ಅಬಕಾರಿ ಹಗರಣ; ದೆಹಲಿ ಸಿಎಂ ಅರವಿಂದ್​ ಕೇಜ್ರಿವಾಲ್​ಗೆ ಜಾಮೀನು ಮಂಜೂರು

Kejriwal Supreme
Published on

ನವದೆಹಲಿ: ಅಬಕಾರಿ ನೀತಿ ಜಾರಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಕ್ಕೆ ಸಂಬಂಧಿಸಿದಂತೆ ಸೆರೆವಾಸದಲ್ಲಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್​ ಕೇಜ್ರಿವಾಲ್​ಗೆ ಸುಪ್ರೀಂ ಕೋರ್ಟ್​ ಶುಕ್ರವಾರ (ಸೆಪ್ಟೆಂಬರ್​ 13) ಜಾಮೀನು ಮಂಜೂರು ಮಾಡಿದೆ.

ತಮ್ಮ ಬಂಧನ ಪ್ರಶ್ನಿಸಿ ಹಾಗೂ ಜಾಮೀನು ಕೋರಿ ಸುಪ್ರೀಂ ಕೋರ್ಟ್​ ಮೊರೆ ಹೋಗಿದ್ದ ಕೇಜ್ರಿವಾಲ್​ಗೆ ಸುಪ್ರೀಂ ಕೋರ್ಟ್​ ರಿಲೀಫ್​ ನೀಡಿದೆ. ತನಿಖೆಯ ಉದ್ದೇಶಕ್ಕಾಗಿ ಈಗಾಗಲೇ ಮತ್ತೊಂದು ಪ್ರಕರಣದಲ್ಲಿ ಬಂಧನದಲ್ಲಿರುವ ವ್ಯಕ್ತಿಯನ್ನು ಬಂಧಿಸಲು ಯಾವುದೇ ಅಡ್ಡಿಯಿಲ್ಲ ಎಂದು ನ್ಯಾಯಪೀಠ ಹೇಳಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಯಾವುದೇ ಹೇಳಿಕೆಗಳನ್ನು ನೀಡದಂತೆ ಕೇಜ್ರಿವಾಲ್​ಗೆ ತಾಕೀತು ಮಾಡಿರುವ ನ್ಯಾಯಾಲಯ ಜಾರಿ ನಿರ್ದೇಶನಾಲಯದ ವಿಷಯದಲ್ಲಿ ವಿಧಿಸಲಾದ ಷರತ್ತುಗಳು ಈ ಪ್ರಕರಣಕ್ಕೂ ಅನ್ವಯಿಸುತ್ತವೆ ಎಂದು ಹೇಳಿ ಜಾಮೀನು ಮಂಜೂರು ಮಾಡಿದೆ.

ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಪಟ್ಟಂತೆ ಜೂನ್‌ನಲ್ಲಿ ಸಿಬಿಐ ಅವರು ಬಂಧಿಸಿತ್ತು. ಈಗಾಗಲೇ ಜಾರಿ ನಿರ್ದೇಶನಾಲಯವು ಸಲ್ಲಿಸಿದ ಪ್ರಕರಣದಲ್ಲಿ ಜಾಮೀನು ಪಡೆದಿರುವ ಅರವಿಂದ್ ಕೇಜ್ರಿವಾಲ್ ಅವರು ಈಗ ಜೈಲಿನಿಂದ ಹೊರಬರಲಿದ್ದಾರೆ. ಸುಮಾರು ಆರು ತಿಂಗಳ ಜೈಲುವಾಸದ ನಂತರ ಅವರು ಬಿಡುಗಡೆಯಾಗಲಿದ್ದ ಆಮ್ ಆದ್ಮಿ ಪಕ್ಷದ ನಾಯಕರು, ಕಾರ್ಯಕರ್ತರಲ್ಲಿ ಸಂಬ್ರಮ ಮನೆ ಮಾಡಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net