

ನವದೆಹಲಿ: ಇತ್ತೀಚೆಗೆ ಜಾರಿ ನಿರ್ದೇಶನಾಲಯದಿಂದ ಆರೋಪ ಪಟ್ಟಿ ಸಲ್ಲಿಸಿದ್ದ ಬೆನ್ನಲ್ಲೇ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ.
ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರಿಗೆ ದೆಹಲಿ ನ್ಯಾಯಾಲಯ ಸಮನ್ಸ್ ಜಾರಿ ಮಾಡಿದ್ದು, ನ್ಯಾಯಾಲಯಕ್ಕೆ ಹಾಜರಾಗಲು ಸೂಚಿಸಿದೆ.
ದೆಹಲಿಯ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಮಂಗಳವಾರ ಸಮನ್ಸ್ ಜಾರಿ ಮಾಡಿದ್ದು, ಜುಲೈ 1 ರಂದು ವಿಚಾರಣೆಗೆ ಹಾಜರಾಗಬೇಕೆಂದು ಸೂಚಿಸಿದೆ. ಇನ್ನು ಡಿಕೆಶಿ ಸೇರಿದಂತೆ ಐವರಿಗೂ ನೊಟೀಸ್ ಜಾರಿಯಾಗಿದೆ.
ನಿರಂತರ ಆದಾಯ ಹೆಚ್ಚಳ ಹಾಗೂ ಆಸ್ತಿಗೆ ಸಂಬಂಧಿಸಿದಂತೆ ಇವರ ವಿರುದ್ಧ ದಾಖಲಾಗಿದ್ದ ಪ್ರಕರಣದಲ್ಲಿ ಇತ್ತೀಚೆಗೆ ಜಾರಿ ನಿರ್ದೇಶನಾಲಯ ಆರೋಪ ಪಟ್ಟಿ ಸಲ್ಲಿಸಿತ್ತು.