ಪ್ರತಿಪಕ್ಷ ನಾಯಕನ ಆಯ್ಕೆ ನಾಳೆಗೆ ಮುಂದೂಡಿಕೆ!

bjp tweet war
Published on

ಬೆಂಗಳೂರು: ಬಿಜೆಪಿ ಶಾಸಕಾಂಗ ಸಭೆ ನಾಳೆಗೆ ಮುಂದೂಡಿಕೆಯಾಗಿದ್ದು ಈ ಕುರಿತಾಗಿ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿಕೆ ನೀಡಿದ್ದಾರೆ.

ಈಗಾಗಲೇ ಸಿಎಂ ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್​ನ ನಾಯಕರು ಅನೇಕ ಬಾರಿ ಬಿಜೆಪಿಯನ್ನು ಪ್ರತಿಪಕ್ಷ ನಾಯಕನ ಆಯ್ಕೆ ಮಾಡದ ಕುರಿತಾಗಿ ಟೀಕೆ ಮಾಡಿದ್ದಾರೆ. ಆದರೆ ಇದೀಗ ಬಿಜೆಪಿಯ ಶಾಸಕಾಂಗ ಸಭೆಯೇ ನಾಳೆಗೆ ಮುಂದೂಡಿಕೆ ಆಗಿದೆ. ರಾಜ್ಯ ಬಿಜೆಪಿ, ಇಂದು ಮಧ್ಯಾಹ್ನ ನಂತರ ಶಾಸಕಾಂಗ ಸಭೆ ಕರೆಯಲು ಮುಂದಾಗಿತ್ತು. ಆದರೆ ದೆಹಲಿಯಿಂದ ಬಂದಿಳಿದ ಬಿಎಸ್​ವೈ ಸುದ್ದಿಗಾರರೊಂದಿಗೆ ವಿಪಕ್ಷ ನಾಯಕನ ಆಯ್ಕೆ ನಾಳೆಗೆ ಮುಂದೂಡಿಕೆಯಾಗಿದೆ ಎಂದಿದ್ದಾರೆ.

ದೆಹಲಿಗೆ ತೆರಳಿದ್ದ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ರಾಜ್ಯಕ್ಕೆ ವಾಪಸ್ ಆಗಿದ್ದು ವಿರೋಧ ಪಕ್ಷದ ನಾಯಕ ಆಯ್ಕೆ ವಿಚಾರವಾಗಿ ಹೇಳಿಕೆ ನೀಡಿದ್ದಾರೆ.

ಏರ್ಪೊಟ್​ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಯಡಿಯೂರಪ್ಪ "ನಾನು ಅಮಿತ್ ಷಾ ಹಾಗೂ ಬಿಜೆಪಿ ರಾಷ್ಟ್ರೀಯ ಅದ್ಯಕ್ಷ ನಡ್ಡಾ ಜೊತೆ ಸುಧಿರ್ಗ ಚರ್ಚೆ ಮಾಡಿದ್ದೇನೆ. ನಾಳೆ ವಿರೊಧ ಪಕ್ಷದ ನಾಯಕನನ್ನ ರಾಷ್ಟ್ರೀಯ ನಾಯಕರು ಘೊಷಣೆ ಮಾಡಲಿದ್ದಾರೆ" ಎಂದಿದ್ದಾರೆ.

ಟ್ವೀಟ್​ ಮಾಡಿ ಕುಟುಕಿದ್ದ ಕಾಂಗ್ರೆಸ್

ಇದೀಗ ಸದನ ಶುರುವಾಗಿದ್ದರೂ ವಿರೋಧಪಕ್ಷದ ನಾಯಕನ ಆಯ್ಕೆ ನಡೆಯದೇ ಇರುವ ಬಗ್ಗೆ ಕಾಂಗ್ರೆಸ್​ ಸರಣಿ ಟ್ವೀಟ್​ ಮಾಡಿ ಕುಟುಕಿದೆ.

ತನ್ನ ಟ್ವೀಟ್​ನಲ್ಲಿ ಕಾಂಗ್ರೆಸ್​ "ಸರ್ಕಾರ ರಚನೆ ಆಯ್ತು, ನಮ್ಮ ಸರ್ಕಾರ ಟೆಕಾಫ್ ಆಗಿ ಹಲವು ದಿನಗಳಾಯ್ತು. ನಮ್ಮ ಗ್ಯಾರಂಟಿ ಯೋಜನೆಗಳ ಜಾರಿಯೂ ಆಯ್ತು. dear @BJP4Karnataka ಸದನವೂ ಪ್ರಾರಂಭವಾಯ್ತು.ಎಲ್ಲಿ ನಿಮ್ಮ ವಿರೋಧ ಪಕ್ಷದ ನಾಯಕ? ಬಿಜೆಪಿಗೆ ವಿರೋಧ ಪಕ್ಷದ ನಾಯಕನ ಗ್ಯಾರಂಟಿಯನ್ನೂ ಕೊಡಲಾಗುತ್ತಿಲ್ಲ ಎಂದರೆ ಎಂತಹ ಹಿನಾಯ ಸ್ಥಿತಿಯಲ್ಲಿದೆ!" ಎಂದು ಕುಟುಕಿದೆ.

ಸದನಕ್ಕೆ ಬಿಜೆಪಿ ಕಪ್ಪು ಚುಕ್ಕೆ ಇಟ್ಟಿದ್ದು ಬಿಜೆಪಿ ಎಂದ ಕಾಂಗ್ರೆಸ್​!

ಮತ್ತೊಂದು ಟ್ವೀಟ್​ನಲ್ಲಿ ಕಾಂಗ್ರೆಸ್​, "ಬಿಜೆಪಿಗೆ ವಿರೋಧ ಪಕ್ಷದ ನಾಯಕನ ‘ಗ್ಯಾರಂಟಿ‘ಯೂ ಇಲ್ಲ. ವಿರೋಧ ಪಕ್ಷದ ನಾಯಕನಿಲ್ಲದೆ ಸದನ ಕಲಾಪ ನಡೆಯುತ್ತಿರುವುದು ಪ್ರಜಾಪ್ರಭುತ್ವ ವ್ಯವಸ್ಥೆಗೆ ಕಪ್ಪು ಚುಕ್ಕೆ. ಈ ಕಪ್ಪು ಚುಕ್ಕೆಯನ್ನಿಟ್ಟಿದ್ದು ಬಿಜೆಪಿ" ಆರೋಪ ಮಾಡಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net