More

  ಕಾನೂನು ಬದ್ಧವಾಗಿ ಹರಾಜು ನಡೆಸಲು ತೀರ್ಮಾನ

  ಸುಂಟಿಕೊಪ್ಪ : ಸುಂಟಿಕೊಪ್ಪ ಗ್ರಾಮ ಪಂಚಾಯಿತಿ ಹೊರಡಿಸಿರುವ ಮಾಂಸ ಮಾರಾಟ ಮಳಿಗೆಗಳ ಹರಾಜು ಪ್ರಕ್ರಿಯೆ ಕಾನೂನು ಬದ್ಧವಾಗಿದ್ದು ಅದರಂತೆ ಮುಂದುವರಿಯುತ್ತೇವೆ ಎಂದು ಸುಂಟಿಕೊಪ್ಪ ಗ್ರಾಮ ಪಂಚಾಯಿತಿ ಅಧ್ಯಕ್ಷ ಪಿ.ಆರ್.ಸುನಿಲ್‌ಕುಮಾರ್ ಹೇಳಿದ್ದಾರೆ.

  ಬುಧವಾರ ಹಮ್ಮಿಕೊಂಡಿದ್ದ ಸುಂಟಿಕೊಪ್ಪ ಗ್ರಾಮ ಪಂಚಾಯಿತಿ ಸರ್ವ ಸದಸ್ಯರ ಸಭೆಯಲ್ಲಿ ಮಾತನಾಡಿದ ಅವರು, ಸಭೆಯಲ್ಲಿ ಮಾಂಸ ಮಾರಾಟ ಮಳಿಗೆಗಳ ಹರಾಜು ಪ್ರಕ್ರಿಯೆಯನ್ನು ಕಾನೂನು ಬದ್ಧವಾಗಿ ಮುಂದುವರಿಸಲು ತೀರ್ಮಾನಿಸಲಾಯಿತು. ಹಳಬರು ಮತ್ತು ಹೊಸಬರು ಎಂಬುದು ಹರಾಜು ಪ್ರಕ್ರಿಯೆಯಲ್ಲಿ ಇಲ್ಲ. ಬದಲಾಗಿ ಟೆಂಡರ್ ಪ್ರಕ್ರಿಯೆಯಲ್ಲಿ ಪಾಲ್ಗೊಂಡವರಿಗೆ ಸಮಾನ ಅವಕಾಶ ಮತ್ತು ಹಕ್ಕುಗಳು ಇರುತ್ತವೆ ಎಂದು ಸುನಿಲ್‌ಕುಮಾರ್ ಸ್ಪಷ್ಟವಾಗಿ ತಿಳಿಸಿದರು.

  ಸದಸ್ಯ ರಫೀಕ್ ಖಾನ್ ಮಾತನಾಡಿ, ಟೆಂಡರ್ ಪ್ರಕ್ರಿಯೆ ಪಾರದರ್ಶಕವಾಗಿಲ್ಲ. ಅಧ್ಯಕ್ಷರು ಮತ್ತು ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ತಮ್ಮ ಮೂಗಿನ ನೇರಕ್ಕೆ ಟೆಂಡರ್ ಪ್ರಕ್ರಿಯೆ ಮಾಡಿದ್ದು, ಇಲ್ಲಿ ಪಂಚಾಯಿತಿಗೆ ನೇರವಾಗಿ ಹಣ ಪಾವತಿಸುವವರು ಬೇಕಾಗಿಲ್ಲ. ಬದಲಾಗಿ ಅಡ್ಡ ದಾರಿಯಲ್ಲಿ ಹಣ ಸಂಪಾದನೆ ಮಾಡಿಕೊಳ್ಳುವವರು ಬೇಕಾಗಿದ್ದಾರೆ ಎಂದು ನೇರವಾಗಿ ಆರೋಪಿಸಿದರು.

  ಸಾಕಷ್ಟು ಚರ್ಚೆಯ ಬಳಿಕ ತಾಲೂಕು ಕಾರ್ಯನಿರ್ವಹಣಾಧಿಕಾರಿ ಜಯಣ್ಣ ಮಾತನಾಡಿ, ಈಗಾಗಲೇ ಹರಾಜು ಪ್ರಕ್ರಿಯೆಯನ್ನು ಕಾನೂನು ಬದ್ಧವಾಗಿ ಮಾಡಿದ್ದು, ಅದರಂತೆ ಮುಂದುವರಿಯಲಾಗುವುದೆಂದು ಪ್ರಕಟಿಸಿದರು.

  ಮಂಗಳವಾರ ಸಂಜೆ ನಡೆದಿದ್ದ ಸಭೆಯಲ್ಲಿ ಸದಸ್ಯರು ಹಾಗೂ ಅಧಿಕಾರಿಗಳ ನಡುವೆ ಮಾತಿನ ಚಕಮಕಿ ನಡೆದಿತ್ತು. ಈ ಹಿನ್ನೆಲೆಯಲ್ಲಿ ಸಭೆಯನ್ನು ಬುಧವಾರಕ್ಕೆ ಮುಂದೂಡಲಾಗಿತ್ತು. ಮುನ್ನೆಚ್ಚರಿಕಾ ಕ್ರಮವಾಗಿ ಕುಶಾಲನಗರ ಸರ್ಕಲ್ ಇನ್‌ಸ್ಪೆಕ್ಟರ್ ರಾಜೇಶ್ ಕೋಟ್ಯಾನ್, ಠಾಣಾಧಿಕಾರಿ ಎಂ.ಸಿ.ಶ್ರೀಧರ್, ನಾಲ್ವರು ಎಎಸ್‌ಐ ಸಹಿತ ಬಿಗಿ ಭದ್ರತೆ ಕೈಗೊಳ್ಳಲಾಗಿತ್ತು.

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts