17 C
Bangalore
Friday, December 13, 2019

ಲಂಡನ್​ ಮೇಡಮ್​ ಟುಸಾಡ್ಸ್​ನಲ್ಲಿ ದೀಪಿಕಾ ಪಡುಕೊಣೆ ಮೇಣದ ಪ್ರತಿಮೆ

Latest News

ಸಂಭ್ರಮದ ಅಮೃತೇಶ್ವರ ರಥೋತ್ಸವ

ಅಣ್ಣಿಗೇರಿ: ಪಟ್ಟಣದ ಆರಾಧ್ಯದೈವ ಶ್ರೀ ಅಮೃತೇಶ್ವರ ಮಹಾರಥೋತ್ಸವ ಗುರುವಾರ ಸಂಜೆ ಸಹಸ್ರಾರು ಭಕ್ತರ ಜಯಘೊಷಗಳ ಮಧ್ಯ ಸಡಗರ, ಸಂಭ್ರಮದಿಂದ ಜರುಗಿತು.

ಗಣರಾಜ್ಯೋತ್ಸವಕ್ಕೆ ಬ್ರೆಜಿಲ್ ಪ್ರಧಾನಿ ಬೇಡ

ವಿಜಯವಾಣಿ ಸುದ್ದಿಜಾಲ ಧಾರವಾಡ 2020ರ ಜ. 26ರ ಗಣರಾಜ್ಯೋತ್ಸವದ ಅತಿಥಿಯಾಗಿ ಬ್ರೆಜಿಲ್ ಪ್ರಧಾನಿ ಬೊಲ್ಸೇನಾರೋ ಬರುತ್ತಿರುವುದನ್ನು ರೈತ ಸಂಘ...

ಡಿಸಿಪಿಯಾಗಿ ಬಿ.ಎಸ್. ನೇಮಗೌಡ ಅಧಿಕಾರ ಸ್ವೀಕಾರ

ಹುಬ್ಬಳ್ಳಿ: ಹುಬ್ಬಳ್ಳಿ- ಧಾರವಾಡ ಪೊಲೀಸ್ ಕಮಿಷನರೇಟ್​ನ ಅಪರಾಧ ಮತ್ತು ಸಂಚಾರ ವಿಭಾಗಕ್ಕೆ ವರ್ಗವಾಗಿ ಬಂದಿರುವ ಉಪ ಪೊಲೀಸ್ ಆಯುಕ್ತ(ಡಿಸಿಪಿ) ಬಿ.ಎಸ್. ನೇಮಗೌಡ ಗುರುವಾರ...

ಸೇವೆ ಸ್ಥಗಿತಗೊಳಿಸಿ ಧರಣಿ

ವಿಜಯವಾಣಿ ಸುದ್ದಿಜಾಲ ಕುಂದಗೋಳ ಬಾಕಿ ವೇತನ ಪಾವತಿಗೆ ಆಗ್ರಹಿಸಿ ತಾಲೂಕಾಸ್ಪತ್ರೆ ಡಿ ದರ್ಜೆ ಗುತ್ತಿಗೆ ನೌಕರರು ಗುರುವಾರ ಸೇವೆ...

ಜ್ಞಾನ ಸಂಸತ್ ಅಧಿವೇಶನ ನಾಳೆ

ವಿಜಯವಾಣಿ ಸುದ್ದಿಜಾಲ ಧಾರವಾಡ ಹುಬ್ಬಳ್ಳಿಯ ವರದಶ್ರೀ ಫೌಂಡೇಷನ್​ನಿಂದ ನಗರದ ಕರ್ನಾಟಕ ಕಾಲೇಜು ಮೈದಾನದಲ್ಲಿ ಡಿ. 14ರಂದು ಸಂಜೆ 4ಕ್ಕೆ...

ನವದೆಹಲಿ: ಕನ್ನಡತಿ, ಬಾಲಿವುಡ್​ ತಾರೆ ದೀಪಿಕಾ ಪಡುಕೋಣೆಯ ಮೇಣದ ಪ್ರತಿಮೆ ಲಂಡನ್ ಮತ್ತು ದೆಹಲಿಯ ಮೇಡಮ್​ ಟುಸಾಡ್ಸ್​​ನ ಮ್ಯೂಸಿಯಂನಲ್ಲಿ ಅತಿ ಶೀಘ್ರದಲ್ಲೇ ಕಂಗೊಳಿಸಲಿದೆ.

ಈ ಕುರಿತು ಸೋಮವಾರ ಫೇಸ್​ಬುಕ್​ ಲೈವ್​ ಮಾಡಿರುವ ದೀಪಿಕಾ ಪಡುಕೋಣೆ, ಪ್ರತಿಮೆ ಅನಾವರಣವಾಗುತ್ತಿರುವ ಬಗ್ಗೆ ಅತೀವ ಸಂತಸ ವ್ಯಕ್ತಪಡಿಸಿದ್ದಾರೆ. ತಮ್ಮ ಮೊದಲ ಪ್ರತಿಮೆ ಮುಂದಿನ ವರ್ಷಾರಂಭದಲ್ಲಿ ಲಂಡನ್​ನಲ್ಲಿಯೂ, ನಂತರ ದೆಹಲಿಯ ಮ್ಯೂಸಿಯಂನಲ್ಲಿಯೂ ಸ್ಥಾಪನೆಯಾಗಲಿದೆ ಎಂದು ಅವರು ತಿಳಿಸಿದ್ದಾರೆ.

“ನನ್ನ ಪ್ರತಿಮೆಯನ್ನು ಮೇಡಮ್​ ಟುಸಾಡ್ಸ್​ನಲ್ಲಿ ಸ್ಥಾಪಿಸುತ್ತಿರುವುದಕ್ಕೆ ನನಗೆ ಆತೀವ ಸಂತೋಷವಾಗಿದೆ. ಮ್ಯೂಸಿಯಮ್​ನ ಮೇಣದ ಪ್ರತಿಮೆ ರಚನಾಕಾರ ಕಲಾವಿದರೊಂದಿಗೆ ನಡೆದ ಮಾತುಕತೆ ನನ್ನನ್ನು ಉಲ್ಲಸಿತಳನ್ನಾಗಿಸಿದೆ,” ಎಂದು ಅವರು ಹೇಳಿಕೊಂಡಿದ್ದಾರೆ.

ಲಂಡನ್​ನ ಮೇಡಮ್​ ಟುಸಾಡ್ಸ್​ ಮ್ಯೂಸಿಯಮ್​ನ ಕಲಾವಿದರು ಮತ್ತು ಪರಿಣತರು ಲಂಡನ್​ನಲ್ಲಿ ದೀಪಿಕಾ ಪಡುಕೋಣೆ ಅವರನ್ನು ಭೇಟಿಯಾಗಿದ್ದು, ಪ್ರತಿಮೆ ರಚಿಸಲು ದೀಪಿಕಾ ಅವರ 200 ಸೂಕ್ಷ್ಮ ಅಳತೆಗಳನ್ನು ಮತ್ತು ಫೋಟೋಗಳನ್ನು ಸಂಗ್ರಹಿಸಿಕೊಂಡಿದ್ದಾರೆ.

ದೀಪಿಕಾ ಪಡುಕೋಣೆ ಅವರು ತಾವು ಚಿಕ್ಕವರಿದ್ದಾಗ ತಮ್ಮ ತಂದೆ ತಾಯಿಯೊಂದಿಗೆ ಒಂದೇ ಒಂದು ಬಾರಿ ಮಾತ್ರ ಭೇಟಿ ನೀಡಿದ್ದರಂತೆ. ಆ ನೆನಪು ತಮಗೆ ಇನ್ನೂ ಹಸಿರಾಗಿದೆ ಎಂದಿರುವ ಅವರು, ಈಗ ತಮ್ಮ ಮೇಣದ ಪ್ರತಿಮೆ ರಚನೆಗೆ ಲಂಡನ್​ನ ಮ್ಯೂಸಿಯಂನಿಂದ ಪತ್ರ ಪಡೆದಿರುವ ಬಗ್ಗೆ ದೀಪಿಕಾ ಹೇಳಿಕೊಂಡಿದ್ದಾರೆ.

ಲಂಡನ್​ ಮೇಡಮ್​ ಟುಸಾಡ್ಸ್​ ಮ್ಯೂಸಿಯಂನಲ್ಲಿ ಕೆಲವೇ ಬಾಲಿವುಡ್​ ತಾರೆಯರ ಪ್ರತಿಮೆಗಳನ್ನು ಮಾತ್ರ ಸ್ಥಾಪಿಸಲಾಗಿದೆ. ಸದ್ಯ ದೀಪಿಕಾ ಅವರು ಆ ಸಾಲಿಗೆ ಸೇರಲಿದ್ದಾರೆ.

LIVE from Madame Tussaud's London

Deepika Padukone ಅವರಿಂದ ಈ ದಿನದಂದು ಪೋಸ್ಟ್ ಮಾಡಲಾಗಿದೆ ಸೋಮವಾರ, ಜುಲೈ 23, 2018

Deepika Padukone ಅವರಿಂದ ಈ ದಿನದಂದು ಪೋಸ್ಟ್ ಮಾಡಲಾಗಿದೆ ಸೋಮವಾರ, ಜುಲೈ 23, 2018

Stay connected

278,749FansLike
588FollowersFollow
626,000SubscribersSubscribe

ವಿಡಿಯೋ ನ್ಯೂಸ್

VIDEO: 8 ಅಡಿ ಉದ್ದದ ಹೆಬ್ಬಾವನ್ನು ರಕ್ಷಿಸಲು 40 ಅಡಿ...

ತ್ರಿಶೂರ್​: ಇಲ್ಲೋರ್ವ ಯುವಕ ಬಾವಿಯಲ್ಲಿ ಬಿದ್ದಿದ್ದ ಹೆಬ್ಬಾವನ್ನು ರಕ್ಷಿಸಲು ಹಗ್ಗದ ಮೂಲಕ ಕೆಳಗೆ ಇಳಿದು ಬಳಿಕ ಅಪಾಯಕ್ಕೆ ಸಿಲುಕಿದ ವಿಡಿಯೋವೊಂದು ವೈರಲ್​ ಆಗಿದೆ. ಈ ಘಟನೆ ನಡೆದಿದ್ದು ಕೇರಳದ ತ್ರಿಶೂಲ್​ನಲ್ಲಿ ಎನ್ನಲಾಗಿದೆ. ವಿಡಿಯೋದಲ್ಲಿ ಇರುವ...

VIDEO| ಲಕ್ಷ್ಯದ ಜೊತೆಯಲಿ ಅನಿರುದ್ಧ್; ಡೈಲಾಗ್​ ಟೀಸರ್​ ಬಿಡುಗಡೆ

ಬೆಂಗಳೂರು: ‘ಜೊತೆ ಜೊತೆಯಲಿ’ ಧಾರಾವಾಹಿ ಮೂಲಕ ಕನ್ನಡಿಗರ ಮನೆಮನ ಗೆದ್ದಿರುವ ನಟ ಅನಿರುದ್ಧ್ ಈಗ ‘ಲಕ್ಷ್ಯ’ಗೆ ಜತೆಯಾಗಿದ್ದಾರೆ. ಅಂದರೆ ‘ಲಕ್ಷ್ಯ’ ಸಿನಿಮಾದ ಡೈಲಾಗ್ ಟೀಸರ್ ಬಿಡುಗಡೆ ಮಾಡುವ ಮೂಲಕ ಅವರು ಚಿತ್ರತಂಡದ ಜತೆ...

VIDEO| ಇಸ್ರೋದಿಂದ ರಿಸ್ಯಾಟ್​-2ಬಿಆರ್​1 ಹೆಸರಿನ ಮತ್ತೊಂದು ಬೇಹುಗಾರಿಕಾ ಉಪಗ್ರಹ ಯಶಸ್ವಿ...

ನವದೆಹಲಿ: ಪಿಎಸ್​ಎಲ್​ವಿ-ಸಿ48 ಉಡಾವಣಾ ವಾಹಕ ಹೊತ್ತ ರಿಸ್ಯಾಟ್​-2ಬಿಆರ್​1 ಹೆಸರಿನ ಉಪಗ್ರಹವನ್ನು ಇಸ್ರೋ ಶ್ರೀಹರಿಕೋಟದಲ್ಲಿರುವ ಸತೀಶ್​ ಧವನ್​ ಉಡಾವಣಾ ಕೇಂದ್ರದಿಂದ ಬುಧವಾರ ಮಧ್ಯಾಹ್ನ ಯಶಸ್ವಿಯಾಗಿ ಉಡಾವಣೆಗೊಳಿಸಿತು. ರಿಸ್ಯಾಟ್​-2ಬಿಆರ್​1 ಉಪ್ರಗಹದ ಜೊತೆಗೆ 9 ಗ್ರಾಹಕ...

VIDEO| ವಿಜಯವಾಣಿ-ದಿಗ್ವಿಜಯ ನ್ಯೂಸ್​ ಸಹಯೋಗದಲ್ಲಿ ಫೋನ್​ ಇನ್​ ಪ್ರೋಗ್ರಾಮ್​: ಮಹಿಳಾ...

ಬೆಂಗಳೂರು: ದಿಶಾ ಅತ್ಯಾಚಾರ ಮತ್ತು ಕೊಲೆ ಹಾಗೂ ಉನ್ನಾವೋ ಅತ್ಯಾಚಾರ ಪ್ರಕರಣಗಳಂತಹ ಪೈಶಾಚಿಕ ಕೃತ್ಯಗಳು ಜನರ ಮನಸ್ಸಿನಲ್ಲಿನ್ನೂ ಮಾಸಿಲ್ಲ. ಈ ಎರಡು ಪ್ರಕರಣಗಳಿಂದ ದೇಶದೆಲ್ಲೆಡೆ ಮಹಿಳಾ ಸುರಕ್ಷಾ ಪ್ರಶ್ನೆಯನ್ನು ಎಬ್ಬಿಸಿದೆ....

VIDEO: ಮರದ ಮೇಲಿದ್ದ ಹಾವನ್ನು ಜಂಪ್​ ಮಾಡಿದ ಹಿಡಿದ ಮುಂಗುಸಿ;...

ಬಳ್ಳಾರಿ: ಹಾವು-ಮುಂಗುಸಿ ಫೈಟ್​ ಹೊಸದಲ್ಲ. ಈಗಾಗಲೇ ಅದೆಷ್ಟೋ ದೃಶ್ಯಗಳನ್ನು ನೋಡಿರುತ್ತೇವೆ. ಆದರೆ ಇಲ್ಲೊಂದು ಮುಂಗುಸಿ ಹಾವನ್ನು ಹಿಡಿದ ಪರಿ ನೋಡಿದರೆ ಒಂದು ಕ್ಷಣ ಮೈ ಜುಂ ಎನ್ನುತ್ತದೆ. ಹಾವಿನ ಮೇಲೆ ಸುಮ್ಮನೆ ಕುಳಿತಿದ್ದ ಮಾರುದ್ದ...

VIDEO: ಏರ್​ಪೋರ್ಟ್​ನಲ್ಲಿ ಬ್ಯಾಗೇಜ್​ಗಳ ಸಭ್ಯ ನಡತೆ ನೋಡಿ ಮನಸೋತ ನೆಟ್ಟಿಗರು;...

ಯಾವುದಾದರೂ ಕ್ಯೂದಲ್ಲಿ ನಿಂತರೂ ನೂಕುನುಗ್ಗಲು ಮಾಡುವ ಮನುಷ್ಯರಗಿಂತ ಈ ಬ್ಯಾಗೇಜ್​ಗಳು ಸಾವಿರ ಪಾಲು ಉತ್ತಮ ! ಅರೆ, ಇದೇನು? ಮನುಷ್ಯರಿಗೂ, ಬ್ಯಾಗೇಜ್​ಗಳಿಗೂ ಎಲ್ಲಿಯ ಹೋಲಿಕೆ ಎನ್ನುತ್ತೀರಾ? ಹಾಗಾದರೆ ಈ ಸುದ್ದಿ ಓದಿ, ವಿಡಿಯೋ ನೋಡಿದರೆ...