IPL 2024: ಮುಂಬೈ ವಿರುದ್ಧ ತವರಿನಲ್ಲಿ ಭರ್ಜರಿ ಗೆಲುವು ಸಾಧಿಸಿದ ಡೆಲ್ಲಿ ಕ್ಯಾಪಿಟಲ್ಸ್

sa
Published on

ನವದೆಹಲಿ: ಮಾಜಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್​ 10 ರನ್​ಗಳ ರೋಚಕ ಗೆಲುವು ದಾಖಲಿಸಿತು. ಮುಂಬೈ ಇಂಡಿಯನ್ಸ್​ಗೆ ಮತ್ತೆ ಮುಖಭಂಗ ಅನುಭವಿಸಿತು. ಈ ಗೆಲುವಿನೊಂದಿಗೆ ಡೆಲ್ಲಿ ಅಂಕಪಟ್ಟಿಯಲ್ಲಿ 5ನೇ ಸ್ಥಾನಕ್ಕೇರಿದೆ.

ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್​ 257 ರನ್​ ಗಳಿಸಿತು. ನಿಗದಿತ 20 ಓವರ್‌ಗಳಲ್ಲಿ 9 ವಿಕೆಟ್‌ ಕಳೆದುಕೊಂಡು ಮುಂಬೈ 247 ರನ್‌ ಗಳಿಸಲಷ್ಟೆ ಶಕ್ತವಾಯಿತು. ಈ ಮೂಲಕ ಡೆಲ್ಲಿ 10 ರನ್‌ಗಳ ಗೆಲುವು ಸಾಧಿಸಿತು.

ಮೊದಲು ಬ್ಯಾಟಿಂಗ್ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್​ ನಿಗದಿತ 20 ಓವರ್​ಗಳಲ್ಲಿ 4 ವಿಕೆಟ್ ನಷ್ಟಕ್ಕೆ 257 ರನ್​ ಗಳಿಸಿತು. ಐಪಿಎಲ್​ ಇತಿಹಾಸದಲ್ಲೇ ಡೆಲ್ಲಿ ಕ್ಯಾಪಿಟಲ್ಸ್​ ಇದೇ ಮೊದಲ ಬಾರಿಗೆ 250 ರನ್​ ಗಳಿಸಿದ ದಾಖಲೆ ಬರೆಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net