More

    ತಾಯಿಯ ಹೊಟ್ಟೆಯಲ್ಲಿದ್ದ ಮಗುವಿನ ಹೃದಯ ಶಸ್ತ್ರಚಿಕಿತ್ಸೆ; ಏಮ್ಸ್‌ ವೈದ್ಯರಿಂದ ಯಶಸ್ವಿ ಚಿಕಿತ್ಸೆ

    ನವದೆಹಲಿ: ಅಖಿಲ ಭಾರತ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (ಏಮ್ಸ್)‌ ವೈದ್ಯರು ತಾಯಿ ಗರ್ಭದಲ್ಲಿರುವ ಮಗುವಿನ ಹೃದಯದ ಶಸ್ತ್ರಚಿಕಿತ್ಸೆಯನ್ನು ಯಶಸ್ವಿಯಾಗಿ ಮಾಡಿದ್ದಾರೆ.

    ಈ ಹಿಂದೆ ಮೂರು ಬಾರಿ ಗರ್ಭಪಾತಕ್ಕೆ ಒಳಗಾಗಿದ್ದ 28 ವರ್ಷದ ಗರ್ಭಿಣಿಯೊಬ್ಬರು ಏಮ್ಸ್‌ಗೆ ದಾಖಲಾಗಿದ್ದರು. ಮಗುವಿನ ಹೃದಯ ಸ್ಥಿತಿ ಆರೋಗ್ಯವಾಗಿರಲಿಲ್ಲ. ಶಸ್ತ್ರಚಿಕಿತ್ಸೆ ಮೂಲಕ ಸರಿಪಡಿಸಬಹುದೆಂದೂ ವೈದ್ಯರು ತಿಳಿಸಿದ್ದರು. ದಂಪತಿ ಶಸ್ತ್ರ ಚಿಕಿತ್ಸೆಗೆ ಒಪ್ಪಿಗೆ ನೀಡಿದ್ದರು.

    ಇದನ್ನೂ ಓದಿ: ತಾಯಿ ಕಣ್ಮುಂದೆ ಕಟ್ಟಡದ ಮೇಲಿನಿಂದ ಬಿದ್ದು ಪ್ರಾಣ ಕಳೆದುಕೊಂಡ ಮಗು

    ಏಮ್ಸ್‌ನ ಕಾರ್ಡಿಯೋಥೊರಾಸಿಕ್ ಸೈನ್ಸಸ್ ಸೆಂಟರ್‌ನ ತಜ್ಞರ ತಂಡವು ಯಶಸ್ವಿಯಾಗಿ ಶಸ್ತ್ರಚಿಕಿತ್ಸೆ ಮಾಡಿದ್ದು, ತಜ್ಞರ ತಂಡವು ತಾಯಿಯ ಆರೋಗ್ಯದ ಮೇಲೆ ನಿಗಾ ವಹಿಸಿದೆ. ತಾಯಿ ಹಾಗೂ ಭ್ರೂಣದ ಆರೋಗ್ಯ ಸ್ಥಿರವಾಗಿದೆ.

    ಈ ಕುರಿತಾಗಿ ಮಾತನಾಡಿದ ವೈದ್ಯರು, ‘ಮಗು ತಾಯಿಯ ಉದರದಲ್ಲಿರುವಾಗಲೇ ಉಂಟಾಗುವ ಕೆಲವು ಹೃದಯ ಕಾಯಿಲೆಗಳನ್ನು ವಾಸಿ ಮಾಡಬಹುದು. ಹೊಟ್ಟೆಯಲ್ಲೇ ಅವುಗಳಿಗೆ ಚಿಕಿತ್ಸೆ ನೀಡುವುದರಿಂದ ಜನನದ ಬಳಿಕ ಮಗುವಿಗೆ ಮುಂದೆ ಯಾವುದೇ ಸಮಸ್ಯೆ ಕಾಣಿಸಿಕೊಳ್ಳುವುದಿಲ್ಲ. ಸಾಮಾನ್ಯ ಮಗುವಿನಂತೆ ಬೆಳವಣಿಗೆ ಉಂಟಾಗುತ್ತದೆ‘ ಎಂದು ವೈದ್ಯರು ಹೇಳಿದ್ದಾರೆ.

    ಇದನ್ನೂ ಓದಿ: ಡೆತ್​ ನೋಟ್​ ಬರೆದ ನಟಿ ಪಾಯಲ್​ ಘೋಷ್​ ; ನಾನು ಸತ್ತರೆ ಇವರೇ ಕಾರಣ..

    ಈ ಪ್ರಕ್ರಿಯೆಯನ್ನು ‘ಬಲೂನ್‌ ಡಿಲೇಷನ್‌‘ ಎನ್ನಲಾಗುತ್ತದೆ. ಅಲ್ಟ್ರಾಸೌಂಡ್ ತಂತ್ರಜ್ಞಾನದ ಮೂಲಕ ಈ ಪ್ರಕ್ರಿಯೆ ಮಾಡಲಾಗಿದ್ದು,. ಬಲೂನ್ ಕ್ಯಾತಿಟರ್ ಮೂಲಕ ರಕ್ತ ಪರಿಚಲನೆಗೆ ಅಡ್ಡಿಯಾಗಿದ್ದ ಕವಾಟವನ್ನು ತೆರೆದು ಯಶಸ್ವಿ ಶಸ್ತ್ರಚಿಕಿತ್ಸೆ ಮಾಡಿದ್ದೇವೆ. ಪ್ರಸವದ ವೇಳೆ ಯಾವುದೇ ತೊಂದರೆ ಇರುವುದಿಲ್ಲ ಎಂದು ಭಾವಿಸಿದ್ದೇವೆ ಎಂದು ತಜ್ಞರು ಹೇಳಿದ್ದಾರೆ.

    ಮೈತುಂಬಾ ಬಟ್ಟೆ ಧರಿಸದ ಪತ್ನಿಯ ಕತ್ತು ಸೀಳಿದ ಪತಿ!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts