

ವಿಜಯವಾಣಿ ಸುದ್ದಿಜಾಲ ಬೆಳ್ತಂಗಡಿ
ಗ್ರಾಮೀಣ ಭಾಗದ ವಿದ್ಯಾರ್ಥಿಗಳ ಶಿಕ್ಷಣದ ದೃಷ್ಟಿಯಿಂದ ವಸತಿ ನಿಲಯ ನಿರ್ಮಾಣವಾಗಿದ್ದು, ಇದು ಅನೇಕರಿಗೆ ಸಹಕಾರಿಯಾಗಲಿದೆ. ಇಂದು ಹೆಣ್ಣುಮಕ್ಕಳಿಗೆ ಸಾಕಷ್ಟು ಅವಕಾಶಗಳನ್ನು ಸರ್ಕಾರ ನೀಡುತ್ತಿದೆ. ಮಹಿಳೆಯರು ಮುಂಚೂಣಿಯಲ್ಲಿರುವುದು ಸ್ವಾಗತಾರ್ಹ. ಅವರು ಸರಿಸವಾನರಾಗಿ ಸಮಾಜದ ಮುಂದೆ ಬದುಕನ್ನು ರೂಪಿಸಿಕೊಳ್ಳುತ್ತಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.
ಮಡಂತ್ಯಾರಿನ ಸಬರಬೈಲಿನಲ್ಲಿ 3.50 ಕೋಟಿ ರೂ. ಅನುದಾನದಲ್ಲಿ ನಿರ್ಮಾಣವಾದ ಹಿಂದುಳಿದ ವರ್ಗಗಳ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿನಿಲಯ ಶನಿವಾರ ಲೋಕಾರ್ಪಣೆಗೊಳಿಸಿ ಮಾತನಾಡಿದರು.
ಶಾಸಕ ಹರೀಶ್ ಪೂಂಜ ಅಧ್ಯಕ್ಷತೆ ವಹಿಸಿದ್ದರು. ವಿಧಾನಪರಿಷತ್ ಸದಸ್ಯ ಮಂಜುನಾಥ್ ಭಂಡಾರಿ, ಗೇರು ಅಭಿವೃದ್ಧಿ ನಿಗಮ ಅಧ್ಯಕ್ಷೆ ಮಮತಾ ಡಿ.ಎಸ್.ಗಟ್ಟಿ, ಕರ್ನಾಟಕ ಪರಿಸರ ಮತ್ತು ಪ್ರವಾಸೋಧ್ಯಮ ಅಭಿವೃದ್ಧಿ ಮಂಡಳಿ ಅಧ್ಯಕ್ಷೆ ಶಾಲೆಟ್ ಪಿಂಟೋ, ರಾಜ್ಯ ಬೀಜ ಮತ್ತು ಸಾವಯವ ಪ್ರಮಾಣ ಸಂಸೆ ಅಧ್ಯಕ್ಷೆ ಲಾವಣ್ಯ ಬಲ್ಲಾಳ್ ಜೈನ್, ಜಿಲ್ಲಾ ಮುಖ್ಯ ಕಾರ್ಯನಿರ್ವಹಣಾಧಿಕಾರಿ ನರ್ವಡೆ ವಿನಾಯಕ್ ಕಾರ್ಭಾರಿ, ಜಿಲ್ಲಾ ಕೆಡಿಪಿ ಸದಸ್ಯ ಸಂತೋಷ್ ಕುಮಾರ್ ಲಾಲ, ತಾಲೂಕು ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಅಧ್ಯಕ್ಷ ಪದ್ಮನಾಭ್ ಸಾಲ್ಯಾನ್ ಮಾಲಾಡಿ, ಮಲಾಡಿ ಗ್ರಾಪಂ ಅಧ್ಯಕ್ಷ ಪುನೀತ್ ಕುಮಾರ್, ಮಡಂತ್ಯಾರು ಗ್ರಾಪಂ ಅಧ್ಯಕ್ಷೆ ರೂಪಾ ನವೀನ್, ಮಡಂತ್ಯಾರು ಸಿಎ ಬ್ಯಾಂಕ್ ಅಧ್ಯಕ್ಷ ಜೋಯಲ್ ಮೆಂಡೋನ್ಸಾ, ಜಿಲ್ಲಾ ನಿರ್ಮಿತಿ ಕೇಂದ್ರ ಕಾರ್ಯನಿರ್ವಾಹಕ ರಾಜೇಂದ್ರ ಕಲ್ಬಾನಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾಧಿಕಾರಿ ಬಿಂದಿಯಾ ಎನ್.ನಾಯಕ, ತಾಪಂ ಇಒ ಭವಾನಿಶಂಕರ್ ಎನ್., ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ, ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಅಧ್ಯಕ್ಷ ನಾಗೇಶ್ ಕುಮಾರ್ ಗೌಡ ಮೊದಲಾದವರಿದ್ದರು. ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಜೋಸೆಫ್ ಪಿ.ಎಸ್. ಸ್ವಾಗತಿಸಿದರು. ಶಿಕ್ಷಕ ಅಜಿತ್ ಕೊಕ್ರಾಡಿ ನಿರೂಪಿಸಿದರು.
ತಾಲೂಕಿಗೆ ಇನ್ನೂ 5 ವಿದ್ಯಾರ್ಥಿನಿಲಯದ ಅವಶ್ಯಕತೆಯಿದ್ದು, ಸಚಿವರ ಒದಗಿಸಬೇಕು ಹಾಗೂ ಲೋಕಾರ್ಪಣೆಗೊಂಡ ವಿದ್ಯಾರ್ಥಿನಿಲಯದ ತಡೆಗೋಡೆ ರಚನೆಗೆ ಶಾಸಕರ ನಿಧಿಯಿಂದ 10 ಲಕ್ಷ ರೂ. ಅನುದಾನ ನೀಡಲಾಗವುದು. ಹರೀಶ್ ಪೂಂಜ ಶಾಸಕ
ಪ್ರಮುಖರಿಗೆ ಸನ್ಮಾನ
ಶಾಸಕ ಹರೀಶ್ ಪೂಂಜ ಹಾಗೂ ಕಟ್ಟಡ ನಿರ್ಮಾಣದ ಗುತ್ತಿಗೆದಾರ ಪ್ರಶಾಂತ್ ಪಾರೆಂಕಿ, ದೀಕ್ಷಿತ್ ಕುಮಾರ್ ಹಾಗೂ ನಿರ್ಮಿತ್ ಕೇಂದ್ರದ ಅಭಿಯಂತ ನವೀನ್ ಹಾಗೂ ಮಲಾಡಿ ಗ್ರಾ.ಪಂ.ಸದಸ್ಯ ಬೇಬಿ ಸುವರ್ಣ ಅವರನ್ನು ಸನ್ಮಾನಿಸಲಾಯಿತು.