18.1 C
Bangalore
Saturday, December 7, 2019

ದೆಹಲಿಯಲ್ಲಿ ಉಸಿರಾಡುವ ಗಾಳಿಯ ಮಾತು ಬಿಡಿ, ಕುಡಿಯುವ ನೀರು ಕೂಡ ಯೋಗ್ಯವಲ್ಲವಂತೆ: ಬಿಐಎಸ್​ ವರದಿ

Latest News

ಅಂಗನವಾಡಿಗಳಲ್ಲೇ ಪೂರ್ವ ಪ್ರಾಥಮಿಕ ಶಿಕ್ಷಣ ಪ್ರಾರಂಭಿಸಿ

ಕಾರವಾರ: ಅಂಗನವಾಡಿ ಕೇಂದ್ರಗಳಲ್ಲಿ ಪೂರ್ವ ಪ್ರಾಥಮಿಕ ಶಿಕ್ಷಣ ಪ್ರಾರಂಭಿಸಬೇಕು ಎಂದು ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತೆಯರು ನಗದಲ್ಲಿ ಶುಕ್ರವಾರ ಬೃಹತ್ ಪ್ರತಿಭಟನೆ ನಡೆಸಿದರು.

ಖರೀದಿ ಕೇಂದ್ರ ತೆರೆಯಲು ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ ಕೃಷಿ ಮಾರಾಟ ಇಲಾಖೆ

ಚಿತ್ರದುರ್ಗ: ಬೆಂಬಲ ಬೆಲೆ ಯೋಜನೆಯಡಿ ಶೇಂಗಾ, ಮೆಕ್ಕೆಜೋಳ ಮತ್ತಿತರ ಬೆಳೆಗಳ ಖರೀದಿ ಕೇಂದ್ರ ತೆರೆಯಲು ಹಾಗೂ ಏಜೆನ್ಸಿ ನಿಗದಿಪಡಿಸಲು ಕೋರಿ ಕೃಷಿ ಮಾರಾಟ...

ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಮೈಸೂರು: ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಜಿಲ್ಲೆಯ ನೂರಾರು ಅಂಗನವಾಡಿ ಕಾರ್ಯಕರ್ತೆಯರು ಶುಕ್ರವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು. ಕರ್ನಾಟಕ ರಾಜ್ಯ ಅಂಗವನಾಡಿ ನೌಕರರ ಸಂಘದ...

ಅಂಬೇಡ್ಕರ್ ಸಂವಿಧಾನದ ಗುಮಾಸ್ತರಲ್ಲ

ಮೈಸೂರು: ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರನ್ನು ಇತ್ತೀಚೆಗೆ ಕೆಲವರು ಸಂವಿಧಾನದ ಗುಮಾಸ್ತನ ರೀತಿ ನೋಡುತ್ತಿರುವುದು ಮನಸ್ಸಿಗೆ ತೀವ್ರ ನೋವು ಉಂಟುಮಾಡುತ್ತಿದೆ ಎಂದು...

ಅಂಬೇಡ್ಕರ್ ಚಿಂತನೆಗಳೇ ದೇಶಕ್ಕೆ ಸಂಪತ್ತು

ಮೈಸೂರು: ಶಿಕ್ಷಣದ ಏಕಸ್ವಾಮ್ಯ ಮುರಿದು, ಶಿಕ್ಷಣದ ಮೂಲಕ ಎಲ್ಲರಿಗೂ ಬಿಡುಗಡೆಯ ಕ್ರಾಂತಿ ಮೊಳಗಿಸಿದ ಅಂಬೇಡ್ಕರ್ ಅವರ ಶ್ರಮ, ಹೋರಾಟ ಮತ್ತು ವ್ಯಕ್ತಿತ್ವ ವಿದ್ಯಾರ್ಥಿಗಳಿಗೆ...

ನವದೆಹಲಿ: ರಾಷ್ಟ್ರರಾಜಧಾನಿಯಲ್ಲಿ ಉಸಿರಾಡುವ ಗಾಳಿಯ ಗುಣಮಟ್ಟ ವಿಶ್ವದಲ್ಲೇ ಅತ್ಯಂತ ಕಳಪೆ ಎಂಬ ಅಪಖ್ಯಾತಿಯ ಬೆನ್ನಹಿಂದೆಯೇ ಅಲ್ಲಿನ ನೀರು ಕೂಡ ಕುಡಿಯಲು ಯೋಗ್ಯವಾಗಿಲ್ಲ ಎಂಬ ಆತಂಕಕಾರಿ ಸಂಗತಿ ಬಹಿರಂಗಗೊಂಡಿದೆ. ಭಾರತೀಯ ಗುಣಮಟ್ಟ ಮಾಪನ ಬ್ಯೂರೋ (ಬಿಐಎಸ್​) ನಡೆಸಿರುವ ಅಧ್ಯಯನ ವರದಿಯಲ್ಲಿ ಈ ಆತಂಕಕಾರಿ ಸಂಗತಿ ಬಹಿರಂಗಗೊಂಡಿದೆ.

ದೆಹಲಿ ಅಷ್ಟೇ ಅಲ್ಲ, ಕೋಲ್ಕತ ಮತ್ತು ಚೆನ್ನೈನಲ್ಲಿನ ಕುಡಿಯುವ ನೀರಿನ ಗುಣಮಟ್ಟದ ಅಳತೆಗೋಲು 11ರ ಪೈಕಿ 10 ಅಂಶಗಳಲ್ಲಿ ಕಳಪೆ ಎಂಬುದು ಸಾಬೀತಾಗಿರುವುದಾಗಿ ಬಿಐಎಸ್​ ಅಧ್ಯಯನ ವರದಿ ತಿಳಿಸಿದೆ.
ಬೆಂಗಳೂರು, ಗಾಂಧಿನಗರ, ಚಂಡಿಗಢ, ಗುವಾಹತಿ, ಲಕ್ನೋ, ಜಮ್ಮು, ಜೈಪುರ, ದೆಹ್ರಾಡೂನ್​, ಸೇರಿ 13 ರಾಜ್ಯಗಳ ರಾಜಧಾನಿಗಳ ಕುಡಿಯುವ ನೀರಿನ ಗುಣಮಟ್ಟ ಕೂಡ ಕಳಪೆ ಎಂಬುದು ಅಧ್ಯಯನ ವರದಿಯಲ್ಲಿ ಹೇಳಲಾಗಿದೆ.

ಹಾಗಾದರೆ ಸುರಕ್ಷಿತವಾದ ಕುಡಿಯುವ ನೀರು ದೇಶದ ಯಾವ ನಗರದಲ್ಲಿದೆ ಎಂಬ ಪ್ರಶ್ನೆಗೆ ಮುಂಬೈ ಎಂಬ ಉತ್ತರ ಸಿಕ್ಕಿದೆ. ಶನಿವಾರ ನಡೆದ ಕಾರ್ಯಕ್ರಮವೊಂದರಲ್ಲಿ ಕೇಂದ್ರ ಗ್ರಾಹಕ ವ್ಯವಹಾರಗಳ ಸಚಿವ ರಾಮ್​ವಿಲಾಸ್​ ಪಾಸ್ವಾನ್​ ಬಿಡುಗಡೆ ಮಾಡಿರುವ 2ನೇ ಹಂತದ ಅಧ್ಯಯನ ವರದಿಯಲ್ಲಿ ಮುಂಬೈನಲ್ಲಿ ಮಹಾನಗರಪಾಲಿಕೆ ವತಿಯಿಂದ ಪೂರೈಕೆ ಮಾಡಲಾಗುವ ಕುಡಿಯುವ ನೀರು ಕುಡಿಯಲು ಅತ್ಯಂತ ಸುರಕ್ಷಿತವಾಗಿದೆ ಎಂದು ಹೇಳಲಾಗಿದೆ.

ಈ ಅಧ್ಯಯನ ಕಾರ್ಯದಲ್ಲಿ ರಾಷ್ಟ್ರದ 20 ರಾಜ್ಯಗಳ ರಾಜಧಾನಿಗಳ ಕುಡಿಯುವ ನೀರಿನ ಮಾದರಿಯನ್ನು ಸಂಗ್ರಹಿಸಿ, ಪರೀಕ್ಷೆಗೆ ಒಳಪಡಿಸಲಾಗಿತ್ತು. ನೀರಿನ ಗುಣಮಟ್ಟ ಪರೀಕ್ಷೆಯ 11 ಅಂಶಗಳ ಪೈಕಿ ಮುಂಬೈ ಅನ್ನು ಹೊರತುಪಡಿಸಿ ಉಳಿದ ರಾಜಧಾನಿಗಳ ನೀರಿನ ಗುಣಮಟ್ಟದಲ್ಲಿ 1ಕ್ಕೂ ಹೆಚ್ಚು ಅಂಶಗಳಲ್ಲಿ ಕಳಪೆಯಾಗಿರುವುದು ಪತ್ತೆಯಾಗಿದೆ ಎನ್ನಲಾಗಿದೆ.

ಮಹಾನಗರಪಾಲಿಕೆ ವತಿಯಿಂದ ಪೂರೈಕೆ ಮಾಡಲಾಗುವ ನೀರಿನ ಗುಣಮಟ್ಟ ಕಾಯ್ದುಕೊಳ್ಳುವುದು ಸದ್ಯ ಕಡ್ಡಾಯವಾಗಿಲ್ಲ. ಅದನ್ನು ಕಡ್ಡಾಯಗೊಳಿಸಿದ ನಂತರದಲ್ಲಿ ತಪ್ಪಿತಸ್ಥ ಸ್ಥಳೀಯ ಆಡಳಿತ ಸಂಸ್ಥೆಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವ ರಾಮ್​ವಿಲಾಸ್​ ಪಾಸ್ವಾನ್​ ಹೇಳಿದರು.

ಕುಡಿಯುವ ನೀರಿನ ಗುಣಮಟ್ಟದ ಅಧ್ಯಯನದ ಮೊದಲ ಹಂತದಲ್ಲಿ ದೆಹಲಿಯಲ್ಲಿ 11 ಕಡೆಗಳಲ್ಲಿ ನೀರಿನ ಮಾದರಿಯನ್ನು ಸಂಗ್ರಹಿಸಲಾಗಿತ್ತು. ಆ ಮಾದರಿಗಳನ್ನು ಪರೀಕ್ಷೆಗೆ ಒಳಪಡಿಸಿದಾಗ, ಎಲ್ಲ 11 ಮಾದರಿಗಳು ಗುಣಮಟ್ಟದ ಅಳತೆಗೋಲಿನ 11 ಅಂಶಗಳಲ್ಲೂ ಕಳಪೆಯಾಗಿರುವುದು ಪತ್ತೆಯಾಗಿತ್ತು. (ಏಜೆನ್ಸೀಸ್​)

Stay connected

278,740FansLike
581FollowersFollow
620,000SubscribersSubscribe

ವಿಡಿಯೋ ನ್ಯೂಸ್

VIDEO| ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯ ಜೀವ ಉಳಿಸಿದ ಯೋಧ:...

ಥಾಣೆ: ರೈಲ್ವೆ ರಕ್ಷಣಾ ಪಡೆಯ ಯೋಧರೊಬ್ಬರು ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯೊಬ್ಬನನ್ನು ರಕ್ಷಣೆ ಮಾಡುವ ಮೂಲಕ ಸಮಯಪ್ರಜ್ಞೆ ಮರೆದಿರುವ ಘಟನೆ ಮಹಾರಾಷ್ಟ್ರದ ಥಾಣೆ ರೈಲ್ವೆ ನಿಲ್ದಾಣದಲ್ಲಿ ಬುಧವಾರ ನಡೆದಿದ್ದು, ಇದಕ್ಕೆ...

VIDEO| ನನ್ನನ್ನು ಯಾರೂ ಮುಟ್ಟಲಾರರು; ಸ್ವಯಂಘೋಷಿತ ದೇವಮಾನವ ನಿತ್ಯಾನಂದ ಹೇಳಿಕೆ

ನವದೆಹಲಿ: "ನನ್ನನ್ನು ಯಾರೂ ಮುಟ್ಟಲಾರರು, ನಿಮಗೊಂದು ಸತ್ಯ ಹೇಳುತ್ತೇನೆ. ನಾನೂ ಪರಮ ಶಿವ, ಅರ್ಥವಾಯ್ತ...?" ಎಂದು ಅತ್ಯಾಚಾರದ ಆರೋಪಿ ನಿತ್ಯಾನಂದ ವಿಡಿಯೋಂದರಲ್ಲಿ ಹೇಳಿದ್ದಾನೆ. ಯಾವ ಕೋರ್ಟ್​ ಕೂಡ ನನ್ನ ಬಗ್ಗೆ ತೀರ್ಪು ನೀಡಲಾರದು. ಯಾರೂ...

VIDEO| ಮದುವೆ ಸಮಾರಂಭದಲ್ಲಿ ಡ್ಯಾನ್ಸ್​ ನಿಲ್ಲಿಸುತ್ತಿದ್ದಂತೆ ಯುವತಿ ಮೇಲೆ ಫೈರಿಂಗ್​:...

ಲಖನೌ: ಮದುವೆ ಸಂಭ್ರಮದಲ್ಲಿ ಡ್ಯಾನ್ಸ್​ ಮಾಡುವುದನ್ನು ನಿಲ್ಲಿಸುತ್ತಿದ್ದಂತೆ ನೃತ್ಯಗಾರ್ತಿಯ ಮುಖಕ್ಕೆ ಫೈರಿಂಗ್​ ಮಾಡಿರುವ ಘಟನೆ ಉತ್ತರ ಪ್ರದೇಶದ ಚಿತ್ರಕೂಟದಲ್ಲಿ ಕಳೆದ ವಾರ ನಡೆದಿರುವುದಾಗಿ ವರದಿಯಾಗಿದೆ. ಘಟನೆಯಲ್ಲಿ ಗಾಯಗೊಂಡ ಯುವತಿಯನ್ನು ಕಾನ್ಪುರ ಆಸ್ಪತ್ರೆಗೆ...

VIDEO: ಎನ್​ಕೌಂಟರ್ ನಡೆಸಿದ ಪೊಲೀಸರನ್ನು ಹೆಗಲ ಮೇಲೆ ಹೊತ್ತು ಸಂಭ್ರಮಿಸಿದ...

ಹೈದರಾಬಾದ್​​: ಪಶುವೈದ್ಯೆ ದಿಶಾ ಅತ್ಯಾಚಾರ ಮತ್ತು ಕೊಲೆ ಆರೋಪಿಗಳನ್ನು ಎನ್​ಕೌಂಟರ್​​ನಲ್ಲಿ ಹತ್ಯೆಗೈದ ಪೊಲೀಸರನ್ನು ಹೈದರಾಬಾದ್​​ ಜನತೆ ಹೆಗಲ ಮೇಲೆ ಹೊತ್ತು ಜಯಘೊಷ ಕೂಗಿ ಸಂಭ್ರಮಿಸಿದ್ದಾರೆ. ಶುಕ್ರವಾರ ಬೆಳಗ್ಗೆ ಆರೋಪಿಗಳ ಎನ್​ಕೌಂಟರ್​ ಸುದ್ಧಿ...

ಉಪಚುನಾವಣೆ ಮತದಾನ ಅಂತ್ಯ: ಮತಗಟ್ಟೆ ಸಮೀಕ್ಷೆಯಲ್ಲಿ ಬಿಜೆಪಿಯದ್ದೇ ಮೇಲುಗೈ

ಬೆಂಗಳೂರು: ರಾಜ್ಯದ 15 ಕ್ಷೇತ್ರಗಳ ಉಪಚುನಾವಣೆಯ ಮತದಾನ ಪ್ರಕ್ರಿಯೆ ಗುರುವಾರ ಸಂಜೆ 6 ಗಂಟೆಗೆ ಪೂರ್ಣಗೊಂಡಿತು. ಸಣ್ಣಪುಟ್ಟ ಗಲಾಟೆಗಳು ಹಾಗೂ ಅಲ್ಲಲ್ಲಿ ಕೆಲ ಇವಿಎಂಗಳ ದೋಷ ಹೊರತುಪಡಿಸಿದರೆ ಉಪಚುನಾವಣೆಯ ಮತದಾನ...

VIDEO| ವಿಕೆಟ್​ ಕಿತ್ತ ಖುಷಿಯಲ್ಲಿ ಕರವಸ್ತ್ರವನ್ನು ಕಡ್ಡಿಯನ್ನಾಗಿಸಿ ಸಂಭ್ರಮ: ಬೌಲರ್​ನ...

ನವದೆಹಲಿ: ಯಾವುದೇ ಆಟವಾಗಿರಲಿ ಆಟಗಾರರಿಗೆ ತಮ್ಮ ಸಂಭ್ರಮದ ಕ್ಷಣ ಸ್ಮರಣೀಯವಾಗಿರುತ್ತದೆ. ಹಲವರು ವಿಭಿನ್ನ ರೀತಿಯಲ್ಲಿ ಸಂಭ್ರಮಿಸುವ ಪ್ರಯತ್ನವನ್ನು ಮೈದಾನದಲ್ಲಿ ಮಾಡುತ್ತಿರುತ್ತಾರೆ. ಇದೀಗ ದಕ್ಷಿಣ ಆಫ್ರಿಕಾ ಬೌಲರ್​ ಒಬ್ಬರು ವಿಕೆಟ್​ ಪಡೆದ...