ನವದೆಹಲಿ: ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರೀಯ ತನಿಖಾ ದಳ (ಸಿಬಿಐ) ದಾಖಲಿಸಿರುವ ಪ್ರಕರಣದಲ್ಲಿ ದೆಹಲಿಯ ರೋಸ್ ಅವೆನ್ಯೂ ನ್ಯಾಯಾಲಯವು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ನ್ಯಾಯಾಂಗ ಬಂಧನವನ್ನು ಜುಲೈ 25ರವರೆಗೆ ವಿಸ್ತರಿಸಿದೆ.
ಇದನ್ನು ಓದಿ: ಶಂಭು ಗಡಿ ಸಂಚಾರಮುಕ್ತಗೊಳಿಸಿ; ಸರ್ಕಾರಕ್ಕೆ ಸುಪ್ರೀಂ ಸೂಚನೆ
ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಮನಿ ಲಾಂಡರಿಂಗ್ ಪ್ರಕರಣದಲ್ಲಿ ಶುಕ್ರವಾರ (ಜುಲೈ 12)ಸುಪ್ರೀಂಕೋರ್ಟ್ ಸಿಎಂ ಕೇಜ್ರಿವಾಲ್‌ಗೆ ಮಧ್ಯಂತರ ಜಾಮೀನು ನೀಡಿದೆ. ಆದರೆ, ಸಿಬಿಐ ದಾಖಲಿಸಿರುವ ಪ್ರಕರಣದಲ್ಲಿ ಅರವಿಂದ್ ಕೇಜ್ರಿವಾಲ್ ಅವರ ನ್ಯಾಯಾಂಗ ಬಂಧನ ವಿಸ್ತರಣೆ ಆಗಿದೆ. ಇಡಿ ಪ್ರಕರಣದಲ್ಲಿ ಜಾಮೀನು ಪಡೆದ ನಂತರವೂ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಸಿಬಿಐ ಪ್ರಕರಣದಲ್ಲಿ ಜಾಮೀನು ಪಡೆಯದ ಕಾರಣ ಇನ್ನೂ ಜೈಲಿನಲ್ಲೇ ಇರುತ್ತಾರೆ
ಈ ಹಿಂದೆ ಇಡಿ ಪ್ರಕರಣದಲ್ಲಿ ಕೇಜ್ರಿವಾಲ್ ಅವರನ್ನು ಮಧ್ಯಂತರ ಜಾಮೀನಿನ ಮೇಲೆ ಬಿಡುಗಡೆ ಮಾಡುವಂತೆ ಸುಪ್ರೀಂಕೋರ್ಟ್ ಆದೇಶಿಸಿತ್ತು. ಇಡಿ ಬಂಧನವನ್ನು ಪ್ರಶ್ನಿಸಿ ಸಿಎಂ ಕೇಜ್ರಿವಾಲ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಶುಕ್ರವಾರ ನಡೆದಿದ್ದು ಕೇಜ್ರಿವಾಲ್ ಅವರಿಗೆ ಜಾಮೀನು ಆದೇಶ ಸಿಕ್ಕಿದೆ.
ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಇಡಿ(ಜಾರಿ ನಿರ್ದೇಶನಾಲಯ) ಮಾರ್ಚ್ 21ರಂದು ಕೇಜ್ರಿವಾಲ್ ಅವರನ್ನು ಬಂಧಿಸಿತ್ತು. ಇದರ ನಂತರ ಸಿಬಿಐ ಜೂನ್ 26ರಂದು ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಭ್ರಷ್ಟಾಚಾರ ಪ್ರಕರಣದಲ್ಲಿ ಕೇಜ್ರಿವಾಲ್ ಅವರನ್ನು ಬಂಧಿಸಿತು. ಈ ಪ್ರಕರಣಗಳು ದೆಹಲಿ ಸರ್ಕಾರದ 2021-22ರ ಅಬಕಾರಿ ನೀತಿಗೆ ಸಂಬಂಧಿಸಿವೆ. (ಏಜೆನ್ಸೀಸ್)
ಡ್ರಗ್ಸ್ ಪ್ರಕರಣದಲ್ಲಿ ಸಂಸದ ಅಮೃತಪಾಲ್ ಸಿಂಗ್ ಸಹೋದರ ಅರೆಸ್ಟ್