿಯ ತೀರ್ಪನ್ನು ಸುಪ್ರೀಂಕೋರ್ಟ್​ ಇಂದು ಪ್ರಕಟಿಸಲಿದೆ.

    ನ್ಯಾಯಮೂರ್ತಿಗಳಾದ ಆರ್​. ಭಾನುಮತಿ, ಎ.ಎಸ್​.ಬೋಪಣ್ಣ ಮತ್ತು ಅಶೋಕ್​ ಭೂಷಣ್​ ಒಳಗೊಂಡ ತ್ರಿಸದಸ್ಯ ಪೀಠವು ಅಪರಾಧಿ ಠಾಕೂರ್​ ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಲಿದ್ದು, ನಾಳೆ ಬೆಳಗ್ಗೆ 10.30ಕ್ಕೆ ತೀರ್ಪು ಪ್ರಕಟಿಸಲಿದೆ.

    ಅಪರಾಧಿಗಳಾದ ಮುಕೇಶ್​ ಕುಮಾರ್​ ಸಿಂಗ್​, ಪವನ್​ ಕುಮಾರ್​ ಗುಪ್ತ, ವಿನಯ್​ ಕುಮಾರ್​ ಶರ್ಮ ಮತ್ತು ಅಕ್ಷಯ್​ ಕುಮಾರ್​ ಸಿಂಗ್​ಗೆ ಫೆ. 1ಕ್ಕೆ ಗಲ್ಲು ಶಿಕ್ಷೆ ನಿಗದಿಯಾಗಿದೆ.

    23 ವರ್ಷದ ಪ್ಯಾರಾಮೆಡಿಕಲ್​ ವಿದ್ಯಾರ್ಥಿನಿಯನ್ನು ಡಿಸೆಂಬರ್​ 16, 2012ರಂದು ಬಾಲಾಪಾರಾಧಿ ಸೇರಿದಂತೆ ಒಟ್ಟು ಆರು ಮಂದಿ ಮೃಗೀಯವಾಗಿ ಅತ್ಯಾಚಾರವೆಸಗಿ, ಕೊಲೆಗೈದು ವಿಕೃತಿ ಮೆರೆದಿದ್ದರು. ಒಟ್ಟು ಆರು ಅಪರಾಧಿಗಳಲ್ಲಿ ರಾಮ ಸಿಂಗ್​ ತಿಹಾರ್​ ಜೈಲಿನಲ್ಲೇ 2013 ಮಾರ್ಚ್​ನಲ್ಲಿ ಪಾಪಾಪ್ರಜ್ಞೆಯಿಂದ ಆತ್ಮಹತ್ಯೆ ಮಾಡಿಕೊಂಡಿದ್ದ. ಮತ್ತೊಬ್ಬ ಬಾಲಾಪಾರಾಧಿಯನ್ನು ಅಪರಾಧ ನಡೆದ ಮೂರು ವರ್ಷಗಳ ಬಳಿಕ ಬಿಡುಗಡೆ ಮಾಡಲಾಗಿತ್ತು. (ಏಜೆನ್ಸೀಸ್​)

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts