More

    ಅರ್ಥಪೂರ್ಣ ರಾಜ್ಯೋತ್ಸವ ಆಚರಣೆಗೆ ನಿರ್ಧಾರ

    ಯಳಂದೂರು : ಈ ಬಾರಿಯ ಕನ್ನಡ ರಾಜ್ಯೋತ್ಸವವನ್ನು ಅದ್ದೂರಿಯಾಗಿ, ಅರ್ಥಪೂರ್ಣವಾಗಿ ತಾಲೂಕು ಆಡಳಿತದ ವತಿಯಿಂದ ನಡೆಸಲು ತೀರ್ಮಾನಿಸಲಾಯಿತು.
    ತಾಲೂಕು ಆಡಳಿತ ಸೌಧದ ಸಭಾಂಗಣದಲ್ಲಿ ತಹಸೀಲ್ದಾರ್ ಜಯಪ್ರಕಾಶ್ ನೇತೃತ್ವದಲ್ಲಿ ಗುರುವಾರ ಆಯೋಜಿಸಿದ್ದ ಪೂರ್ವಭಾವಿ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಯಿತು.
    ತಾಲೂಕು ಆಡಳಿತಸೌಧದ ಕಟ್ಟಡದ ಮುಂಭಾಗ ರಾಷ್ಟ್ರ ಹಾಗೂ ನಾಡ ಧ್ವಜಾರೋಹಣ ನೆರವೇರಿಸುವುದು, ವಿವಿಧ ಶಾಲಾ- ಕಾಲೇಜು, ಇಲಾಖೆಯ ವತಿಯಿಂದ ಸ್ತಬ್ಧಚಿತ್ರಗಳು, ಕಲಾತಂಡಗಳ ಮೂಲಕ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಲಾಗುವುದು. ಅಂದು ಕಡ್ಡಾಯವಾಗಿ ಎಲ್ಲ ಸರ್ಕಾರಿ ಕಚೇರಿಗಳನ್ನು ವಿದ್ಯುತ್ ದೀಪಗಳಿಂದ ಅಲಂಕರಿಸಬೇಕು. ವರ್ತಕರ ಸಂಘದ ಸಹಯೋಗದೊಂದಿಗೆ ಎಲ್ಲ ಪ್ರಮುಖ ಅಂಗಡಿ ಮುಂಗಟ್ಟುಗಳ ಮುಂಭಾಗ ಕನ್ನಡ ಬಾವುಟಗಳನ್ನು ಕಡ್ಡಾಯವಾಗಿ ಹಾರಿಸಬೇಕು. ವಿದ್ಯುತ್ ದೀಪಾಲಂಕಾರ ಮಾಡುವುದು, ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿಯಲ್ಲಿ ಕನ್ನಡ ವಿಷಯದಲ್ಲಿ ಹೆಚ್ಚಿನ ಅಂಕಗಳಿಸಿದ ವಿದ್ಯಾರ್ಥಿಗಳನ್ನು ಸನ್ಮಾನಿಸುವುದು, ಕನ್ನಡ ವಿಷಯದಲ್ಲಿ ಪ್ರಬಂಧ ಸ್ಪರ್ಧೆ ಏರ್ಪಡಿಸಿ ಆಯ್ಕೆಯಾದ ಮೂವರು ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ ಮಾಡುವುದು. ಮೈಸೂರು ಅನಂತಸ್ವಾಮಿ ಸಂಯೋಜನೆಯ ನಾಡಗೀತೆ ಹಾಡಿಸುವುದು. ವಿವಿಧ ಸಾಂಸ್ಕೃತಿಕ ಕಾರ್ಯಕ್ರಗಳನ್ನು ಹಮ್ಮಿಕೊಳ್ಳಲು ತೀರ್ಮಾನಿಸಲಾಯಿತು.
    ಇದರೊಂದಿಗೆ ಅಂದು ಎಲ್ಲ ಕಚೇರಿ ಪುರುಷ ಸಿಬ್ಬಂದಿ ಬಿಳಿ ಶರ್ಟ್ ಹಾಗೂ ಬಿಳಿ ಪಂಚೆಯುಟ್ಟು ಬರುವುದು, ಮಹಿಳೆಯರು ಸೀರೆ ಧರಿಸಿ ಬರಬೇಕು. ಎಲ್ಲ ಸಿಬ್ಬಂದಿ ಕಾರ್ಯಕ್ರಮದಲ್ಲಿ ಕಡ್ಡಾಯವಾಗಿ ಹಾಜರಿರಬೇಕು. ಇಲ್ಲವಾದಲ್ಲಿ ಅಂತಹವರ ವಿರುದ್ಧ ಕಾನೂನು ಕ್ರಮ ಜರುಗಿಸಲು ತೀರ್ಮಾನಿಸಲಾಯಿತು.

    ಪಪಂ ಸದಸ್ಯರಾದ ಮಹೇಶ್, ವೈ.ಜಿ.ರಂಗನಾಥ, ಬಿ.ರವಿ, ಇಒ ಉಮೇಶ್, ಬಿಇಒ ಕೆ.ಕಾಂತರಾಜು, ಪಿಎಸ್‌ಐ ಚಂದ್ರಹಾಸನಾಯಕ್, ಸಮಾಜ ಸೇವಕ ದುಗ್ಗಹಟ್ಟಿ ಪಿ.ವೀರಭದ್ರಪ್ಪ, ಇಸಿಒ ಶಿವಲಂಕಾರ್ ವೈ.ಎಂ.ಮಲ್ಲಿಕಾರ್ಜುನಸ್ವಾಮಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ವಿಜಯ ಸೇರಿದಂತೆ ಅನೇಕರು ಹಾಜರಿದ್ದರು.

    26ವೈಎಲ್‌ಡಿ ಚಿತ್ರ05 ಯಳಂದೂರು ಪಟ್ಟಣದ ತಹಶೀಲ್ದಾರ್ ಕಚೇರಿಯ ಸಭಾಂಗಣದಲ್ಲಿ ಗುರುವಾರ ನಡೆದ ಕನ್ನಡ ರಾಜ್ಯೋತ್ಸವದ ಪೂರ್ವಭಾವಿ ಸಭೆಯಲ್ಲಿ ತಹಶೀಲ್ದಾರ್ ಜಯಪ್ರಕಾಶ್ ಮಾತನಾಡಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts