25.7 C
Bangalore
Sunday, December 15, 2019

ಮಾನನಷ್ಟ ಪ್ರಕರಣ: ನಟ ಪ್ರಕಾಶ್‌ ರಾಜ್‌ ಅವರ ಬಳಿ ಟ್ವಿಟರ್ ಮೂಲಕ ಕ್ಷಮೆ ಕೇಳಿದ ಸಂಸದ ಪ್ರತಾಪ್‌ ಸಿಂಹ!

Latest News

ತುಳು ಶಿವಳ್ಳಿ ಬ್ರಾಹ್ಮಣರ ಪ್ರಥಮ ವಿಶ್ವ ಸಮ್ಮೇಳನ

ಉಡುಪಿ: ತುಳು ಭಾಷಿಗ ತುಳು ಶಿವಳ್ಳಿ ಬ್ರಾಹ್ಮಣರು ಮಾತೃಭಾಷೆ ಮರೆಯುತ್ತಿದ್ದಾರೆ. ಅದು ಸಲ್ಲದು. ನಮ್ಮ ಸಂಸ್ಕೃತಿ-ಸಂಸ್ಕಾರಗಳ ಉಳಿವಿಗಾಗಿ ಶ್ರಮಿಸುವುದು ಗಾಯತ್ರಿ ಮಂತ್ರವನ್ನು ನಿತ್ಯವೂ...

ಕ್ರಿಕೆಟ್ ಪಂದ್ಯಾವಳಿ, ಡಿಎಆರ್ ಮೈದಾನದಲ್ಲಿ ಲಾಠಿಗೆ ಮಣಿದ ಲೇಖನಿ

ಬಳ್ಳಾರಿ: ಪೊಲೀಸ್ ವಾರ್ಷಿಕ ಕ್ರೀಡಾಕೂಟ ಹಿನ್ನೆಲೆಯಲ್ಲಿ ನಗರದ ಜಿಲ್ಲಾ ಪೊಲೀಸ್ ಕ್ರೀಡಾಂಗಣದಲ್ಲಿ ಭಾನುವಾರ ಪೊಲೀಸರು ಮತ್ತು ಪತ್ರಕರ್ತರ ಮಧ್ಯೆ ನಡೆದ ಕ್ರಿಕೆಟ್ ಪಂದ್ಯಾವಳಿಯಲ್ಲಿ...

ಹೆಚ್ಚುವರಿ ಡಿಸಿಎಂ ಹುದ್ದೆ ಸೃಷ್ಟಿ ಉಹಾಪೋಹ – ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ

ರಾಯಚೂರು: ಇನ್ನೆರಡು ಉಪ ಮುಖ್ಯಮಂತ್ರಿ ಹುದ್ದೆ ಸೃಜಿಸಲಾಗುತ್ತಿದೆ ಎನ್ನುವುದು ಮಾಧ್ಯಮಗಳ ಸೃಷ್ಟಿ. ಮುಂದಿನ ಸಚಿವ ಸಂಪುಟದ ವಿಸ್ತರಣೆ, ಬದಲಾವಣೆಯನ್ನು ವರಿಷ್ಠರು ತೀರ್ಮಾನಿಸಲಿದ್ದಾರೆ ಎಂದು...

ಮೊಬೈಲ್ ಹಾಳು ಮಾಡಿದ್ದಕ್ಕೆ ಸೋದರ ಮಾವನೇ ಬಾಲಕಿಗೆ ಚಾಕು ಇರಿದು ಹತ್ಯೆ

ಶಿವಮೊಗ್ಗ: ಮೊಬೈಲ್ ವಿಚಾರದಲ್ಲಿ ಭಾನುವಾರ ಸೋದರ ಮಾವನೇ ಬಾಲಕಿಯನ್ನು ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ಗಾಡಿಕೊಪ್ಪದಲ್ಲಿ ನಡೆದಿದೆ.5 ವರ್ಷದ ರಂಜನಿ ಹತ್ಯೆಯಾದ...

ಮಸ್ಕಿ ಕ್ಷೇತ್ರಕ್ಕೆ ಇನ್ನೆರಡು ತಿಂಗಳಲ್ಲಿ ಉಪಚುನಾವಣೆ ಸಾಧ್ಯತೆ – ಅನರ್ಹ ಶಾಸಕ ಪ್ರತಾಪಗೌಡ ಪಾಟೀಲ್

ಮಸ್ಕಿ: ಬಿಜೆಪಿ ಸೇರಿದ ಮೇಲೆ ಸಿಎಂ ಬಿ.ಎಸ್.ಯಡಿಯೂರಪ್ಪ ಕ್ಷೇತ್ರಕ್ಕೆ 100 ಕೋಟಿ ರೂ. ಅನುದಾನ ಕೊಡಲು ಒಪ್ಪಿದ್ದಾರೆ. ಈಗಾಗಲೇ 50 ಕೋಟಿ ರೂ....

ಬೆಂಗಳೂರು: ಬಹುಬಾಷಾ ನಟ ಪ್ರಕಾಶ್‌ ರಾಜ್‌ ಅವರ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್‌ ಮಾಡಿದ್ದ ಸಂಸದ ಪ್ರತಾಪ್‌ ಸಿಂಹ ಅವರೀಗ ಟ್ವಿಟರ್‌ ಮೂಲಕವೇ ಪ್ರಕಾಶ್‌ ರಾಜ್‌ ಅವರಿಗೆ ಬಹಿರಂಗ ಕ್ಷಣೆಯಾಚಿಸುವ ಮೂಲಕ ಪ್ರಕರಣಕ್ಕೆ ಇತಿಶ್ರೀ ಹಾಡಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಪ್ರಕಾಶ್ ರೈ ಹಾಗೂ ಅವರ ಕೌಟುಂಬಿಕ ವಿಚಾರದ ಬಗ್ಗೆ ಅವಹೇಳನಕಾರಿ ಬರಹವನ್ನು ಪ್ರಕಟಿಸಿದ್ದ ಪ್ರತಾಪ್‌ ಸಿಂಹ ವಿರುದ್ಧ ನಟ ಪ್ರಕಾಶ್‌ ರಾಜ್‌ 1 ರೂಪಾಯಿಗೆ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು.

ಅತಿವೃಷ್ಟಿಗೆ ಕಳವಳ ವ್ಯಕ್ತಪಡಿಸಿದ ನ್ಯಾಯಾಧೀಶರು

ಸಂಸದ ಪ್ರತಾಪ್ ‌ಸಿಂಹ ವಿರುದ್ಧದ ಮಾನನಷ್ಟ ‌ಮೊಕದ್ದಮೆ ಪ್ರಕರಣದ ವಿಚಾರಣೆ ವೇಳೆ ಉತ್ತರ ಕರ್ನಾಟಕದ ನೆರೆ ಬಗ್ಗೆ ನ್ಯಾಯಾಧೀಶ ನ್ಯಾ.ರಾಮಚಂದ್ರ ಡಿ ಹುದ್ದಾರ ಅವರು ಕಳವಳ ವ್ಯಕ್ತಪಡಿಸಿದ್ದಾರೆ. ಇಬ್ಬರು ಸೆಲೆಬ್ರಿಟಿಗಳು, ಸಮಾಜಕ್ಕೆ ಮಾದರಿಯಾಗಿರಬೇಕು. ರಾಜ್ಯದಲ್ಲಿ ಏನಾಗುತ್ತಿದೆ ಎಂದು ನಿಮಗೆ ಗೊತ್ತಿದೆ. ಉತ್ತರ ಕರ್ನಾಟಕದಲ್ಲಿ ಪ್ರವಾಹ ಪರಿಸ್ಥಿತಿ ಇದೆ. ಹಲವು ಜಿಲ್ಲೆಗಳಲ್ಲಿ ಜನರಿಗೆ ತಿನ್ನಲು ಊಟ ಇಲ್ಲದ ಸ್ಥಿತಿ ಇದೆ. ಮಾಧ್ಯಮಗಳಲ್ಲಿ ದೃಶ್ಯಗಳನ್ನು ನೋಡಿದರೆ ಕಣ್ಣೀರು ಬರುತ್ತದೆ ಎಂದು ಬೇಸರ ವ್ಯಕ್ತಪಡಿಸಿದರು.

ದಕ್ಷಿಣ ಕರ್ನಾಟಕ ಸೇಫ್‌ ಆಗಿದೆ. ಆದರೆ, ಉತ್ತರ ಕರ್ನಾಟಕದ ಬಗ್ಗೆ ಕನಿಕರವಿಲ್ಲ. ಪ್ರವಾಹ ಪೀಡಿತ ಪ್ರದೇಶಗಳ ಕಡೆ ಗಮನಿಸಿ ಎಂದು ಪ್ರತಾಪ್ ಸಿಂಹಗೆ ಸಲಹೆ ನೀಡಿದರು. ಪ್ರತಾಪ್ ಸಿಂಹ, ಪ್ರಕಾಶ್ ರೈ ಅವರ ಪ್ರಕರಣ ರಾಜಿಯಲ್ಲಿ ಗೊಂದಲ ಮೂಡಿದ ಹಿನ್ನೆಲೆಯಲ್ಲಿ ವಿಚಾರಣೆಯನ್ನು ನ್ಯಾಯಾಲಯ ಮುಂದೂಡಿದೆ.

ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಹಾಲ್‌ ನಂ. 82ರಲ್ಲಿ ಪ್ರಕಾಶ್ ರಾಜ್‌ ಹಾಗೂ ಪ್ರತಾಪ್ ಸಿಂಹ ಹಾಜರಾಗಿದ್ದರು. ಈ ವೇಳೆ ಪ್ರಕರಣವನ್ನು ಇಬ್ಬರೂ ಸೇರಿ ಇತ್ಯರ್ಥಪಡಿಸಿಕೊಳ್ಳುವುದಾಗಿ ನ್ಯಾಯಾಧೀಶರ ಮುಂದೆ ಜಂಟಿ ಅರ್ಜಿ ಸಲ್ಲಿಸಿದರು.

ಪ್ರಕರಣ ಹಿಂಪಡೆಯುತ್ತಿದ್ದಂತೆ ಟ್ವಿಟರ್‌ನಲ್ಲಿ ನಟ ಪ್ರಕಾಶ್ ರೈ ಅವರ ಕ್ಷಮೆ ಕೋರಿರುವ ಪ್ರತಾಪ್ ಸಿಂಹ, “ಆತ್ಮೀಯ ಪ್ರಕಾಶ್ ರಾಜ್‌ ಅವರೇ, ನಿಮ್ಮ ಹಾಗೂ ನಿಮ್ಮ ಕುಟುಂಬದ ಮಾನಹಾನಿಯಾಗುವಂತಹ ಬರಹವನ್ನು 2017ರ ಅ. 2 ಮತ್ತು 3 ರಂದು ಬರೆದಿದ್ದೆ. ಆದರೆ, ಇದು ಅನಗತ್ಯ ಮತ್ತು ನೋವಿನ ವಿಚಾರ ಎಂದು ಅರಿವಾಗಿದೆ. ಹೀಗಾಗಿ ಈ ಟ್ವಿಟರ್ ಮತ್ತು ಎಫ್​ಬಿಯಲ್ಲಿ ಬರೆಯಲಾಗಿರುವ ಬರಹವನ್ನು ಹಿಂತೆಗೆದುಕೊಳ್ಳುತ್ತಿದ್ದೇನೆ ಮತ್ತು ವಿಷಾದಿಸುತ್ತೇನೆ” ಎಂದಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿರುವ ನಟ ಪ್ರಕಾಶ್ ರಾಜ್‌, ಧನ್ಯವಾದಗಳು ಪ್ರತಾಪ್ ಸಿಂಹ. ನಮ್ಮ ನಡುವೆ ಹಲವು ವೈಚಾರಿಕ ಭಿನ್ನಾಭಿಪ್ರಾಯಗಳು ಇರಬಹುದು. ಆದರೆ, ವ್ಯಯಕ್ತಿಕ ಜೀವನದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅವಹೇಳನ ಮಾಡುವುದು ತಪ್ಪು. ನಾವಿಬ್ಬರೂ ತಮ್ಮದೇ ಕ್ಷೇತ್ರಗಳಲ್ಲಿ ಉನ್ನತ ಮಟ್ಟಕ್ಕೆ ಏರಿದ್ದೇವೆ. ಹೀಗಾಗಿ ನಾವು ಮತ್ತೊಬ್ಬರಿಗೆ ಮಾದರಿಯಾಗುವಂತೆ ಬದುಕುವುದು ನಮ್ಮ ಕರ್ತವ್ಯ. ನಿಮಗೆ ಒಳ್ಳೆಯದಾಗಲಿ ಎಂದು ತಿಳಿಸಿದ್ದಾರೆ. (ದಿಗ್ವಿಜಯ ನ್ಯೂಸ್)

Stay connected

278,751FansLike
588FollowersFollow
628,000SubscribersSubscribe

ವಿಡಿಯೋ ನ್ಯೂಸ್

VIDEO| ಕ್ರಿಕೆಟ್​​ ಮೈದಾನಕ್ಕೆ ಎಂಟ್ರಿ ಕೊಟ್ಟು ಪಂದ್ಯವನ್ನೇ ಕೆಲಕಾಲ ನಿಲ್ಲಿಸಿದ...

ಹೈದರಾಬಾದ್​: ಮಳೆಯ ಕಾರಣದಿಂದಾಗಿ ಕ್ರಿಕೆಟ್​ ಪಂದ್ಯಗಳು ಕೆಲಕಾಲ ಸ್ಥಗಿತಗೊಳ್ಳುವುದನ್ನು ನಾವು ನೋಡಿದ್ದೇವೆ. ಆದರೆ, ಹಾವಿನಿಂದಾಗಿ ಪಂದ್ಯ ಕೆಲಕಾಲ ನಿಲ್ಲುವುದನ್ನು ಎಂದಾದರೂ ನೋಡಿದ್ದೀರಾ? ಇಲ್ಲ ಎಂದಾದಲ್ಲಿ ನಾವು ತೋರಿಸುತ್ತೇವೆ ನೋಡಿ.... ಡಿಸೆಂಬರ್​ 9ರ...

VIDEO: ನಮಾಮಿ ಗಂಗಾ ಯೋಜನೆ ಪ್ರಗತಿ ಪರಿಶೀಲನೆ ಮುಗಿಸಿ ವಾಪಸ್​...

ಲಖನೌ: ಪ್ರಧಾನಿ ನರೇಂದ್ರ ಮೋದಿಯವರು ನ್ಯಾಷನಲ್ ಗಂಗಾ ಕೌನ್ಸಿಲ್​ನ ಮೊದಲ ಸಭೆಯನ್ನು ಇಂದು ಕಾನ್ಪುರದಲ್ಲಿ ನಡೆಸಿದ್ದಾರೆ. ಸಭೆಯಲ್ಲಿ ನಮಾಮಿ ಗಂಗಾ ಯೋಜನೆಯ ಮುಂದಿನ ಹಂತಗಳು, ನದಿ ಸ್ವಚ್ಛತೆಗೆ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ನರೇಂದ್ರ ಮೋದಿ...

ವಿಡಿಯೋ | ಪತ್ನಿಗಾಗಿ ಆತ ಮಾಡಿದ ಆ ಕೆಲಸಕ್ಕೆ ನೆಟ್ಟಿಗರ...

ಈತ ತನ್ನ ಮಡದಿಗಾಗಿ ಮಾಡಿದ ಆ ಕೆಲಸದಿಂದ ಸಾಮಾಜಿಕ ಜಾಲತಾಣಗಳಲ್ಲಿ ಅಪಾರ ಪ್ರಶಂಸೆ ಪಡೆದಿದ್ದಾನೆ. ಚೀನಾದ ಹೆಗಾಂಗ್​ನ ಪೊಲೀಸರು ಇಂತಹ ವೀಡಿಯೊಂದನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋ ವೀಕ್ಷಿಸಿದ ಸಾವಿರಾರು ಮಂದಿ ಅದಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ. ಆ...

VIDEO: ಕಾನ್ಪುರದಲ್ಲಿ ನ್ಯಾಷನಲ್​ ಗಂಗಾ ಕೌನ್ಸಿಲ್​ ಮೊದಲ ಸಭೆ: ಅಟಲ್​...

ಕಾನ್ಪುರ: ಪ್ರಧಾನಿ ನರೇಂದ್ರ ಮೋದಿಯವರು ಇಂದು ಕಾನ್ಪುರಕ್ಕೆ ತೆರಳಿದ್ದು ನ್ಯಾಷನಲ್​ ಗಂಗಾ ಕೌನ್ಸಿಲ್​ನ ಮೊದಲ ಸಭೆ ನಡೆಸಿದ್ದಾರೆ. ಉತ್ತರ ಪ್ರದೇಶದ ಕಾನ್ಪುರಕ್ಕೆ ತಲುಪಿದ ಅವರನ್ನು ಅಲ್ಲಿನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರು ಸ್ವಾಗತಿಸಿದರು. ಬಳಿಕ...

ಮನೆಗೆಲಸದ ಯುವತಿ ಮೇಲೆ ಮೌಲ್ವಿಯಿಂದ ಅತ್ಯಾಚಾರ: ಐರನ್​ ಬಾಕ್ಸ್​ನಿಂದ ಮೈಯೆಲ್ಲ...

ಬೆಂಗಳೂರು: ಮನೆಯ ಕೆಲಸಕ್ಕಿದ್ದ ಯುವತಿಯ ಮೇಲೆ ಅತ್ಯಾಚಾರ ಎಸಗಿ, ಐರನ್​ ಬಾಕ್ಸ್​ನಿಂದ ಮೈಯೆಲ್ಲಾ ಸುಟ್ಟು ಮೌಲ್ವಿಯೊಬ್ಬ ವಿಕೃತ ಮೆರೆದಿರುವ ಆರೋಪ ರಾಜ್ಯ ರಾಜಧಾನಿಯಲ್ಲಿ ಕೇಳಿಬಂದಿದೆ. ನಗರದ ಕೋರಮಂಗಲದಲ್ಲಿ ಪೈಶಾಚಿಕ ಕೃತ್ಯ ನಡೆದಿದೆ...

ಕಾಂಗ್ರೆಸ್​ನಿಂದ ಭಾರತ್​ ಬಚಾವೋ ಬೃಹತ್​ ರ‍್ಯಾಲಿ: ಬಿಜೆಪಿ ವಿರುದ್ಧ ಹರಿಹಾಯ್ದ...

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹಲವು ಕ್ರಮಗಳು ಹಾಗೂ ದೇಶದಲ್ಲಿ ಕುಸಿಯುತ್ತಿರುವ ಅರ್ಥ ವ್ಯವಸ್ಥೆ ಹಾಗೂ ಉದ್ಯೋಗಾವಕಾಶಗಳ ಬಗ್ಗೆ ಜನರಿಗೆ ತಿಳಿಸಲು ಕಾಂಗ್ರೆಸ್,​ ರಾಷ್ಟ್ರ ರಾಜಧಾನಿಯಲ್ಲಿ "ಭಾರತ್​ ಬಚಾವೋ"...