More

    ಎಲ್ಲ ವರ್ಗದವರಿಗೂ ಲ್ಯಾಪ್​ಟಾಪ್ ವಿತರಿಸಲು ಎನ್​ಎಸ್​ಯುುಐ ಕಾರ್ಯಕರ್ತರ ಒತ್ತಾಯ

    ಶಿವಮೊಗ್ಗ: ಪ್ರಥಮ ವರ್ಷದ ಪದವಿ ವಿದ್ಯಾರ್ಥಿಗಳಿಗೆ ಮಾತ್ರ ನೀಡುತ್ತಿರುವ ಉಚಿತ ಲ್ಯಾಪ್​ಟಾಪ್ ಯೋಜನೆಯನ್ನು ಎಲ್ಲಾ ವರ್ಗದ ವಿದ್ಯಾರ್ಥಿಗಳಿಗೂ ವಿಸ್ತರಿಸಬೇಕು ಎಂಂದು ಒತ್ತಾಯಿಸಿ ಎನ್​ಎಸ್​ಯುುಐ ಕಾರ್ಯಕರ್ತರು ಬುಧವಾರ ಡಿಸಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

    ಈ ಹಿಂದೆ ಕಾಂಗ್ರೆಸ್ ಸರ್ಕಾರ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್​ಟಾಪ್ ಯೋಜನೆ ಜಾರಿಗೆ ತಂದಿತ್ತು. ಬಡ, ಮಧ್ಯಮ ಹಾಗೂ ಗ್ರಾಮೀಣ ವಿದ್ಯಾರ್ಥಿಗಳಿಗೆ ಇದರಿಂದ ಅನುಕೂಲವಾಗಿತ್ತು. ಆದರೆ ಕಳೆದ ವರ್ಷ ಈ ಯೋಜನೆಯಡಿ ವಿದ್ಯಾರ್ಥಿಗಳಿಗೆ ಲ್ಯಾಪ್​ಟಾಪ್ ವಿತರಣೆ ಮಾಡಿಲ್ಲ. ಇದೀಗ ರಾಜ್ಯ ಸರ್ಕಾರ ಮತ್ತೆ ಪ್ರಥಮ ವರ್ಷದ ಪದವಿ ವಿದ್ಯಾರ್ಥಿಗಳಿಗೆ ಮಾತ್ರ ಲ್ಯಾಪ್​ಟಾಪ್ ನೀಡುತ್ತಿದೆ ಎಂದು ಆಕ್ಷೇಪ ವ್ಯಕ್ತಪಡಿಸಿದರು.

    ಕಳೆದ 2 ವರ್ಷಗಳಿಂದ ವಿದ್ಯಾರ್ಥಿಗಳಿಗೆ ಲ್ಯಾಪ್​ಟಾಪ್ ದೊರೆಯದಿರುವುದರಿಂದ ದ್ವಿತೀಯ ಹಾಗೂ ತೃತೀಯ ವರ್ಷದ ಪದವಿಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಈ ಯೋಜನೆಯಿಂದ ವಂಚಿತರಾಗಿದ್ದಾರೆ. ಹೀಗಾಗಿ ಎಲ್ಲಾ ಪದವಿ ವಿದ್ಯಾರ್ಥಿಗಳಿಗೆ ಮತ್ತು ಎಲ್ಲ ವರ್ಗದ ವಿದ್ಯಾರ್ಥಿಗಳಿಗೆ ಲ್ಯಾಪ್​ಟಾಪ್ ನೀಡಬೇಕು ಎಂದು ಒತ್ತಾಯಿಸಿದರು.

    ಎನ್​ಎಸ್​ಯುುಐ ರಾಜ್ಯ ಉಪಾಧ್ಯಕ್ಷ ಕೆ.ಚೇತನ್, ಜಿಲ್ಲಾಧ್ಯಕ್ಷ ಎಚ್.ಬಾಲಾಜಿ, ಕಾರ್ಯಾಧ್ಯಕ್ಷ ವಿನಯ್, ನಗರಾಧ್ಯಕ್ಷ ವಿಜಯ್, ಗ್ರಾಮಾಂತರ ಅಧ್ಯಕ್ಷ ರವಿ, ಪ್ರಮುಖರಾದ ನಿತಿನ್, ಶಿವು, ಆಲ್ವಿನ್, ವಿನ್ಯಾಸ್, ಚಂದ್ರೋಜಿರಾವ್, ಅಬ್ದುಲ್ಲಾ, ಆಕಾಶ್, ಸಂದೀಪ, ದರ್ಶನ್, ಹೇಮಂತ್ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts