ಅಕ್ರಮ ಹಣ ಪತ್ತೆ ಪ್ರಕರಣ: ಸೆ.25ಕ್ಕೆ ಡಿಕೆಶಿ ಜಾಮೀನು ಅರ್ಜಿ ತೀರ್ಪು ಕಾಯ್ದಿರಿಸಿದ ನ್ಯಾಯಾಲಯ

ನವದೆಹಲಿ: ಅಕ್ರಮ ಹಣ ಪತ್ತೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದಿಂದ ಬಂಧನಕ್ಕೊಳಗಾಗಿ ಸದ್ಯ ನ್ಯಾಯಾಂಗ ಬಂಧನದಲ್ಲಿರುವ ಡಿ.ಕೆ. ಶಿವಕುಮಾರ್ ಅವರ ಜಾಮೀನು ಅರ್ಜಿ ವಿಚಾರಣೆ ತೀರ್ಪನ್ನು ಸೆ.25ಕ್ಕೆ ಕಾಯ್ದಿರಿಸಲಾಗಿದೆ.

ಇಂದು ಇ.ಡಿ. ವಿಶೇಷ ನ್ಯಾಯಾಲಯದಲ್ಲಿ ನಡೆದ ವಿಚಾರಣೆಯಲ್ಲಿ ಇ.ಡಿ. ಪರ ಸಾಲಿಸಿಟರ್‌ ಜನರಲ್‌, ಡಿ ಕೆ ಶಿವಕುಮಾರ್‌ ಅವರು ಪ್ರಭಾವಿ ಮತ್ತು ಪವರ್‌ ಫುಲ್‌ ನಾಯಕರಾಗಿದ್ದಾರೆ. ಜಾಮೀನು ಮಂಜೂರಾದರೆ ಸಾಕ್ಷ್ಯ ನಾಶಪಡಿಸುವ ಸಾಧ್ಯತೆ ಇದೆ. ಸಂಪೂರ್ಣ ತನಿಖೆ ಪೂರ್ಣಗೊಳ್ಳುವವರೆಗೆ ಜಾಮೀನು ನೀಡಲೇಬಾರದು ಎಂದು ವಾದ ಮಂಡಿಸಿದರು.

ವಾದವನ್ನು ಆಲಿಸಿದ ನ್ಯಾಯಾಧೀಶರಾದ ಅಜಯ್‌ ಕುಮಾರ್‌ ಕುಹರ್‌ ಅವರು ಜಾಮೀನು ಅರ್ಜಿ ವಿಚಾರಣೆ ಕುರಿತ ತೀರ್ಪನ್ನು ಕಾಯ್ದಿರಿಸಿ, ಸೆ. 25ರ ಮಧ್ಯಾಹ್ನ 3.30ಕ್ಕೆ ತೀರ್ಪು ಪ್ರಕಟವಾಗಲಿದೆ ಎಂದು ಆದೇಶ ನೀಡಿದರು.

ಹಾಗಾಗಿ ಡಿ ಕೆ ಶಿವಕುಮಾರ್‌ ಅವರು ಬುಧವಾರದವರೆಗೆ ತಿಹಾರ್‌ ಜೈಲಿನಲ್ಲೇ ಇರಬೇಕಾದ ಅನಿವಾರ್ಯತೆ ಎದುರಾಗಿದೆ. (ದಿಗ್ವಿಜಯ ನ್ಯೂಸ್)

Leave a Reply

Your email address will not be published. Required fields are marked *