ನವದೆಹಲಿ: ಕೇಂದ್ರ ತನಿಖಾ ದಳ (ಸಿಬಿಐ) ತನಿಖೆ ನಡೆಸುತ್ತಿರುವ ದೆಹಲಿ ಸರ್ಕಾರ ಅಬಕಾರಿ ನೀತಿ ಪ್ರಕರಣದ ಅಕ್ರಮ ಹಣ ವರ್ಗಾವಣೆಗೆ ಸಂಬಂಧಿಸಿದಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ.
ಇದನ್ನೂ ಓದಿ: ಬಿಜೆಪಿ ಶವಪೆಟ್ಟಿಗೆಗೆ ಕೊನೆಯ ಮೊಳೆ ಹೊಡೆಯುವ ಸಮಯ ಬಂದಿದೆ: ಮಾಜಿ ಸಿಎಂ ಹೇಮಂತ್ ಸೂರೆನ್
ತನಿಖೆ ಮತ್ತು ನ್ಯಾಯದ ಹಿತಾಸಕ್ತಿಯಲ್ಲಿ ಕೇಜ್ರಿವಾಲ್ ಅವರ ಕಸ್ಟಡಿಯ ಅಗತ್ಯವಿದೆ ಎಂದು ಸಿಬಿಐ ಹೇಳಿತ್ತು. ಜಾರಿ ನಿರ್ದೇಶನಾಲಯ ತನಿಖೆ ನಡೆಸುತ್ತಿದ್ದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಅರವಿಂದ್ ಕೇಜ್ರಿವಾಲ್ ಜೈಲು ಸೇರಿದ್ದರು. ತಿಹಾರ್ ಜೈಲಿನಿಂದಲೇ ಸಿಬಿಐ ಅರವಿಂದ್ ಕೇಜ್ರಿವಾಲ್ ಅವರನ್ನು ವಶಕ್ಕೆ ಪಡೆದು ನ್ಯಾಯಾಲಯದ ಮುಂದೆ ಹಾಜರುಪಡಿಸಿತ್ತು.
#WATCH | Delhi CM and AAP National Convenor Arvind Kejriwal brought to Rouse Avenue Court by CBI
His 3-day CBI remand in connection with the Excise policy case is ending today. pic.twitter.com/AdZVkmCyYO
— ANI (@ANI) June 29, 2024
ಕೇಜ್ರಿವಾಲ್ ಅವರ ಮೂರು ದಿನಗಳ ಸಿಬಿಐ ಕಸ್ಟಡಿ ಇಂದಿಗೆ ಅಂತ್ಯವಾಗಿದೆ. ಇಂದು ಮುಂಜಾನೆ, ವಿಶೇಷ ನ್ಯಾಯಾಧೀಶರಾದ ಸುನೈನಾ ಶರ್ಮಾ ಅವರು 3 ದಿನಗಳ ಸಿಬಿಐ ಕಸ್ಟಡಿ ಅಂತ್ಯಗೊಂಡ ನಂತರ ಅರವಿಂದ್ ಕೇಜ್ರಿವಾಲ್ ಅವರನ್ನು ನ್ಯಾಯಾಲಯಕ್ಕೆ ಕರೆತರುವ ಆದೇಶವನ್ನು ಕಾಯ್ದಿರಿಸಿದ್ದರು. ಇದೀಗ ಇಂದು ತೀರ್ಪು ಹೊರಹಾಕಿದ್ದು, ಇನ್ನೂ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
2021-22ರ ಅಬಕಾರಿ ನೀತಿಯಲ್ಲಿನ ಅಕ್ರಮಗಳಿಗೆ ಸಂಬಂಧಿಸಿದ ಭ್ರಷ್ಟಾಚಾರ ಆರೋಪಗಳಿಗೆ ಸಂಬಂಧಿಸಿದಂತೆ ದೆಹಲಿ ನ್ಯಾಯಾಲಯವು ಶನಿವಾರ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು 14 ದಿನಗಳ (ಜುಲೈ 12 ರವರೆಗೆ) ನ್ಯಾಯಾಂಗ ಬಂಧನಕ್ಕೆ ಕಳುಹಿಸಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಜ್ರಿವಾಲ್ ಅವರನ್ನು ಕೇಂದ್ರ ತನಿಖಾ ದಳ (ಸಿಬಿಐ) ಜೂನ್ 26 ರಂದು ಬಂಧಿಸಿತ್ತು . ಅವರನ್ನು ಮೂರು ದಿನಗಳ ಕಾಲ ಸಿಬಿಐ ಕಸ್ಟಡಿಗೆ ಒಪ್ಪಿಸಲಾಗಿದೆ.
ತಿಹಾರ್ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದ ಅರವಿಂದ್ ಕೇಜ್ರಿವಾಲ್ ಅವರನ್ನು ಬಾಡಿ ವಾರಂಟ್ ಮೇಲೆ ಮಂಗಳವಾರ ರಾತ್ರಿ ಬಂಧಿಸಿದ್ದ ಸಿಬಿಐ ಅಧಿಕಾರಿಗಳು, ಬುಧವಾರ ಕೋರ್ಟ್‌ಗೆ ಹಾಜರುಪಡಿಸಿದರು. ಪ್ರಕರಣದ ಹೆಚ್ಚಿನ ವಿಚಾರಣೆಗಾಗಿ ಐದು ದಿನ ಕಸ್ಟಡಿಗೆ ನೀಡುವಂತೆ ಮನವಿ ಮಾಡಿದರು.
ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರನ್ನು ಅಭಿನಂದಿಸಿದ ಸಿದ್ದರಾಮಯ್ಯ