More

    ರಾಜ್ಯೋತ್ಸವ ವಿಭಿನ್ನವಾಗಿ ಆಚರಿಸಲು ನಿರ್ಧಾರ

    ಕಲಘಟಗಿ: ಕನ್ನಡ ಸಾಹಿತ್ಯ ಪರಿಷತ್ತು ತಾಲೂಕು ಘಟಕದ ವತಿಯಿಂದ ಈ ಬಾರಿಯ ಕನ್ನಡ ರಾಜ್ಯೋತ್ಸವ ವಿಭಿನ್ನ-ವಿಶಿಷ್ಟವಾಗಿ ಆಚರಿಸಲು ನಿರ್ಧರಿಸಲಾಗಿದೆ ಎಂದು ಕಸಾಪ ತಾಲೂಕಾಧ್ಯಕ್ಷ ಐ.ವಿ. ಜವಳಿ ಹೇಳಿದರು.

    ಪಟ್ಟಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರತಿವರ್ಷವೂ ಕನ್ನಡ ರಾಜ್ಯೋತ್ಸವ ವಿಜೃಂಭಣೆಯಿಂದ ಆಚರಿಸುತ್ತ ಬರಲಾಗಿದೆ. ಕರ್ನಾಟಕ ಹೆಸರು ನಾಮಕರಣಗೊಂಡು 50 ವರ್ಷ ತುಂಬಿದ ಹಿನ್ನೆಲೆ ನವೆಂಬರ್ ತಿಂಗಳುಪೂರ್ತಿ ಕನ್ನಡ ಪರ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ. ತಾಲೂಕಿನ ಪ್ರಾಥಮಿಕ-ಪ್ರೌಢ ಶಾಲೆ ಮತ್ತು ಕಾಲೇಜ್​ಗಳಲ್ಲಿ ವಿದ್ಯಾರ್ಥಿಗಳಿಗೆ ಕನ್ನಡ ಸಾಹಿತ್ಯದ ಇತಿಹಾಸ, ಪರಂಪರೆ, ಸಾಹಿತ್ಯದ ಘಟ್ಟಗಳ ಕುರಿತು ವಿವಿಧ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ ಎಂದು ವಿವರಿಸಿದರು.

    ನಿಕಟಪೂರ್ವ ಸಮ್ಮೇಳನ ಅಧ್ಯಕ್ಷ ವೈ.ಜಿ. ಭಗವತಿ, ಗೌರವ ಕಾರ್ಯದರ್ಶಿ ಪರಮಾನಂದ ಒಡೆಯರ, ತಾಲೂಕು ಕಸಾಪ ಸಮಿತಿ ಗೌರವ ಕೋಶಾಧ್ಯಕ್ಷ ರಮೇಶ ಸೋಲಾರಗೊಪ್ಪ, ಅಣ್ಣಪ್ಪ ಓಲೇಕಾರ, ವಿ.ಎಸ್. ನಾಗಲೋಟಿಮಠ, ರಾಜು ಲಮಾಣಿ, ಎ.ಎಂ. ಅತ್ತಾರ, ಶಿವಕಲ್ಲಪ್ಪ ಬಾಗಲಕೋಟಿ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts