ನವದೆಹಲಿ: ( Arvind Kejriwal ) ದೆಹಲಿ ವಿಧಾನಸಭಾ ಕ್ಷೇತದ ಚುನಾವಣೆ ಫಲಿತಾಂಶ ಪ್ರಕಟವಾಗುತ್ತಿದೆ. ಆಡಳಿತರೂಢ ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷಕ್ಕೆ ಭಾರೀ ಹಿನ್ನಡೆಯಾಗಿದ್ದು, ಅರವಿಂದ್ ಕೇಜ್ರಿವಾಲ್ ಸೋಲುಂಡಿದ್ದಾರೆ. ಬಿಜೆಪಿ ಮರಳಿ ಗದ್ದುಗೆ ಹಿಡಿಯೋದು ಪಕ್ಕಾ ಆಗಿದೆ.
ಮಾಜಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರು ನವ ದೆಹಲಿ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧೆ ಮಾಡಿದ್ದರು. ಬಿಜೆಪಿ ನಾಯಕ ಪರ್ವೇಶ್ ವರ್ಮಾ ಅವರು ಕೇಜ್ರಿವಾಲ್ಗೆ ಕಠಿಣ ಪೈಪೋಟಿ ನೀಡುತ್ತಿದ್ದರು. ಇಬ್ಬರ ನಡುವೆ ಗೆಲುವಿಗಾಗಿ ಜಿದ್ದಾಜಿದ್ದಿನ ಪೈಪೋಟಿ ನಡೆಯುತ್ತಿತ್ತು, ಕೆಲವೇ ಕೆಲವು ಮತಗಳ ಅಂತರದಲ್ಲಿ ಅರವಿಂದ್ ಕೇಜ್ರಿವಾಲ್ ಸೋತಿದ್ದಾರೆ.
ನವದೆಹಲಿ ಕ್ಷೇತ್ರದಿಂದ ಬಿಜೆಪಿಯ ಪರ್ವೇಶ್ ವರ್ಮಾ ವಿರುದ್ಧ ಅವರಿಗೆ ಸೋಲಾಗಿದೆ. ಇದು ಎಎಪಿಗೆ ಅರಗಿಸಿಕೊಳ್ಳಲಾರದ ತುತ್ತಾಗಿ ಪರಿಣಮಿಸಿದೆ. ಅಬಕಾರಿ ಹಗರಣ ಹಾಗೂ ಭ್ರಷ್ಟಾಚಾರ ಆರೋಪಗಳು ಕೇಜ್ರಿವಾಲ್ ಸೋಲಿಗೆ ಪ್ರಮುಖ ಕಾರಣಗಳು ಎನ್ನಲಾಗುತ್ತಿದೆ.
TAGGED:Arvind Kejriwal