ಪದವಿ ಕಾಲೇಜು ಪ್ರಾಧ್ಯಾಪಕರ ವರ್ಗಾವಣೆ ವೇಳಾಪಟ್ಟಿ ಪ್ರಕಟ: ಮೇ 29ರಿಂದ ಪ್ರಕ್ರಿಯೆ ಆರಂಭ, ಏನೆಲ್ಲ ನಿಯಮ ಪಾಲಿಸಬೇಕು? ಇಲ್ಲಿದೆ ಮಾಹಿತಿ

transfer
Published on

ಬೆಂಗಳೂರು: ಕಾಲೇಜು ಶಿಕ್ಷಣ ಇಲಾಖೆಯು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಬೋಧಕರ 2025ನೇ ಸಾಲಿನ ವರ್ಗಾವಣೆ ವೇಳಾಪಟ್ಟಿಯನ್ನು ಪ್ರಕಟಿಸಿದೆ.

ಸಾರ್ವಜನಿಕ ಹಿತದೃಷ್ಟಿಯಿಂದ ಕಡ್ಡಾಯ ಹಾಗೂ ವಿಶೇಷ ಪ್ರಕಕರಣಗಳ ಕೋರಿಕೆ ವರ್ಗಾವಣೆಗಳನ್ನು ಪ್ರತಿ ಕ್ಯಾಲೆಂಡರ್ ವರ್ಷದ ಮೇ ಮತ್ತು ಜುಲೈ ನಡುವೆ ಕೈಗೊಳ್ಳಲು ಅವಕಾಶ ಕಲ್ಪಿಸಲಾಗಿದೆ. ಶೇ.9ರಷ್ಟು ಸಾರ್ವಜನಿಕ ಹಿತಾಸಕ್ತಿ ಹಾಗೂ ಶೇ.6ರಷ್ಟು ವಿಶೇಷ ಪ್ರಕರಣಗಳ ಕೋರಿಕೆ ವರ್ಗಾವಣೆ ಪ್ರಕ್ರಿಯೆ ನಡೆಸಲಾಗುತ್ತದೆ ಎಂದು ಉನ್ನತ ಶಿಕ್ಷಣ ಇಲಾಖೆ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸಾರ್ವಜನಿಕ ಹಿತಾಸಕ್ತಿಯ ಕಡ್ಡಾಯ ವರ್ಗಾವಣೆ ಆದ್ಯತಾ ಪಟ್ಟಿಯಲ್ಲಿ ಇಲ್ಲದಿದ್ದಲ್ಲಿ ಒಂದೇ ಸ್ಥಳ/ಒಂದೇ ತಾಲ್ಲೂಕಿನಲ್ಲಿ ಕರ್ತವ್ಯ ನಿರ್ವಹಿಸುಸುತ್ತಿರುವ ದಂಪತಿ ಪತಿ-ಪತ್ನಿ ವಿಶೇಷ ಪ್ರಕರಣದ ಅಡಿಯಲ್ಲಿ ವರ್ಗಾವಣೆಗೆ ಅರ್ಜಿ ಸಲ್ಲಿಸಿದ್ದಲ್ಲಿ ಪರಿಗಣಿಸುವುದಿಲ್ಲ ಎಂಬ ಸೂಚನೆ ನೀಡಿದೆ. ವರ್ಗಾವಣೆ ಕೋರಿ ಸಲ್ಲಿಸುವ ಅರ್ಜಿಗಳನ್ನು ಆನ್‌ಲೈನ್‌ನಲ್ಲಿ ಮಾತ್ರ ಪರಿಗಣಿಸಲಾಗುವುದು. ಭೌತಿಕವಾಗಿ ಸಲ್ಲಿಸುವ ಅರ್ಜಿಗಳನ್ನು ಪರಿಗಣಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ವರ್ಗಾವಣೆ ವೇಳಾಪಟ್ಟಿ

  1. ಮೇ 29 ಸಾರ್ವಜನಿಕ ಹಿತಾಸಕ್ತಿಯ ವರ್ಗಾವಣೆಗೆ ಒಳಪಡಲಿರುವ ಬೋಧಕರ ವಲಯವಾರು ಮತ್ತು ವರ್ಗವಾರು ತಾತ್ಕಾಲಿಕ ಪಟ್ಟಿ ಪ್ರಕಟ
  2. ವಿಶೇಷ ಪ್ರಕರಣಗಳಡಿ ಕೋರಿಕೆ ವರ್ಗಾವಣೆ ಮತ್ತು ಸಾರ್ವಜನಿಕ ಹಿತಾಸಕ್ತಿಯ ವರ್ಗಾವಣೆಯಿಂದ ವಿನಾಯಿತಿ ಕೋರಿ ಅರ್ಜಿ ಆಹ್ವಾನ
  3. ಜೂ.6 ವರ್ಗಾವಣೆಯಿಂದ ವಿನಾಯಿತಿ ಕೋರಿ ಅರ್ಜಿ ಸಲ್ಲಿಸಲು ಕೊನೆಯ ದಿನ
  4. ಜೂ.9 ಗಂಭೀರ ಕಾಯಿಲೆಗಳ ವರ್ಗದ ಅಡಿಯಲ್ಲಿ ವರ್ಗಾವಣೆಯನ್ನು ಕ್ಲೈಮ್ ಮಾಡುವವರಿಗೆ ವೈದ್ಯಕೀಯ ಪರೀಕ್ಷೆ
  5. ಜೂ.16 ವರ್ಗಾವಣೆಯ ತಾತ್ಕಾಲಿಕ ಆದ್ಯತಾ ಪಟ್ಟಿ ಪ್ರಕಟ
  6. ಜೂ.19 ಆದ್ಯತಾ ಪಟ್ಟಿಗೆ ಆಕ್ಷೇಪಣೆ ಸಲ್ಲಿಸಲು ಕೊನೆಯ ದಿನ
  7. ಜೂ.21 ಆದ್ಯತಾ ಪಟ್ಟಿ ಮತ್ತು ಕೌನ್ಸೆಲಿಂಗ್ ಮೂಲಕ ಭರ್ತಿ ಮಾಡುವ ಖಾಲಿ ಹುದ್ದೆಗಳ ಪ್ರಕಟ
  8. ಜೂ.23ರಿಂದ 26 ವಿಶೇಷ ಪ್ರಕರಣಗಳ ಮೊದಲ ಮತ್ತು ಎರಡನೇ ಸುತ್ತಿನ ಕೌನ್ಸೆಲಿಂಗ್, ಸಾರ್ವಜನಿಕ ಹಿತಾಸಕ್ತಿಯ ವರ್ಗಾವಣೆ ಕೌನ್ಸೆಲಿಂಗ್
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net