ವರುಣನ ಆರ್ಭಟಕ್ಕೆ ನಲುಗಿದ ಡೆಹ್ರಾಡೂನ್‌: ಕೇಂದ್ರ ಸರ್ಕಾರ ಉತ್ತರಾಖಂಡದೊಂದಿಗೆ ದೃಢವಾಗಿ ನಿಲ್ಲುತ್ತದೆ ಎಂದ ಮೋದಿ| Uttarakhand

Dehradun
Published on

Uttarakhand: ಉತ್ತರಾಖಂಡದ ಡೆಹ್ರಾಡೂನ್‌ನಲ್ಲಿ ರಾತ್ರಿ ಸುರಿದ ಭಾರೀ ಮಳೆಯಿಂದಾಗಿ ಮೇಘಸ್ಫೋಟ ಸಂಭವಿಸಿದ್ದು, ತಪೋವನ್‌ನಲ್ಲಿ ಹಲವಾರು ಮನೆಗಳು ಮುಳುಗಿ ಸಹಸ್ರಧಾರ ಮತ್ತು ಐಟಿ ಪಾರ್ಕ್ ಪ್ರದೇಶದಲ್ಲಿ ತೀವ್ರ ಜಲಾವೃತವಾಗಿದೆ. ಇಬ್ಬರು ಜನರು ಕಾಣೆಯಾಗಿದ್ದಾರೆ ಎಂದು ವರದಿಯಾಗಿದೆ.

ಉತ್ತರಾಖಂಡದ ಕಾರ್ಲಿಗಾಡ್ ನದಿಯಲ್ಲಿ ಉಂಟಾದ ಭಾರೀ ಪ್ರವಾಹದಿಂದ ಸುತ್ತಮುತ್ತಲಿನ ಪ್ರದೇಶದಲ್ಲಿ ತೀವ್ರ ಹಾನಿ ಸಂಭವಿಸಿದ್ದು, ಈ ಪ್ರದೇಶದ ಜನರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ. ಅಲ್ಲದೆ, ನಿರಂತರ ಮಳೆಯಿಂದಾಗಿ ನದಿ ಅಪಾಯದ ಮಟ್ಟ ಮೀರಿದ್ದು, ಪ್ರಮುಖ ಸೇತುವೆ ಕುಸಿದು, ದಡದಲ್ಲಿರುವ ಆಸ್ತಿಪಾಸ್ತಿಗಳಿಗೆ ತೀವ್ರ ಹಾನಿಯಾಗಿದೆ.

ಈ ಪ್ರವಾಹದ ಬಗ್ಗೆ ಎಕ್ಸ್​ನಲ್ಲಿ ಪೋಸ್ಟ್​ ಮಾಡಿರುವ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ, ಡೆಹ್ರಾಡೂನ್‌ನ ಸಹಸ್ರಧಾರದಲ್ಲಿ ಭಾರೀ ಮಳೆಯಿಂದಾಗಿ ಕೆಲವು ಅಂಗಡಿಗಳು ಹಾನಿಗೊಳಗಾಗಿವೆ. ಅಲ್ಲದೆ, ಸ್ಥಳೀಯ ಆಡಳಿತದೊಂದಿಗೆ ಸಂಪರ್ಕದಲ್ಲಿದ್ದೇನೆ ಮತ್ತು ಪರಿಸ್ಥಿತಿಯನ್ನು ವೈಯಕ್ತಿಕವಾಗಿ ಮೇಲ್ವಿಚಾರಣೆ ಮಾಡುತ್ತಿದ್ದಾರೆ ಎಂದು ಧಾಮಿ ಭರವಸೆ ನೀಡಿದರು.

ಪ್ರವಾಹದ ಬಗ್ಗೆ ದೂರವಾಣಿ ಕರೆಯ ಮೂಲಕ ಪರಿಸ್ಥಿತಿಯನ್ನು ವಿಚಾರಿಸಿರುವ ಪ್ರಧಾನಿ ಮೋದಿ, ಸಿಎಂ ಧಾಮಿರೊಂದಿಗೆ ದೂರವಾಣಿ ಮೂಲಕ ಮಾತನಾಡಿ ಪರಿಸ್ಥಿತಿಯನ್ನು ಅವಲೋಕಿಸಿದ್ದಾರೆ. ಅಲ್ಲದೆ, ಕೇಂದ್ರದಿಂದ ಸಂಪೂರ್ಣ ಸಹಕಾರ ನೀಡಲಿದ್ದು. ಈ ವಿಪತ್ತಿನ ಸಮಯದಲ್ಲಿ ಕೇಂದ್ರ ಸರ್ಕಾರ ಉತ್ತರಾಖಂಡದೊಂದಿಗೆ ದೃಢವಾಗಿ ನಿಲ್ಲುತ್ತದೆ ಎಂದು ಮೋದಿ ಹೇಳಿದ್ದಾರೆ.

ಘಟನೆಯ ಮಾಹಿತಿ ಪಡೆದು ಸ್ಥಳಕ್ಕೆ ಆಗಮಿಸಿದ ಜಿಲ್ಲಾ ಮ್ಯಾಜಿಸ್ಟ್ರೇಟ್ ಸವಿನ್ ಬನ್ಸಾಲ್, ಉಪ ವಿಭಾಗೀಯ ಮ್ಯಾಜಿಸ್ಟ್ರೇಟ್ (SDM) ಕುಂಕುಮ್ ಜೋಶಿ ಮತ್ತು ಇತರ ಅಧಿಕಾರಿಗಳು ರಾತ್ರಿಯ ಸಮಯದಲ್ಲಿ ಪರಿಹಾರ ಕಾರ್ಯಾಚರಣೆಗಳ ಮೇಲ್ವಿಚಾರಣೆಯನ್ನು ನೋಡಿಕೊಂಡಿದ್ದಾರೆ. ಆದರೆ, ಪ್ರವಾಹದಲ್ಲಿ ಕಾಣೆಯಾದ ಇಬ್ಬರು ವ್ಯಕ್ತಿಗಳನ್ನು ಹುಡುಕಲು ಮತ್ತು ರಕ್ಷಿಸಲು ಬನ್ಸಾಲ್ ರಕ್ಷಣಾ ತಂಡಗಳಿಗೆ ಆದೇಶ ನೀಡಿದರು.

ಪ್ರವಾಹ ಪೀಡಿತ ಪ್ರದೇಶಗಳಲ್ಲಿ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‌ಡಿಆರ್‌ಎಫ್), ರಾಜ್ಯ ವಿಪತ್ತು ನಿರ್ವಹಣಾ ಪಡೆ (ಎಸ್‌ಡಿಆರ್‌ಎಫ್) ಮತ್ತು ಕೇಂದ್ರ ಲೋಕೋಪಯೋಗಿ ಇಲಾಖೆ (ಪಿಡಬ್ಲ್ಯೂಡಿ) ಅಧಿಕಾರಿಗಳು ಸ್ಥಳದಲ್ಲಿ ಬುಲ್ಡೋಜರ್‌ಗಳೊಂದಿಗೆ ರಕ್ಷಣಾ ಕಾರ್ಯದಲ್ಲಿ ತೊಡಗಿದ್ದಾರೆ.

ಡೆಹ್ರಾಡೂನ್‌ನಲ್ಲಿರುವ 1 ರಿಂದ 12 ನೇ ತರಗತಿಯವರೆಗಿನ ಎಲ್ಲಾ ಶಾಲೆಗಳನ್ನು ಮುಚ್ಚುವ ಬಗ್ಗೆ ಜಿಲ್ಲಾ ಮ್ಯಾಜಿಸ್ಟ್ರೇಟ್ ಆದೇಶ ಹೊರಡಿಸಿದ್ದಾರೆ. ಆಗಸ್ಟ್ ತಿಂಗಳ ಆರಂಭದಲ್ಲಿ, ಉತ್ತರಾಖಂಡದ ಚಮೋಲಿ ಜಿಲ್ಲೆಯ ದೇವಲ್ ತೆಹಸಿಲ್ ವ್ಯಾಪ್ತಿಯ ಮೊಪಾಟಾ ಗ್ರಾಮದಲ್ಲಿ ಮೇಘಸ್ಫೋಟ ಸಂಭವಿಸಿದ ನಂತರ ಇಬ್ಬರು ಕಾಣೆಯಾಗಿದ್ದರು. (ಏಜೆನ್ಸೀಸ್)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net