ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ನೀಡಲಾಗುವ 2023ನೇ ಸಾಲಿನ ‘ಕೆಂಗಲ್ ಹನುಮಂತಯ್ಯ ಸಂಸ್ಕೃತಿ ದತ್ತಿ ಪ್ರಶಸ್ತಿ’ಗೆ ಚಾಮರಾಜನಗರದ ದೀನಬಂಧು ಟ್ರಸ್ಟ್ ಆಯ್ಕೆಯಾಗಿದೆ. ಪ್ರಶಸ್ತಿಯು 25 ಸಾವಿರ ರೂ. ನಗದು ಒಳಗೊಂಡಿದೆ. ಬೆಂಗಳೂರು ನಗರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು 2015ರಲ್ಲಿ ಈ ಪ್ರಶಸ್ತಿ ಸ್ಥಾಪಿಸಿದ್ದು, ಪರಿಷತ್ತು ಅಧ್ಯಕ್ಷ ನಾಡೋಜ ಡಾ. ಮಹೇಶ ಜೋಶಿ ನೇತೃತ್ವದ ಸಮಿತಿ ಈ ಆಯ್ಕೆ ಮಾಡಿದೆ.
ದೀನಬಂಧು ಸಂಸ್ಥೆ 1992ರಿಂದ ಅವಕಾಶವಂಚಿತ ಮಕ್ಕಳ ಆಶಾಕಿರಣವಾಗಿ ಕಾರ್ಯನಿರ್ವಹಿಸುತ್ತಿದೆ. ರಾಷ್ಟ್ರಕವಿ ಡಾ.ಜಿ.ಎಸ್. ಶಿವರುದ್ರಪ್ಪ ಅವರ ಪುತ್ರ ಜಿ.ಎಸ್. ಜಯದೇವ್ ನೇತೃತ್ವದಲ್ಲಿ ಸಂಸ್ಥೆ 10ನೇ ತರಗತಿಯವರೆಗಿನ ಮಕ್ಕಳಿಗೆ ಅಲ್ಪ ಮೊತ್ತದಲ್ಲಿ ಗುಣಮಟ್ಟದ ಶಿಕ್ಷಣದ ಜತೆಗೆ ಉನ್ನತ ವಿದ್ಯಾಭ್ಯಾಸಕ್ಕೆ ಹೋಗುವ ಮಕ್ಕಳಿಗೆ ವಿದ್ಯಾರ್ಥಿ ವೇತನ ಸಹ ನೀಡುತ್ತಿದೆ. ಶಿಕ್ಷಕರಿಗೂ ತರಬೇತಿ ನೀಡುವ ಈ ಸಂಸ್ಥೆ ಮಕ್ಕಳಲ್ಲಿ ವಿಜ್ಞಾನ ಅರಿವು ಮೂಡಿಸುವ ಕಾರ್ಯ ಸಹ ಮಾಡುತ್ತಿದೆ. ಹಾಗೆಯೇ ಮಹಿಳೆಯರಿಗೆ ವೃತ್ತಿನಿರತ ತರಬೇತಿ ನೀಡುತ್ತಿದ್ದು, ಸರ್ಕಾರದಿಂದ ಯಾವುದೇ ಅನುದಾನ ಪಡೆಯದೆ ಸ್ವಂತ ಸಂಪನ್ಮೂಲದಿಂದ ಈ ಚಟುವಟಿಕೆಗಳನ್ನು ನಡೆಸುತ್ತಿದೆ.
ಕೆಂಗಲ್ ಪ್ರಶಸ್ತಿಗೆ ದೀನಬಂಧು ಟ್ರಸ್ಟ್ ಆಯ್ಕೆ

ಕನಸಿನಲ್ಲಿ ಈ ಮೂರು ಪಕ್ಷಿಗಳು ಕಂಡ್ರೆ ಲಾಟರಿ ಹೊಡೆದಂತೆ! Lucky Birds ನೀಡುವ ಸುಳಿವೇನು..?
Lucky Birds : ಸಾಮಾನ್ಯವಾಗಿ ನಿದ್ದೆಯಲ್ಲಿ ಕನಸು ಕಾಣೋದು ಸಹಜ. ಈ ಕನಸುಗಳ ಮೂಲಕ ಪ್ರಕೃತಿ…
ಯಾವ ಕಾರಣಕ್ಕೂ ಮಾವಿನ ವಾಟೆ ಎಸೆಯಬೇಡಿ…ಅದರ ಪ್ರಯೋಜನಗಳ ಬಗ್ಗೆ ತಿಳಿದ್ರೆ ನೀವು ಖಂಡಿತ ಅಚ್ಚರಿಪಡ್ತೀರಾ! Mango Kernels
Mango Kernels : ಮಾವಿನ ಹಣ್ಣನ್ನು ಹಣ್ಣುಗಳ ರಾಜ ಎಂದು ಕರೆಯುತ್ತಾರೆ. ರುಚಿಗೆ ಮಾತ್ರವಲ್ಲ, ಮಾವಿನ…
ಪ್ಲಾಸ್ಟಿಕ್ ಬಾಕ್ಸ್ನಲ್ಲಿ ಬಿಸಿ ಅನ್ನ ಇಡುವ ಅಭ್ಯಾಸವಿದೆಯೇ? ಆರೋಗ್ಯದ ಬಗ್ಗೆ ಇರಲಿ ಎಚ್ಚರ.. hot rice in plastic boxes
hot rice in plastic boxes: ಪ್ಲಾಸ್ಟಿಕ್ ಬಳಕೆಯನ್ನು ತಡೆಯಲಾಗುತ್ತಿಲ್ಲ. ಪ್ಲಾಸ್ಟಿಕ್ ಪಾತ್ರೆಗಳನ್ನು ಬಳಸುವುದು ಹಾನಿಕಾರಕ,…