More

    ಲಾಕ್​ಡೌನ್​ನಿಂದ ಸಂಕಷ್ಟಕ್ಕೆ ಸಿಲುಕಿರೋ ಸಾರಿಗೆ ಚಾಲಕರಿಗೆ ಸಿಎಂ ಕೇಜ್ರಿವಾಲ್​ರಿಂದ 5 ಸಾವಿರ ರೂ. ಆರ್ಥಿಕ ನೆರವು ಘೋಷಣೆ

    ನವದೆಹಲಿ: ಲಾಕ್​ಡೌನ್​ ಹಿನ್ನೆಲೆಯಲ್ಲಿ ಸಂಕಷ್ಟಕ್ಕೆ ಸಿಲುಕಿರುವ ಆಟೋ, ಟ್ಯಾಕ್ಸಿ ಹಾಗೂ ಇ-ರಿಕ್ಷಾ ಸೇರಿದಂತೆ ಸಾರ್ವಜನಿಕ ವಾಹನದ ಚಾಲಕರ ನೆರವಿಗೆ ದೆಹಲಿ ಸರ್ಕಾರ ಧಾವಿಸಿದ್ದು, ಪ್ರತಿಯೊಬ್ಬರಿಗೂ ತಲಾ 5 ಸಾವಿರ ರೂ. ಆರ್ಥಿಕ ನೆರವು ನೀಡುವುದಾಗಿ ಸಿಎಂ ಅರವಿಂದ್​ ಕೇಜ್ರಿವಾಲ್​ ಘೋಷಿಸಿದ್ದಾರೆ.

    ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಸಾರಿಗೆ ಚಾಲಕರ ಬ್ಯಾಂಕ್​ ಖಾತೆಗಳ ನಂಬರ್​ ದೊರೆಯದ ಹಿನ್ನೆಲೆಯಲ್ಲಿ ಈ ಯೋಜನೆಯನ್ನು ಹೇಗೆ ಕಾರ್ಯರೂಪಕ್ಕೆ ತರಬೇಕೆಂದು ಸರ್ಕಾರ ಚಿಂತಿಸುತ್ತಿದೆ ಎಂದು ತಿಳಿಸಿದರು.

    ದೆಹಲಿಯಲ್ಲಿ ಯಾರೊಬ್ಬರು ಕೂಡ ಹಸಿವಿನಿಂದ ಬಳಲುವುದಿಲ್ಲ ಎಂಬುದನ್ನು ನಾನು ಖಚಿತಪಡಿಸುತ್ತೇನೆ. ಮುಂದಿನ 7 ರಿಂದ 10 ದಿನಗಳಲ್ಲಿ ಸಾರ್ವಜನಿಕ ಸೇವಾ ಚಾಲಕರಿಗೆ ಆರ್ಥಿಕ ನೆರವನ್ನು ಖಂಡಿತವಾಗಿ ಒದಗಿಸುತ್ತೇವೆ ಎಂದು ಭರವಸೆ ನೀಡಿದ್ದಾರೆ.

    ಈಗಾಗಲೇ ಸುಮಾರು 35 ಸಾವಿರಕ್ಕೂ ಹೆಚ್ಚು ಕಟ್ಟಡ ನಿರ್ಮಾಣ ಕಾರ್ಮಿಕರಿಗೆ ದೆಹಲಿ ಸರ್ಕಾರ ತಲಾ 5 ಸಾವಿರ ರೂ. ಆರ್ಥಿಕ ನೆರವು ಒದಗಿಸಿದೆ.

    ದೇಶಕ್ಕೆ ವಕ್ಕರಿಸಿರುವ ಮಹಾಮಾರಿ ಕರೊನಾ ವೈರಸ್​ ಸೋಂಕು ತಡೆಗಟ್ಟಲು ಇಡೀ ದೇಶಕ್ಕೆ ಲಾಕ್​ಡೌನ್​ ಹೇರಲಾಗಿದೆ. ಈ ಹಿನ್ನೆಲೆಯಲ್ಲಿ ರಾಷ್ಟ್ರವ್ಯಾಪಿ ಆರ್ಥಿಕ ಚಟುವಟಿಕೆ ಸ್ತಬ್ಧವಾಗಿರುವ ಹಿನ್ನೆಲೆಯಲ್ಲಿ ಸಾಕಷ್ಟು ಮಂದಿ ಸಂಕಷ್ಟಕ್ಕೆ ಸಿಲುಕಿದ್ದು, ಅವರ ನೆರವಿಗೆ ರಾಜ್ಯ ಮತ್ತು ಕೇಂದ್ರ ಸರ್ಕಾರ ಧಾವಿಸಿದೆ. (ಏಜೆನ್ಸೀಸ್​)

    ಕರೊನಾ ತಡಗೆ ಏಪ್ರಿಲ್ 5ರ ಸಂಕಲ್ಪ ಏನು- ವಿಡಿಯೋ ಸಂದೇಶದಲ್ಲಿ ಪ್ರಧಾನಿ ಮೋದಿ ವಿವರಿಸಿದ್ದಾರೆ ನೋಡಿ…

    ಸಿಂಗಾಪುರ್​ ವಿಮಾನ ನಿಲ್ದಾಣದಲ್ಲಿ ಕರೊನಾ ಎಂದು ಕೂಗಾಡಿದ ಭಾರತೀಯನ ಬಂಧನ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts