More

    ಗ್ಯಾರಂಟಿಯಿಂದ ಅನುದಾನ ಕಡಿತ

    ಬೇಲೂರು: ಗ್ರಾಮಗಳು ಅಭಿವೃದ್ಧಿಯಾದರೆ ಮಾತ್ರ ದೇಶ ಅಭಿವೃದ್ಧಿ ಪಥದತ್ತ ಸಾಗಲು ಸಾಧ್ಯ. ಆದ್ದರಿಂದ ಪ್ರತಿಯೊಬ್ಬರೂ ಗ್ರಾಮದ ಅಭಿವೃದ್ಧಿಗೆ ಕೈ ಜೋಡಿಸಬೇಕು ಎಂದು ಶಾಸಕ ಎಚ್.ಕೆ.ಸುರೇಶ್ ಸಲಹೆ ನೀಡಿದರು.

    ತಾಲೂಕಿನ ಕೋಗಿಲಮನೆ ಗ್ರಾಮ ಪಂಚಾಯಿತಿಯಲ್ಲಿ ಶನಿವಾರ ಆಯೋಜಿಸಿದ್ದ 2023ನೇ ಸಾಲಿನ ಮೊದಲ ಗ್ರಾಮ ಸಭೆ ಉದ್ಘಾಟಿಸಿ ಮಾತನಾಡಿದರು.
    ಸರ್ಕಾರ ಗ್ರಾಮೀಣ ಭಾಗದ ಅಭಿವೃದ್ಧಿಗೆ ಹಲವು ಕಾರ್ಯಕ್ರಮಗಳನ್ನು ಆಯೋಜಿಸಿದೆ. ಗ್ರಾಮ ಪಂಚಾಯಿತಿಗಳಿಗೆ ಕೇಂದ್ರ ಸರ್ಕಾರದ ನರೇಗಾ, 15ನೇ ಹಣಕಾಸು ಯೋಜನೆ, ಸ್ವಚ್ಛಭಾರತ್ ಮಿಷನ್, ಎನ್‌ಆರ್‌ಎಲ್‌ಎಂ ಹೀಗೆ ಹಲವು ಜನಪ್ರಿಯ ಕಾರ್ಯಕ್ರಮಗಳನ್ನು ಜಾರಿಗೊಸಿದೆ. ಕೇಂದ್ರ ಸರ್ಕಾರದ ಈ ಕಾರ್ಯಕ್ರಮಗಳನ್ನು ನೇರವಾಗಿ ಫಲಾನುಭವಿಗಳಿಗೆ ತಲುಪಿಸುವ ಹೊಣೆ ಗ್ರಾಪಂ ಆಡಳಿತದ ಮೇಲಿದೆ. ಜತೆಗೆ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ತಕ್ಷಣ ಎಲ್ಲ ಗ್ರಾಮಗಳಲ್ಲೂ ಸ್ವಚ್ಛತೆ, ಕುಡಿಯುವ ನೀರು, ರಸ್ತೆ ಬದಿ ಜಂಗಲ್‌ಗಳ ತೆರವು ಕೆಲಸ ನಡೆಯಬೇಕಿದೆ ಎಂದರು.

    ಹಿಂದಿನ ಬಿಜೆಪಿ ಸರ್ಕಾರವಿದ್ದಾಗ ಇಲಾಖೆಗಳಿಗೆ ಯಥೇಚ್ಛವಾಗಿ ಅನುದಾನ ನೀಡಿತ್ತು. ಆದರೆ ಈಗಿನ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿಗಳ ನೆಪದಲ್ಲಿ ಅನುದಾನ ಕಡಿತ ಮಾಡಿದೆ ಎಂದು ದೂರಿದರು.

    ಗ್ರಾಮಸಭೆಗೆ ಗೈರು ಹಾಜರಾದ ವಿವಿಧ ಇಲಾಖೆ ಅದಿಕಾರಿಗಳಿಗೆ ಕಾರಣ ಕೇಳಿ ನೋಟಿಸ್ ನೀಡುವಂತೆ ತಾಪಂ ಇಒ ಸತೀಶ್ ಅವರಿಗೆ ಸೂಚಿಸಿದ ಶಾಸಕರು, ಕ್ರಮಗಳನ್ನು ಮೇಲಿನ ಅಧಿಕಾರಿಗಳು ಪತ್ರ ಬರೆಯುವಂತೆ ಸೂಚಿಸಿದರು.

    ಸೆಸ್ಕ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಖೆ, ಕಂದಾಯ ಇಲಾಖೆ, ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ, ಆರ್‌ಡಿಪಿಆರ್, ಪೋಲಿಸ್ ಇತರ ಇಲಾಖೆ ಅಧಿಕಾರಿಗಳು ಗ್ರಾಮ ಸಭೆಯಲ್ಲಿ ಭಾಗವಹಿಸಿದ್ದರು. ಗ್ರಾಪಂ ಅಧ್ಯಕ್ಷ ಶೆಷಪ್ಪ, ಸದಸ್ಯರಾದ ನಿಂಗಪ್ಪಣ್ಣ, ಸಂಗಪ್ಪ, ರಘು, ಬಿಇಒ ಕೆ.ಪಿ.ನಾರಾಯಣ, ಅರೇಹಳ್ಳಿ ಪಿಎಸ್‌ಐ ಲಿಂಗರಾಜು, ಡಾ.ನರಸೇಗೌಡ ಮತ್ತಿತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts