Money Laundering Case| ಮಾಜಿ ಸಚಿವ ಸತ್ಯೇಂದರ್​ ಜೈನ್​ಗೆ ಜಾಮೀನು ಮಂಜೂರು

Satyendar Jain
Published on

ನವದೆಹಲಿ: ಅಕ್ರಮ ಹಣ ವರ್ಗಾವಣೆ (Money laundering Case) ಪ್ರಕರಣದಲ್ಲಿ ಜೈಲು ಸೇರಿದ್ದ ದೆಹಲಿ ಎಎಪಿ ಸರ್ಕಾರದ ಮಾಜಿ ಸಚಿವ ಸತ್ಯೇಂದರ್​ ಜೈನ್​ಗೆ (Satyendar Jain) ನ್ಯಾಯಾಲಯ (Court) ಜಾಮೀನು ಮಂಜೂರು ಮಾಡಿದೆ.

ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ (Money Laundering Case) ಸಂಬಂಧಿಸಿದಂತೆ ಮೇ 30, 2022 ರಂದು ಜಾರಿ ನಿರ್ದೇಶನಾಲಯ (Enforcement Directorate) ಸತ್ಯೇಂದರ್​ ಜೈನ್​ (Satyendar Jain) ಅವರನ್ನು ಬಂಧಿಸಿತ್ತು. ತಮಗೆ ಸಂಬಂಧಿಸಿದ ನಾಲ್ಕು ಕಂಪನಿಗಳ ಮೂಲಕ ಅಕ್ರಮ ಹಣ ವರ್ಗಾವಣೆ (Money laundering) ಮಾಡಿದ್ದಾರೆ ಎಂಬ ಆರೋಪದ ಮೇಲೆ ಬಂಧಿಸಲಾಗಿತ್ತು.

ಸತ್ಯೇಂದರ್​ ಜೈನ್​ (Satyendar Jain) ಸಲ್ಲಿಸಿದ್ದ ಜಾಮೀನು ಅರ್ಜಿ (Bail Plea) ವಿಚಾರಣೆ ನಡೆಸಿದ ನ್ಯಾಯಾಧೀಶರಾದ (Judge) ರಾಕೇಶ್​ ಸೈಲ್​ ಅವರು ವಾದ-ಪ್ರತಿವಾದವನ್ನು ಸುದೀರ್ಘವಾಗಿ ಆಲಿಸಿದ ಬಳಿಕ ಜಾಮೀನು ಮಂಜೂರು (Bail Grant) ಮಾಡಿದ್ದಾರೆ. ಅಲ್ಲದೇ ಹೆಚ್ಚು ಕಾಲ ಅವರನ್ನು ಕಸ್ಟಡಿಯಲ್ಲಿ ಇರಿಸಿಕೊಳ್ಳಲು ಸಾಧ್ಯವಿಲ್ಲ ಎಂದು ನ್ಯಾಯಾಧೀಶರು ಅಭಿಪ್ರಾಯಪಟ್ಟಿದ್ದಾರೆ.

ಭ್ರಷ್ಟಾಚಾರ ತಡೆ ಕಾಯಿದೆಯಡಿ 2017ರಲ್ಲಿ ಕೇಂದ್ರೀಯ ತನಿಖಾ ದಳ (CBI) ಜೈನ್ ವಿರುದ್ಧ ಎಫ್‌ಐಆರ್ ದಾಖಲಿಸಿದ ಹಿನ್ನೆಲೆಯಲ್ಲಿ ಜಾರಿ ನಿರ್ದೇಶನಾಲಯ (ED) ಸತ್ಯೇಂದರ್​ (Satyendar Jain) ಅವರ ಮನೆ ಹಾಗೂ ಕಚೇರಿಗಳ ಮೇಲೆ ದಾಳಿ ನಡೆಸಿತ್ತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net