27 ರಂದು ಕೆಂಪೇಗೌಡ ಜಯಂತಿ ಆಚರಣೆಗೆ ನಿರ್ಧಾರ

ಗುಂಡ್ಲುಪೇಟೆ: ಹುತ್ತೂರಿನಿಂದ ವಡ್ಡಗೆರೆಗೆ ನೀರು ಹರಿಸುವ ಯೋಜನೆಗೆ ಚಾಲನೆ ನೀಡುವಂತೆ ಒತ್ತಾಯಿಸಿ ರೈತರು ನಡೆಸುತ್ತಿರುವ ಆಹೋರಾತ್ರಿ ಧರಣಿ ಮೂರನೇ ದಿನಕ್ಕೆ ಕಾಲಿಟ್ಟಿದೆ.

ತಮ್ಮ ಬೇಡಿಕೆಗೆ ಸ್ಪಂದಿಸದ ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಜಿಲ್ಲಾಡಳಿತದ ವಿರುದ್ದ ಪೊರಕೆ ಪ್ರದರ್ಶಿಸುವ ಮೂಲಕ ರೈತರು ಆಕ್ರೋಶ ವ್ಯಕ್ತಪಡಿಸಿದರು.

ಜೂನ್ 19ರ ಬುಧವಾರ ಮಾಜಿ ಸಂಸದ ಆರ್.ಧ್ರುವನಾರಾಯಣ್ ಧರಣಿ ಸ್ಥಳಕ್ಕೆ ಭೇಟಿ ನೀಡಿ ಪ್ರತಿಭಟನಾಕಾರರೊಂದಿಗೆ ಮಾತನಾಡಿದರು. ಕೆರೆಗಳಿಗೆ ನೀರು ತುಂಬಿಸುವುದು ಪುಣ್ಯದ ಕೆಲಸವಾಗಿದೆ. ಸುತ್ತೂರು ಶ್ರೀಗಳು, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ದಿ.ಎಚ್.ಎಸ್.ಮಹದೇವಪ್ರಸಾದ್ ಅವರ ಆಕಾಂಕ್ಷೆಯಂತೆ ಹುತ್ತೂರು ಕೆರೆಯಿಂದ ಮುಂದುವರೆದ ಯೋಜನೆಯಲ್ಲಿ ನೆರೆಯ 11 ಕೆರೆಗಳಿಗೆ ನೀರು ತುಂಬಿಸುವ ಯೋಜನೆ ಕಾಮಗಾರಿ ಮುಗಿದಿದೆ. ಇದು ಅನುಷ್ಟಾನಗೊಂಡಲ್ಲಿ ಈ ಭಾಗದ ಅಂತರ್ಜಲ ವೃದ್ದಿಯಾಗುವ ಜತೆಗೆ ರೈತ ಹಾಗೂ ಕೂಲಿ ಕಾರ್ಮಿಕರು ನೆರೆರಾಜ್ಯಗಳಿಗೆ ವಲಸೆ ತೆರಳುವುದು ತಪ್ಪಲಿದೆ. ಆದರೆ ಕಾಮಗಾರಿ ಮುಗಿದರೂ ನೀರುಹರಿಸದಿರುವುದು ಸರಿಯಲ್ಲ. ಈ ಬಗ್ಗೆ ತಾವು ಜಿಲ್ಲಾಉಸ್ತುವಾರಿ ಸಚಿವರೊಂದಿಗೆ ಮಾತನಾಡುತ್ತೇನೆ ಎಂದರು.

ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಈ ಭಾಗದ ಕೆರೆಗಳಿಗೆ ನೀರುಹರಿಸದ ಪರಿಣಾಮ ಕಾಂಗ್ರೆಸ್ ನಿಂದ ನೀವು ಸೋಲಬೇಕಾಯಿತು. ಮುಂದಿನ ದಿನಗಳಲ್ಲಿ ಇನ್ನೂ ಗಂಭೀರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ರೈತರು ಆಕ್ರೋಶ ವ್ಯಕ್ತಪಡಿಸಿದರು.

ಈ ಬಗ್ಗೆ ನನಗೆ ಎಲ್ಲಾ ವಿಷಯಗಳೂ ಗೊತ್ತಿದ್ದು ಹೈಕಮಾಂಡ್ ಗಮನಕ್ಕೆ ತರುತ್ತೇನೆ. ನಿಮ್ಮೊಂದಿಗೆ ನಾನೂ ಇದ್ದು ನಿಮ್ಮ ಹೋರಾಟಕ್ಕೆ ನನ್ನ ಬೆಂಬಲವಿದೆ ಎಂದರು.

ಈ ಸಂದರ್ಭದಲ್ಲಿ ಹಸಿರುಸೇನೆಯ ಜಿಲ್ಲಾಧ್ಯಕ್ಷ ಹೊನ್ನೂರು ಪ್ರಕಾಶ್, ಜಿಲ್ಲಾ ಕಾರ್ಯಾಧ್ಯಕ್ಷ ಮಾಡ್ರಹಳ್ಳಿ ಮಹದೇವಪ್ಪ, ರೈತ ಸಂಘದ ತಾಲೂಕು ಅಧ್ಯಕ್ಷ ಕುಂದಕೆರೆ ಸಂಪತ್ತು, ಮುಖಂಡರಾದ ಕಡಬೂರು ಮಂಜುನಾಥ್ ಸೇರಿದಂತೆ ನೂರಾರು ರೈತ ಕಾರ್ಯಕರ್ತರು ಇದ್ದರು.

Leave a Reply

Your email address will not be published. Required fields are marked *