More

    ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಅದ್ದೂರಿಯಾಗಿ ಆಚರಿಸಲು ತೀರ್ಮಾನ

    ಕೊಳ್ಳೇಗಾಲ: ಪಟ್ಟಣದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಮಂಗಳವಾರ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ ಕುರಿತ ಪೂರ್ವಭಾವಿ ಸಭೆ ಶಾಸಕ ಎ.ಆರ್.ಕೃಷ್ಣಮೂರ್ತಿ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.

    ಜಯಂತಿ ಆಚರಣೆ ಬಗ್ಗೆ ಅಭಿಪ್ರಾಯ ವ್ಯಕ್ತಪಡಿಸಿದ ನಾಯಕ ಸಮುದಾಯದ ಮುಖಂಡರು, ಕೋವಿಡ್ ಹಿನ್ನೆಲೆಯಲ್ಲಿ ಕಳೆದ ನಾಲ್ಕು ವರ್ಷಗಳಿಂದ ಮಹರ್ಷಿ ವಾಲ್ಮೀಕಿ ಅವರ ಜಯಂತಿಯನ್ನು ಸರಳವಾಗಿ ಆಚರಣೆ ಮಾಡಲಾಗಿತ್ತು. ಈ ಹಿನ್ನೆಲೆಯಲ್ಲಿ ಅದ್ದೂರಿಯಾಗಿ ಮಾಡಬೇಕೆಂಬುದು ನಮ್ಮ ಸಮುದಾಯ ಜನರ ಆಶಯವಾಗಿದೆ. ಈ ಬಗ್ಗೆ ಶುಕ್ರವಾರ ಗಡಿ ಮನೆ, ಕಟ್ಟೆ ಮನೆ ಹಾಗೂ ಕಸಬಾ ಯಜಮಾನರ ಸಮ್ಮುಖದಲ್ಲಿ ಸಭೆ ನಡೆಸಿ ಕಾರ್ಯಕ್ರಮ ರೂಪುರೇಷೆಗಳ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು ಎಂದು ಹೇಳಿದರು.

    ಶಾಸಕ ಎ.ಆರ್.ಕೃಷ್ಣಮೂರ್ತಿ ಮಾತನಾಡಿ, ರಾಷ್ಟ್ರೀಯ ಹಬ್ಬಗಳ ಆಚರಣೆಗಾಗಿ ಸರ್ಕಾರ ನೀಡುವ ಹಣವು ಇತಿಮಿತಿ ಒಳಗಿರುತ್ತದೆ. ವರ್ಷಕ್ಕೆ 35 ಜಯಂತಿಗಳನ್ನು ಸರ್ಕಾರದಿಂದಲೇ ಆಚರಣೆ ಮಾಡಲಾಗುತ್ತದೆ. ಕಳೆದ ನಾಲ್ಕು ವರ್ಷಗಳಿಂದ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆಯನ್ನು ಸರಳವಾಗಿ ಮಾಡಲಾಗಿತ್ತು. ಈ ಹಿನ್ನೆಲೆಯಲ್ಲಿ ನಾಯಕ ಸಮುದಾಯ ಗಡಿ, ಕಟ್ಟೆ ಹಾಗೂ ಕಸಬಾ ಯಜಮಾನರು ಸಭೆಯಲ್ಲಿ ಕೈಗೊಂಡ ತೀರ್ಮಾನ ತಿಳಿಸಬೇಕು. ಈ ಬಾರಿ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಗೌರವಯುತವಾಗಿ ಹಾಗೂ ಯಶಸ್ವಿಯಾಗಿ ಮಾಡೋಣ. ಕಾರ್ಯಕ್ರಮಕ್ಕೆ ಬಂದವರಿಗೆ ಉಪಾಹಾರ ವ್ಯವಸ್ಥೆ ಮಾಡಬೇಕು ಎಂದು ಸೂಚಿಸಿದರು.

    ರಾಷ್ಟೀಯ ಹಬ್ಬಗಳ ಆಚರಣಾ ಸಮಿತಿ ತಾಲೂಕು ಅಧ್ಯಕ್ಷೆ ಹಾಗೂ ತಹಸೀಲ್ದಾರ್ ಮಂಜುಳಾ ಮಾತನಾಡಿ, ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಸರ್ಕಾರ ನೀಡಿರುವ ಅನುದಾನಕ್ಕೆ ಸೀಮಿತ, ವ್ಯವಸ್ಥಿತವಾಗಿ ಮಾಡಬೇಕು. ಆದ್ದರಿಂದ ಬಹಿರಂಗ ಮೆರವಣಿಗೆ ಕಾರ್ಯಕ್ರಮಕ್ಕೆ ಸಮುದಾಯ ಜನರು ಸಹಕಾರ ನೀಡಬೇಕು. ವೇದಿಕೆಯ ಕಾರ್ಯಕ್ರಮಮವನ್ನು ಅಚ್ಚುಕಟ್ಟಾಗಿ ತಾಲೂಕು ಆಡಳಿತ ಮಾಡುತ್ತದೆ ಎಂದರು.

    ತಾಪಂ ಇಒ ಶ್ರೀನಿವಾಸ್, ಬಿಇಒ ಮಂಜುಳಾ, ಪರಿಶಿಷ್ಟ ವರ್ಗ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ನವೀನ್‌ಕುಮಾರ್, ನಾಯಕ ಸಂಘದ ತಾಲೂಕು ಅಧ್ಯಕ್ಷ ಜಗದೀಶ್, ಮುಖಂಡರಾದ ಕೊಪ್ಪಾಳಿ ಮಹದೇವನಾಯಕ, ಚಿಕ್ಕಮಾದು ನಾಯಕ, ಪಾಳ್ಯ ಕೃಷ್ಣ, ಸುಂದರ್ ನಾಯಕ, ಶಂಕರ್, ಮಂಜು ಗಡಿ ಮನೆ, ಕಟ್ಟೆಮನೆ ಹಾಗೂ ಕಸಬಾ ಯಜಮಾನರು, ವಿವಿಧ ಸಂಘಸಂಸ್ಥೆಯ ಪದಾಧಿಕಾರಿಗಳು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts