

ನವದೆಹಲಿ: ಭಾರೀ ಮಳೆಯಿಂದ ಉಂಟಾದ ಯಮುನಾ ಪ್ರವಾಹದಿಂದ ಹಾನಿಗೊಳಗಾದ ಕುಟುಂಬಗಳಿಗೆ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ 10,000 ರೂ. ಹಣವನ್ನು ಪರಿಹಾರವಾಗಿ ಘೋಷಣೆ ಮಾಡಿದ್ದಾರೆ.
ಪ್ರತಿ ಪ್ರವಾಹ ಪೀಡಿತ ಕುಟುಂಬಕ್ಕೆ 10,000 ರೂ. ಹಣವನ್ನು ಪರಿಹಾರವಾಗಿ ಕೊಡುವುದಾಗಿ ಭರವಸೆ ನೀಡಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಸಿಎಂ, "ಪ್ರವಾಹದಲ್ಲಿ ಆಧಾರ್ ಕಾರ್ಡ್‌ನಂತಹ ಪ್ರಮುಖ ದಾಖಲೆಗಳನ್ನು ಕಳೆದುಕೊಂಡವರಿಗೆ ವಿಶೇಷ ಶಿಬಿರಗಳನ್ನು ಸ್ಥಾಪಿಸುತ್ತೇವೆ. ಪ್ರವಾಹದ ಸಂದರ್ಭದಲ್ಲಿ ತೊಂದರೆಗೆ ಸಿಲುಕಿದ ವಿದ್ಯಾರ್ಥಿಗಳಿಗೆ ಶಾಲಾ ಸಮವಸ್ತ್ರ ಮತ್ತು ಪುಸ್ತಕಗಳನ್ನು ನೀಡುತ್ತೇವೆ" ಎಂದು ಹೇಳಿದ್ದಾರೆ.