More

    ಮಹೇಶ್ ಬಾಬುಗೆ ದೀಪಿಕಾ ಪಡುಕೋಣೆ ನಾಯಕಿ

    ‘ಆರ್​ಆರ್​ಆರ್’ ಯಶಸ್ಸಿನ ಬಳಿಕ ನಿರ್ದೇಶಕ ರಾಜಮೌಳಿ ಮಹೇಶ್ ಬಾಬುಗಾಗಿ ಸಿನಿಮಾ ಮಾಡಲಿದ್ದಾರೆ ಎಂಬುದು ಈ ಹಿಂದೆಯೇ ಸುದ್ದಿಯಾಗಿತ್ತು. ಆದರೆ, ಈಗ ಟಾಲಿವುಡ್ ಅಂಗಳದಲ್ಲಿ ಹರಿದಾಡುತ್ತಿರುವ ಸುದ್ದಿಯ ಪ್ರಕಾರ ಈ ಚಿತ್ರಕ್ಕೆ ನಾಯಕಿಯಾಗಿ ದೀಪಿಕಾ ಪಡುಕೋಣೆ ಆಯ್ಕೆಯಾಗಿದ್ದಾರೆ ಎನ್ನಲಾಗಿದೆ.

    ರಾಜಮೌಳಿ, ಮಹೇಶ್ ಬಾಬು ಮತ್ತು ದೀಪಿಕಾ ಪಡುಕೋಣೆ ಇದೇ ಮೊದಲ ಬಾರಿಗೆ ಒಂದಾಗಲಿದ್ದು, ಈ ಕಾಂಬಿನೇಷನ್​ಗಾಗಿ ಅಭಿಮಾನಿಗಳು ಸಹ ಕಾತರದಿಂದ ಕಾಯುತ್ತಿದ್ದಾರೆ. ಇದು ನೈಜ ಘಟನೆ ಆಧಾರಿತ ಚಿತ್ರವಾಗಿದ್ದು, ರಾಜಮೌಳಿ ತಂದೆ ವಿಜಯ ಪ್ರಸಾದ್ ಕಥೆ ಬರೆದಿದ್ದಾರೆ. ದೇಶ ವಿದೇಶಗಳಲ್ಲಿ ನಡೆಯುವ ಆಕ್ಷನ್ ಚಿತ್ರವಾಗಿರುವ ಕಾರಣ ಕೆಲವು ಹಾಲಿವುಡ್ ಕಲಾವಿದರೂ ಚಿತ್ರದಲ್ಲಿ ಕಾಣಿಸಿಕೊಳ್ಳುವ ನಿರೀಕ್ಷೆಯಿದೆ. ಹೀಗಾಗಿಯೇ ಕೆಲವು ದಿನಗಳ ಹಿಂದೆ ಅಮೆರಿಕಾದ ಕಾಸ್ಟಿಂಗ್ ಏಜೆನ್ಸಿ ಜತೆ ರಾಜಮೌಳಿ ಒಪ್ಪಂದ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

    ಸದ್ಯ ರಾಜಮೌಳಿ, ‘ಆರ್​ಆರ್​ಆರ್’ ಚಿತ್ರಕ್ಕಾಗಿ ಆಸ್ಕರ್ ನಿರೀಕ್ಷೆಯಲ್ಲಿದ್ದು, ಭಾರತ, ಅಮೆರಿಕಾ ಅಂತ ಓಡಾಡುತ್ತಿದ್ದಾರೆ. ಮತ್ತೊಂದೆಡೆ ತ್ರಿವಿಕ್ರಮ್ ಶ್ರೀನಿವಾಸ್ ನಿರ್ದೇಶನದ ಚಿತ್ರಕ್ಕಾಗಿ ಮಹೇಶ್ ಬಾಬು ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ದೀಪಿಕಾ ಪಡುಕೋಣೆ, ಶಾರುಖ್ ಖಾನ್ ಜತೆ ‘ಪಠಾಣ್’ ಮತ್ತು ‘ಜವಾನ್’ ಚಿತ್ರಗಳಲ್ಲಿ, ಹೃತಿಕ್ ರೋಷನ್​ಗೆ ಜೋಡಿಯಾಗಿ ‘ಫೈಟರ್’ ಚಿತ್ರದಲ್ಲಿ ಹಾಗೂ ಪ್ರಭಾಸ್​ಗೆ ನಾಯಕಿಯಾಗಿ ‘ಪ್ರಾಜೆಕ್ಟ್ ಕೆ’ ಚಿತ್ರದಲ್ಲಿ ಅಭಿನಯಿಸುತ್ತಿದ್ದಾರೆ. ಮುಂದಿನ ವರ್ಷ ಈ ಚಿತ್ರ ಸೆಟ್ಟೇರಲಿದೆ. –ಏಜೆನ್ಸೀಸ್

    ಪತ್ನಿಯನ್ನು ಎತ್ತಿಕೊಂಡು ಬಂದು ಹಾಸನಾಂಬೆ ದರ್ಶನ ಪಡೆದ ಪತಿ; ಕಾರಣವಿದು…

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts