ನವದೆಹಲಿ: 18ನೇ ಆವೃತ್ತಿಯ ಐಪಿಎಲ್ ಶುರುವಾಗುವುದಕ್ಕೆ ತಿಂಗಳುಗಳ ಬಾಕಿ ಉಳಿದಿದ್ದು, ಎಲ್ಲಾ ತಂಡಗಳು ಈಗಾಗಲೇ ಸಿದ್ದತೆಗಳನ್ನು ಆರಂಭಿಸಿವೆ. ಮೆಗಾ ಹರಾಜು, ಆಟಗಾರರ ಟ್ರೇಡ್ ಕೋಚ್ಗಳ ನೇಮಕಕ್ಕೆ ಸಂಬಂಧಿಸಿದಂತೆ 2025ರಲ್ಲಿ ನಡೆಯಲಿರುವ 18ನೇ ಆವೃತ್ತಿ ಸೌಂಡ್ ಮಾಡುತ್ತಿದ್ದು, ಈ ವಿಚಾರಕ್ಕೆ ಬರುವುದಾದರೆ ಡೆಲ್ಲಿ ಕ್ಯಾಪಿಟಲ್ಸ್ ಎಲ್ಲರಿಗಿಂತ ಮುಂದಿದೆ ಎಂದು ಹೇಳಿದರೆ ತಪ್ಪಾಗಲಾರದು.
ಕೆಲ ದಿನಗಳ ಹಿಂದಷ್ಟೇ ಖೋಚ್ ಹುದ್ದೆಯಿಂದ ಆಸ್ಟ್ರೇಲಿಯಾ ಕ್ರಿಕೆಟ್ ತಂಡದ ಮಾಜಿ ನಾಯಕ ರಿಕಿ ಪಾಂಟಿಂಗ್ ಅವರನ್ನು ತೆಗೆದು ಹಾಕಿದ ಬಳಿಕ ಡೆಲ್ಲಿ ಕ್ಯಾಪಿಟಲ್ಸ್ ತಂಡವು ನುತನ ಕೋಚ್ ಹುಡುಕಾಟದಲ್ಲಿ ತೊಡಗಿದ್ದು, ಹಲವರನ್ನು ಸಂಪರ್ಕಿಸಿದೆ. ಸದ್ಯು ಕೇಳಿ ಬಂದಿರುವ ಫ್ರೆಶ್ ಮಾಹಿತಿ ಪ್ರಕಾರ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಟೀಮ್ ಇಂಡಿಯಾದ ಮಾಜಿ ಸ್ಟಾರ್ ಆಟಗಾರನನ್ನು ಸಂಪರ್ಕಿಸಿದ್ದು, ಒಂದು ಸುತ್ತಿನ ಮಾತುಕತೆ ನಡೆಸಿದೆ ಎಂದು ವರದಿಯಾಗಿದೆ.
ಇದನ್ನೂ ಓದಿ: ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ನಗರದಾದ್ಯಂತ ಮಾಂಸ ಮಾರಾಟ ಬಂದ್
ಟೀಮ್ ಇಂಡಿಯಾಗೆ ಎರಡು ವಿಶ್ವಕಪ್ ಗೆಲ್ಲಿಸಿಕೊಡುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಆಲ್ರೌಂಡರ್, ಸಿಕ್ಸರ್ ಕಿಂಗ್ ಎಂದೇ ಹೆಸರುವಾಸಿಯಾಗಿರುವ ಯುವರಾಜ್ ಸಿಂಗ್ 18ನೇ ಆವೃತ್ತಿಯ ಐಪಿಎಲ್ನಲ್ಲಿ ಕಮ್ಬ್ಯಾಕ್ ಮಾಡಲಿದ್ದಾರೆ ಎಂಬ ಸುದ್ದಿ ಸದ್ದು ಮಾಡುತ್ತಿದ್ದು, ಹೊಸ ಚರ್ಚೆಯನ್ನು ಹುಟ್ಟುಹಾಕಿದೆ. ಅವರು ಮುಂಬರುವ ಐಪಿಎಲ್ನಲ್ಲಿ ಕೋಚ್ ಪಾತ್ರ ನಿರ್ವಹಿಸಲಿದ್ದಾರೆ ಎಂದು ಹೇಳಲಾಗಿದ್ದು, ಈ ಸಂಬಂಧ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಅವರನ್ನು ಸಂಪರ್ಕಿಸಿದೆ ಎಂದು ವರದಿಯಾಗಿದೆ.
ಐಪಿಎಲ್ನಲ್ಲಿ ಆಡಿದ ಸುದೀರ್ಘ ಅನುಭವವನ್ನು ಹೊಂದಿರುವ ಯುವರಾಜ್ ಸಿಂಗ್ ಪಂಜಾಬ್, ಹೈದರಾಬಾದ್, ಪುಣೆ ವಾರಿಯರ್ಸ್, ಆರ್‌ಸಿಬಿ, ಮುಂಬೈ ಇಂಡಿಯನ್ಸ್, ಡೆಲ್ಲಿ ಕ್ಯಾಪಿಟಲ್ಸ್ ತಂಡಗಳಲ್ಲಿ ಆಡಿದ್ದಾರೆ. ಒಂದು ವೇಳೆ ಯುವರಾಜ್ ಸಿಂಗ್ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಮುಖ್ಯ ಕೋಚ್ ಆದರೆ ಅವರಿಗೆ ಭಾರಿ ಮೊತ್ತದ ಸಂಭಾವನೆ ಸಿಗುವ ಸಾಧ್ಯತೆಗಳಿವೆ. ಇದೀಗ ಯುವರಾಜ್ ಈ ಸ್ಥಾನಕ್ಕೆ ಬಂದರೆ ರಿಕಿ ಪಾಂಟಿಂಗ್ ಅವರ ವೇತನಕ್ಕಿಂತ ಡಬಲ್ ಆಗಬಹುದು ಎಂದು ಅಂದಾಜಿಸಲಾಗಿದೆ.