ಚಿಕ್ಕಮಗಳೂರು: ಮೆಸ್ಕಾಂ ನಿಂದ ತುರ್ತು ವಿದ್ಯುತ್ ಕಾಮಗಾರಿ ನಿರ್ವಹಿಸಲು ಶೇ. 45ರಷ್ಟು ನಿಗದಿಪಡಿಸಿದ್ದ ಎಸ್‌ಆರ್ ದರವನ್ನು ಶೇ.12 ಕ್ಕೆ ಇಳಿಸಿರುವ ಸರ್ಕಾರದ ನಿರ್ಧಾರ ವಿರೋಧಿಸಿ ತುರ್ತು ಕಾಮಗಾರಿಗಳನ್ನು ಸ್ಥಗಿತಗೊಳಿಸಲು ನಿರ್ಧರಿಸಲಾಗಿದೆ ಎಂದು ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘದ ಜಿಲ್ಲಾಧ್ಯಕ್ಷ ಆರ್.ಹರೀಶ್ ತಿಳಿಸಿದರು.
ನಗರದ ಪ್ರೆಸ್‌ಕ್ಲಬ್‌ನಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯಾದ್ಯಂತ ಗಾಳಿ-ಮಳೆ ಬರುವ ಸಂದರ್ಭದಲ್ಲಿ ವಿದ್ಯುತ್ ಕಂಬಗಳು ಹಾನಿಯಾಗಿ ಮುರಿದು ಬಿದ್ದಾಗ ಇದರ ದುರಸ್ತಿಗೆ ಎಸ್‌ಆರ್ ದರದಂತೆ ಪ್ರತಿ ಕಂಬಕ್ಕೆ 6 ಸಾವಿರ ರೂ.ಗಳನ್ನು ನೀಡುತ್ತಿದ್ದರು. ಈಗ ಅದನ್ನು ಮೂರು ಸಾವಿರ ರೂ.ಗೆ ಇಳಿಸಿರುವ ಸರ್ಕಾರದ ಕ್ರಮ ವಿರೋಧಿಸಿ ನಿನ್ನೆಯಿಂದ ಬ್ರೇಕ್‌ಡೌನ್ ಕಾಮಗಾರಿಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲು ತೀರ್ಮಾನಿಸಲಾಗಿದೆ ಎಂದರು.
ಹಿಂದೆ ಇದೇ ಕಾಮಗಾರಿಗೆ 6000 ಸಾವಿರ ರೂ.ಗಳನ್ನು ನೀಡುತ್ತಿದ್ದು, ಈಗ ವಿದ್ಯುತ್ ಕಂಬ ಮುರಿದುಬಿದ್ದ ತುರ್ತು ಕಾಮಗಾರಿ ಕೈಗೊಳ್ಳಲು ಸರ್ಕಾರ 3000 ರೂ. ನಿಗದಿಪಡಿಸಿದೆ. ಆದರೆ ಕಾರ್ಮಿಕರ ವೇತನವೂ ಹೆಚ್ಚಳವಾಗಿದ್ದು, ಗುತ್ತಿಗೆದಾರರು ನಷ್ಟ ಅನುಭವಿಸುವಂತಾಗಿದೆ. ಹೀಗಾಗಿ ಕೂಡಲೇ ಹಿಂದಿನ ಎಸ್‌ಆರ್ ದರಂದತೆ ಬಿಲ್ ಪಾವತಿಸಬೇಕು ಎಂದು ಒತ್ತಾಯಿಸಿದರು.
ಈ ಸಂಬಂಧ ಎಲ್ಲ ಗುತ್ತಿಗೆದಾರರಿಗೆ ಆಗುತ್ತಿರುವ ತೊಂದರೆ ನೀಗಿಸುವಂತೆ ಸಚಿವರಿಗೆ ಮನವಿ ನೀಡಿ 15 ದಿನಗಳ ಕಾಲಾವಕಾಶ ನೀಡಲಾಗಿತ್ತು. ಆದರೆ ಇದೂವರೆಗೆ ಯಾವುದೇ ಕ್ರಮ ಕೈಗೊಳ್ಳದಿರುವುದರಿಂದ ಬ್ರೇಕ್‌ಡೌನ್ ಕಾಮಗಾರಿಗಳನ್ನು ಸ್ಥಗಿತಗೊಳಿಸುವುದು ಅನಿವಾರ್ಯವಾಗಿದೆ ಎಂದು ಹೇಳಿದರು.
ಮಲೆನಾಡು ಭಾಗದಲ್ಲಿ ಮಳೆಗಾಲದ ಸಂದರ್ಭದಲ್ಲಿ ವಿದ್ಯುತ್ ಕಂಬಗಳು ಮುರಿದು ಬೀಳುತ್ತಿದ್ದು, ವಿದ್ಯುತ್ ಗುತ್ತಿಗೆದಾರರು ಕಾಮಗಾರಿ ನಿರ್ವಹಿಸಿ ಗ್ರಾಹಕರಿಗೆ ವಿದ್ಯುತ್ ಸಂಪರ್ಕ ನೀಡಲು ನೆರವಾಗುತ್ತಿದ್ದಾರೆ. ಗ್ರಾಮೀಣ ಪ್ರದೇಶಗಳಲ್ಲಿ ವಿದ್ಯುತ್ ಗುತ್ತಿಗೆದಾರರು ಸ್ವಂತ ನಿರ್ವಹಣೆಯಲ್ಲಿ ಐಪಿ ಸೆಟ್ ಕಾಮಗಾರಿಗಳಿಗೆ 4 ಸ್ಟಾರ್ ಪರಿವರ್ತಕಗಳನ್ನು ಅಳವಡಿಸಲು ನಿರ್ದೇಶನವಿದ್ದರೂ ಅಧಿಕಾರಿಗಳು 5 ಸ್ಟಾರ್ ಪರಿವರ್ತಕಗಳನ್ನು ಅಳವಡಿಸಬೇಕು ಎಂದು ಒತ್ತಾಯಿಸುತ್ತಾರೆ ಎಂದು ದೂರಿದರು.
ಹಿಂದಿನ ಎಸ್‌ಆರ್ ದರದಂತೆ ಪ್ರತಿ ಕಂಬ ದುರಸ್ತಿಗೆ 6000 ರೂಗಳನ್ನು ನೀಡುವುದಾಗಿ ಅದೇಶಿಸುವವರೆಗೆ ಬ್ರೇಕ್‌ಡೌನ್ ಕಾಮಗಾರಿಗಳನ್ನು ನಡೆಸುವುದಿಲ್ಲ ಎಂದು ಸಂಘ ತೀರ್ಮಾನಿಸಿರುವುದಾಗಿ ಹೇಳಿದರು.
ಕೇಂದ್ರ ಸಮಿತಿ ಕಾರ್ಯಕಾರಿ ಸಮಿತಿ ಸದಸ್ಯ ಎಂ.ರಮೇಶ್, ಜಿಲ್ಲಾ ಗೌರವ ಸಂಘಟನಾ ಕಾರ್ಯದರ್ಶಿ ಕೆ.ಎಸ್.ಕಾಂತಕುಮಾರ್, ಶಶಿ, ಕಾಂತರಾಜ್, ಸಮೀರ್ ಮತ್ತಿತರರಿದ್ದರು.
ತುರ್ತು ಕಾಮಗಾರಿ ಸ್ಥಗಿತಗೊಳಿಸಲು ನಿರ್ಧಾರ
You Might Also Like
Skin care: ಕಣ್ಣುಗಳ ಕೆಳಗಿರುವ ಚರ್ಮ ಸುಕ್ಕುಗಟ್ಟಿದೆಯೇ? ಹೀಗೆ ಮಾಡಿ..
ಕಣ್ಣುಗಳು(Skin care) ಸೂಕ್ಷ್ಮ ಅಂಗಗಳಾಗಿದ್ದು, ಅವುಗಳ ಕೆಳಗಿರುವ ಚರ್ಮವು ಸಹ ಸೂಕ್ಷ್ಮವಾಗಿರುತ್ತದೆ. ಬಿಸಿಲು, ಪೌಷ್ಠಿಕ ಆಹಾರದ…
Health Tips : ಮೆಟ್ಟಿಲು ಹತ್ತುವಾಗ ಸುಸ್ತಾಗುತ್ತದಾ..! ಈ ಸಲಹೆಗಳನ್ನು ಅನುಸರಿಸಿ
ಬೆಂಗಳೂರು: ಮೆಟ್ಟಿಲು ಹತ್ತುವಾಗ ಉಸಿರಾಟದ ತೊಂದರೆ ಸಾಮಾನ್ಯ. ಈ ಸಮಸ್ಯೆಯು ವಯಸ್ಸಾದಂತೆ ಹೆಚ್ಚಾಗುತ್ತಿದೆ, ಆದರೆ ಇತ್ತೀಚಿನ…
ಎಷ್ಟು ಪ್ರಮಾಣದಲ್ಲಿ ಉಪ್ಪು ಸೇವಿಸಿದ್ರೆ ಆರೋಗ್ಯಕ್ಕೆ ತುಂಬಾ ಡೇಂಜರ್? ಇಲ್ಲಿದೆ ಉಪಯುಕ್ತ ಮಾಹಿತಿ… Salt
ಊಟಕ್ಕೆ ಉಪ್ಪು ( Salt ) ತುಂಬಾನೇ ಅವಶ್ಯಕವಾಗಿದ್ದರೂ ಅದು ಆರೋಗ್ಯ ( Health )…