ಗೆಜ್ಜೆಗಿರಿ ಕ್ಷೇತ್ರದಲ್ಲಿ ದೇಯಿ ಬೈದ್ಯೆತಿ ನೇಮ

Ism_Gejjegiri
Published on

ವಿಜಯವಾಣಿ ಸುದ್ದಿಜಾಲ ಪುತ್ತೂರು ಗ್ರಾಮಾಂತರ

ದೇಯಿ ಬೈದ್ಯೆತಿ, ಕೋಟಿ ಚೆನ್ನಯ ಮೂಲಸ್ಥಾನ ನಂದನಬಿತ್ತ್‌ಲ್ ಗೆಜ್ಜೆಗಿರಿ ಕ್ಷೇತ್ರದಲ್ಲಿ ಮಂಗಳವಾರ ರಾತ್ರಿ ದೇಯಿ ಬೈದ್ಯೆತಿ ನೇಮ, ಮಾತೆ ಮಕ್ಕಳ ಪುನೀತ ಸಮಾಗಮ, ಬೈದರ್ಕಳ ನೇಮ ನಡೆದು ಬುಧವಾರ ಬೆಳಗ್ಗೆ ಧ್ವಜಾವರೋಹಣದೊಂದಿಗೆ ವಾರ್ಷಿಕ ಜಾತ್ರಾ ಮಹೋತ್ಸವ ಸಂಪನ್ನಗೊಂಡಿತು.

ಕ್ಷೇತ್ರದ ತಂತ್ರಿ ಶಿವಾನಂದ ಶಾಂತಿ ನೇತೃತ್ವದಲ್ಲಿ ಮಂಗಳವಾರ ಮೂಲಸ್ಥಾನ ಗರಡಿಯಲ್ಲಿ ಶುದ್ಧಹೋಮ ಕಲಶ, ಧೂಮಾವತಿ ಬಲಿ ಸೇವೆ, ಸತ್ಯಧರ್ಮ ಚಾವಡಿಯಲ್ಲಿ ದೀಪಾರಾಧನೆ ಮಹಾಪೂಜೆ ಕಾರ್ಯಕ್ರಮ ನಡೆದ ಬಳಿಕ ಮೂಲಸ್ಥಾನ ಗರಡಿಯಿಂದ ಒಲಿಮದೆಯಿಂದ ಹೊರಟು ದೇಯಿ ಬೈದ್ಯೆತಿ ನೇಮ, ಮಾತೆ ಮಕ್ಕಳ ಪುನೀತ ಸಮಾಗಮ, ದೇಯಿ ಬೈದೆತಿ ಪ್ರಸಾದ ವಿತರಣೆ, ದೇಯಿ ಬೈದ್ಯೆತಿ ಸಮಾಧಿಯಲ್ಲಿ ದೀಪಾರಾಧನೆ, ಮೂಲಸ್ಥಾನ ಗರಡಿಯಲ್ಲಿ ಬೈದರ್ಕಳ ದರ್ಶನ ಸೇವೆ, ಬೈದರ್ಕಳ ನೇಮ, ಪ್ರಸಾದ ವಿತರಣೆ ನಡೆಯಿತು.

ಸಂಸದ ಬ್ರಿಜೇಶ್ ಚೌಟ, ಮಾಜಿ ಸಂಸದ ನಳಿನ್ ಕುಮಾರ್ ಕಟೀಲು, ಕುದ್ರೋಳಿ ಗೋಕರ್ಣನಾಥೇಶ್ವರ ದೇವಸ್ಥಾನ ಕೋಶಾಧಿಕಾರಿ ಪದ್ಮರಾಜ್ ಆರ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್, ಕರಾವಳಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಚನಿಲ ತಿಮ್ಮಪ್ಪ ಶೆಟ್ಟಿ, ರಾಜ್ಯ ಧಾರ್ಮಿಕ ಪರಿಷತ್ ಸದಸ್ಯೆ ಮಲ್ಲಿಕಾ ಪಕ್ಕಳ, ಪುತ್ತೂರು ರಾಮಕೃಷ್ಣ ಪ್ರೌಢ ಶಾಲೆ ಸಂಚಾಲಕ ಹೇಮನಾಥ ಶೆಟ್ಟಿ ಕಾವು, ಜಿಪಂ ಮಾಜಿ ಸದಸ್ಯೆ ಅನಿತಾ ಹೇಮನಾಥ ಶೆಟ್ಟಿ ಕಾವು, ಭಾರತ್ ಕೋ-ಆಪರೇಟಿವ್ ಬ್ಯಾಂಕ್ ಅಧ್ಯಕ್ಷ ಸೂರ್ಯಕಾಂತ್ ಜೆ.ಸುವರ್ಣ, ಕಾರ್ಪಾಡಿ ಸುಬ್ರಹ್ಮಣ್ಯ ದೇವಸ್ಥಾನ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಬೂಡಿಯಾರ್ ರಾಧಾಕೃಷ್ಣ ರೈ ಮತ್ತಿತರರು ಪಾಲ್ಗೊಂಡಿದ್ದರು.

ಗೆಜ್ಜೆಗಿರಿ ಕ್ಷೇತ್ರಾಡಳಿತ ಸಮಿತಿ ಅಧ್ಯಕ್ಷ ರವಿ ಪೂಜಾರಿ ಚಿಲಿಂಬಿ, ಪ್ರಧಾನ ಕಾರ್ಯದರ್ಶಿ ಡಾ.ರಾಜಾರಾಮ್ ಕೆ.ಬಿ, ಗೌರವಾಧ್ಯಕ್ಷರಾದ ಪೀತಾಂಬರ ಹೇರಾಜೆ, ಜಯಂತ ನಡುಬೈಲು, ಬಿಲ್ಲವ ಮಹಾಮಂಡಲ ಅಧ್ಯಕ್ಷ ರಾಜಶೇಖರ ಕೋಟ್ಯಾನ್, ಮೊಕ್ತೇಸರ ಶ್ರೀಧರ ಪೂಜಾರಿ, ಕೋಶಾಧಿಕಾರಿ ಮೋಹನದಾಸ್ ಬಂಗೇರ ವಾಮಂಜೂರು, ಉಪಾಧ್ಯಕ್ಷರಾದ ಉಲ್ಲಾಸ್ ಕೋಟ್ಯಾನ್, ದೀಪಕ್ ಕೋಟ್ಯಾನ್ ಗುರುಪುರ, ಜತೆ ಕಾರ್ಯದರ್ಶಿ ಜಯವಿಕ್ರಮ್ ಕಲ್ಲಾಪು ಉಪಸ್ಥಿತರಿದ್ದರು.

ಬುಧವಾರ ಬೆಳಗ್ಗೆ ಗಣಪತಿ ಹೋಮ, ಶುದ್ಧಿ ಕ್ರಿಯೆ, ಕಲಶಾಭಿಷೇಕ ನಡೆದ ಬಳಿಕ ಧ್ವಜಾವರೋಹಣ ನಡೆಯಿತು. ಗುರುಪೂಜೆ, ಪ್ರಸಾದ ವಿತರಣೆಯೊಂದಿಗೆ 5 ದಿನಗಳ ಕಾಲ ನಡೆದ ಜಾತ್ರಾ ಮಹೋತ್ಸವ ಸಂಪನ್ನಗೊಂಡಿತು.

ಅಮ್ಮನ ಮಡಿಲ ಪ್ರಸಾದ ಮುಂದುವರಿಕೆ ಅಭಯ

ಗೆಜ್ಜೆಗಿರಿ ಜಾತ್ರಾ ಮಹೋತ್ಸವ ಪ್ರಯುಕ್ತ ಮಾ.2ರಂದು ಮಾತೆಯರಿಗೆ ‘ಅಮ್ಮನ ಮಡಿಲ ಪ್ರಸಾದ’ ಕಾರ್ಯಕ್ರಮ ನಡೆಯಿತು. ಮಂಗಳವಾರ ರಾತ್ರಿ ನಡೆದ ದೇಯಿ ಬೈದ್ಯೆತಿ ನೇಮದಲ್ಲಿ ಈ ಕಾರ್ಯಕ್ರಮ ಮುಂದುವರಿಸಿಕೊಂಡು ಹೋಗುವಂತೆ ಕ್ಷೇತ್ರಾಡಳಿತ ಸಮಿತಿ ಪದಾಧಿಕಾರಿಗಳಿಗೆ ಅಭಯದ ನುಡಿ ನೀಡಿ, ದೇಯಿ ಬೈದ್ಯೆತಿ ಸ್ವತಃ ಮಾತೆಯರಿಗೆ ಪ್ರಸಾದ ನೀಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net