ವಿಜಯಪುರ: ಜಿಲ್ಲಾಡಳಿತದಿಂದ ನಗರದ ಕಂದಗಲ್ಲ ಹನುಂತರಾಯ ರಂಗಮಂದಿರದಲ್ಲಿ ಸೆ. 17 ರಂದು ವಿಶ್ವಕರ್ಮ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲು ನಿರ್ಧರಿಸಲಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ತಿಳಿಸಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ವಿಶ್ವಕರ್ಮ ಜಯಂತಿ ಅಂಗವಾಗಿ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಸೆ. 17ರಂದು ಬೆಳಗ್ಗೆ 9.30ಕ್ಕೆ ಶ್ರೀ ಸಿದ್ಧೇಶ್ವರ ದೇವಸ್ಥಾನದಿಂದ ವಿವಿಧ ಕಲಾತಂಡದೊಂದಿಗೆ ವಿಶ್ವಕರ್ಮ ಅವರ ಭಾವಚಿತ್ರದ ಮೆರವಣಿಗೆಗೆ ಚಾಲನೆ ನೀಡಲಾಗುವುದು.
ಮೆರವಣಿಗೆ ನಗರದ ಗಾಂಧಿ ವೃತ್ತ, ಬಸವೇಶ್ವರ ವೃತ್ತ, ಡಾ. ಬಿ.ಆರ್. ಅಂಬೇಡ್ಕರ ವೃತ್ತ, ಕನಕದಾಸ ವೃತ್ತಗಳನ್ನು ಸಂಚರಿಸಿ ರಂಗಮಂದಿರ ಸೇರಲಿದೆ. ನಂತರ 10.30 ಕ್ಕೆ ರಂಗಮಂದಿರದಲ್ಲಿ ವಿಶ್ವಕರ್ಮ ಜಯಂತಿ ವೇದಿಕೆ ಕಾರ್ಯಕ್ರಮ ನಡೆಯಲಿದ್ದು, ಕಾರ್ಯಕ್ರಮದಲ್ಲಿ ಉಪನ್ಯಾಸ, ಸುಗಮ ಸಂಗೀತ ಕಾರ್ಯಕ್ರಮ ಹಮ್ಮಿಕೊಳ್ಳಲು ರ್ನಿಣಯಿಸಲಾಗಿದೆ ಎಂದು ಹೇಳಿದರು.
ಜಯಂತಿ ಹಿನ್ನೆಲೆಯಲ್ಲಿ ನಗರದ ವಿವಿಧ ವೃತ್ತಗಳಿಗೆ ಸ್ವಚ್ಚತೆ ಹಾಗೂ ದೀಪಾಲಂಕಾರಗೊಳಿಸುವಂತೆ ಮಹಾನಗರ ಪಾಲಿಕೆ ಅಧಿಕಾರಿಗಳಿಗೆ ಸೂಚಿಸಿದರು. ಶಿಷ್ಟಾಚಾರದಂತೆ ಆಮಂತ್ರಣ ಪತ್ರಿಕೆ ಮುದ್ರಿಸುವುದು, ವೇದಿಕೆ ಮತ್ತು ಮೂಲ ಸೌಲಭ್ಯಗಳ ವ್ಯವಸ್ಥೆ ಕಲ್ಪಿಸಲು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ತಹಸೀಲ್ದಾರ ಐ.ಎಚ್. ತುಂಬಗಿ, ಪಾಲಿಕೆ ಉಪ ಆಯುಕ್ತ ವೈ.ಎಸ್. ನಾರಾಯಣಕರ, ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಶಿವನಗೌಡ ಪಾಟೀಲ, ಕನ್ನಡ ಮತ್ತು ಸಂಸತಿ ಇಲಾಖೆ ಸಹಾಯಕ ನಿರ್ದೇಶಕ ಸಂತೋಷ ಭೋವಿ, ಮಹೇಂದ್ರ ಸ್ವಾಮೀಜಿ, ಶ್ರೀಕಾಂತ ಕುಂದನಗಾರ, ಬಾಳು ಗಿರಗಾಂವಕರ, ಪ್ರಮೋದ ಬಡಿಗೇರ, ಈರಣ್ಣ ಪತ್ತಾರ, ಸಂತೋಷ ವಿಶ್ವಕರ್ಮ, ಪ್ರದಿಪ ಪತ್ತಾರ, ಮನೋಹರ ಪತ್ತಾರ, ಮಹೇಶ ಕೆಂದೂರ, ವಿನೋದ ಪತ್ತಾರ, ಮೌನೇಶ ಪತ್ತಾರ, ಮುಕುಂದ ಕುಂದನಗಾರ, ಶಾರದಾ ಪತ್ತಾರ, ಸುನಂದ ವಿಶ್ವಕರ್ಮ, ಮೀನಾ ಕುಂದನಗಾರ, ಮಂಜುನಾಥ ಪತ್ತಾರ, ಸೋಮನಗೌಡ ಕಲ್ಲೂರ, ದೇವೇಂದ್ರ ಮೀರೆಕರ, ವಿವಿಧ ಇಲಾಖೆ ಅಧಿಕಾರಿ, ಸಿಬ್ಬಂದಿ ಇದ್ದರು.