More

    ಕೈಗಾರಿಕೆಗಳ ಸಮಸ್ಯೆ ನಿವಾರಣೆಗೆ ಸರ್ಕಾರಕ್ಕೆ ನಿಯೋಗ

    ರಾಯಚೂರು: ಕೈಗಾರಿಕೆಗಳು ಸ್ಥಳೀಯವಾಗಿ ಎದುರಿಸುತ್ತಿರುವ ಸಮಸ್ಯೆಗಳನ್ನು ನಿವಾರಿಸುವಂತೆ ಚುನಾವಣೆ ನೀತಿ ಸಂಹಿತೆ ಬಳಿಕ ಬೆಂಗಳೂರಿಗೆ ನಿಯೋಗ ತೆರಳಿ ಸರ್ಕಾರಕ್ಕೆ ಮನವಿ ಸಲ್ಲಿಸಲಾಗುವುದು ಎಂದು ಜಿಲ್ಲಾ ವಾಣಿಜ್ಯೋದ್ಯಮ ಸಂಘದ ಅಧ್ಯಕ್ಷ ಎಸ್.ಕಮಲಕುಮಾರ ಹೇಳಿದರು.
    ಸ್ಥಳೀಯ ಖಾಸಗಿ ಹೋಟೆಲ್ ಸಭಾಂಗಣದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಕಲ್ಯಾಣ ಕರ್ನಾಟಕ ಭಾಗದ ಜಿಲ್ಲೆಗಳ ವಾಣಿಜ್ಯೋದ್ಯಮ ಸಂಘದ ಪದಾಕಾರಿಗಳ ಸಭೆಯಲ್ಲಿ ಮಾತನಾಡಿ, ತೆರಿಗೆ ಮತ್ತು ವಿದ್ಯುತ್ ದರ ಹೆಚ್ಚಳ ಸೇರಿದಂತೆ ಹಲವಾರು ಸಮಸ್ಯೆಗಳು ಕೈಗಾರಿಕೆಗಳನ್ನು ಕಾಡುತ್ತಿದೆ ಎಂದರು.
    ಕೈಗಾರಿಕೆಗಳಿಗೆ ಸರ್ಕಾರದಿಂದ ತೆರಿಗೆ ವಿಸಲಾಗುತ್ತಿದ್ದು, ಸ್ಥಳೀಯವಾಗಿ ನಗರಸಭೆ ಮತ್ತು ಮಹಾನಗರ ಪಾಲಿಕೆಯಿಂದಲೂ ತೆರಿಗೆ ವಿಸಲಾಗುತ್ತಿದೆ. ಕೈಗಾರಿಕಾ ಇಲಾಖೆ ಅಕಾರಿಗಳೊಂದಿಗೆ ಸಭೆ ನಡೆಸಿ ಸರ್ಕಾರಕ್ಕೆ ಸ್ಥಳೀಯ ಬೇಡಿಕೆ ಆಧಾರದ ಮೇಲೆ ತೆರಿಗೆ ವಿಸುವ ಕುರಿತು ಸರ್ಕಾರದೊಂದಿಗೆ ಚರ್ಚಿಸಬೇಕಾಗಿದೆ ಎಂದು ಹೇಳಿದರು.
    ತೆರಿಗೆ ಸಲಹೆಗಾರರ ಸಂಘದ ಅಧ್ಯಕ್ಷ ರಾಮಚಂದ್ರ ಪ್ರಭು ಮಾತನಾಡಿ, ಪ್ರತಿ ವರ್ಷ ತೆರಿಗೆ ಹೆಚ್ಚಳದಿಂದಾಗಿ ಕೈಗಾರಿಕೆಗಳಿಗೆ ತೊಂದರೆಯಾಗುತ್ತಿದೆ. ಜತೆಗೆ ಗೃಹ ಮತ್ತು ಕೈಗಾರಿಕೆ ತೆರಿಗೆಯಲ್ಲಿ ಸಾಕಷ್ಟು ವ್ಯತ್ಯಾಸವಿದ್ದು, ಸರ್ಕಾರದ ಮೇಲೆ ಒತ್ತಡ ಹಾಕಿ ವಿನಾಯಿತಿ ಪಡೆಯಬೇಕಾಗಿದೆ ಎಂದರು.
    ಅಕ್ಕಿ ಗಿರಣಿ ಮಾಲೀಕರ ಸಂಘದ ಗೌರವಾಧ್ಯಕ್ಷ ಸಾವಿತ್ರಿ ಪುರುಷೋತ್ತಮ ಮಾತನಾಡಿ, ಎಪಿಎಂಸಿಯಲ್ಲಿ ತೆರಿಗೆಯನ್ನು 60 ಪೈಸೆಯಿಂದ 30 ಪೈಸೆಗೆ ಇಳಿಸಲು ಇಲಾಖೆ ಸಚಿವರು ಸಮ್ಮತಿಸಿದ್ದಾರೆ. ಚೆಕ್‌ಪೋಸ್ಟ್‌ನಲ್ಲಿನ ಸಮಸ್ಯೆ, ವಿದ್ಯುತ್ ತೆರಿಗೆ ಸೇರಿದಂತೆ ಸೇರಿದಂತೆ ಇನ್ನಿತರ ವಿಷಯಗಳ ಕುರಿತು ಚರ್ಚಿಸಲಾಗಿದೆ ಎಂದು ತಿಳಿಸಿದರು.
    ಸಭೆಯಲ್ಲಿ ಸಂಘದ ಪದಾಕಾರಿಗಳಾದ ವೆಂಕಟರೆಡ್ಡಿ, ತ್ರಿವಿಕ್ರಮ ಜೋಷಿ, ಯಶವಂತರಾಜ, ನಾಗರಾಜ ಮಸ್ಕಿ ಹಾಗೂ ಬಳ್ಳಾರಿ, ವಿಜಯನಗರ, ಕೊಪ್ಪಳ, ಕಲಬುರಗಿ, ಬೀದರ್, ಯಾದಗಿರಿ ಜಿಲ್ಲೆಗಳ ಸಂಘದ ಪದಾಕಾರಿಗಳು ಉಪಸ್ಥಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts