ದೀಪಿಕಾ ಅಪ್ಪ-ಅಮ್ಮ, ತಂಗಿಗೂ ಕರೊನಾ ಸೋಂಕು; ಖ್ಯಾತ ಬ್ಯಾಡ್ಮಿಂಟನ್ ಆಟಗಾರ ಪ್ರಕಾಶ್ ಪಡುಕೋಣೆ ಆಸ್ಪತ್ರೆಯಲ್ಲಿ...

Deepika
Published on

ಬೆಂಗಳೂರು: ಬಾಲಿವುಡ್ ಬೆಡಗಿ, ನಟಿ ದೀಪಿಕಾ ಪಡುಕೋಣೆ ಅವರ ತಂದೆ-ತಾಯಿ ಮಾತ್ರವಲ್ಲದೆ ಅವರ ತಂಗಿಗೂ ಕರೊನಾ ಸೋಂಕು ತಗುಲಿದೆ. ಅದರಲ್ಲೂ ಅವರ ತಂದೆ, ಖ್ಯಾತ ಬ್ಯಾಡ್ಮಿಂಟನ್ ಆಟಗಾರ ಪ್ರಕಾಶ್ ಪಡುಕೋಣೆ ಅವರು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ದೀಪಿಕಾ ಪಡುಕೋಣೆ ಅವರ ತಂದೆ ಪ್ರಕಾಶ್ ಪಡುಕೋಣೆ, ತಾಯಿ ಉಜ್ಜಲಾ, ತಂಗಿ ಅನಿಷಾ ಅವರ ಕೆಲವು ದಿನಗಳ ಹಿಂದೆ ಕರೊನಾ ಸೋಂಕಿನ ಲಕ್ಷಣಗಳು ಕಾಣಿಸಿದ್ದರಿಂದ ಪರೀಕ್ಷೆ ಮಾಡಿಸಿಕೊಂಡಿದ್ದರು. ಬಳಿಕ ಕರೊನಾ ಟೆಸ್ಟ್​ನಲ್ಲಿ ಮೂವರಿಗೂ ಕೋವಿಡ್-19 ಸೋಂಕು ತಗುಲಿರುವುದು ದೃಢಪಟ್ಟಿತ್ತು.

ಕೋವಿಡ್ ಹಿನ್ನೆಲೆಯಲ್ಲಿ ಮೂವರೂ ಮನೆಯಲ್ಲೇ ಕ್ವಾರಂಟೈನ್ ಆಗಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಪ್ರಕಾಶ್ ಪಡುಕೋಣೆ ಅವರಿಗೆ ಜ್ವರ ಕಡಿಮೆ ಆಗದ್ದರಿಂದ ಹಾಗೂ ವಯಸ್ಸಿನ ಕಾರಣಕ್ಕೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸದ್ಯ ಅವರ ಆರೋಗ್ಯ ಸ್ಥಿತಿ ಸುಧಾರಣೆಯಾಗಿದ್ದು, ಇನ್ನು 2-3 ದಿನಗಳಲ್ಲಿ ಆಸ್ಪತ್ರೆಯಿಂದ ಬಿಡುಗಡೆ ಆಗುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net