More

    ಮಾನಹಾನಿಕಾರಕ ಹೇಳಿಕೆ; ಶಿವಸೇನೆ ನಾಯಕ ಉದ್ಧವ್​ ಠಾಕ್ರೆ ಮತ್ತು ಇತರರಿಗೆ ದೆಹಲಿ ಹೈಕೋರ್ಟ್​ ಸಮನ್ಸ್​

    ನವದೆಹಲಿ: ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್​ ಶಿಂಧೆ ಆಪ್ತ, ಸಂಸದ ರಾಹುಲ್​ ರಮೇಶ್​ ಶೆವಾಲೆ ಹೂಡಿದ್ದ ಮಾನನಷ್ಟ ಮೊಕದ್ದಮೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಸೇನೆ(UBT) ಮುಖ್ಯಸ್ಥ ಉದ್ಧವ್​ ಠಾಕ್ರೆ, ರಾಜ್ಯಸಭೆ ಸದಸ್ಯ ಸಂಜಯ್​ ರಾವುತ್​​ ಹಾಗೂ ಶಾಸಕ ಆದಿತ್ಯ ಠಾಕ್ರೆಗೆ ದೆಹಲಿ ಹೈಕೋರ್ಟ್​ ಸಮನ್ಸ್​ ಜಾರಿ ಮಾಡಿದೆ.

    ಏಕನಾಥ್​ ಶಿಂಧೆ ನೇತೃತ್ವದ ಶಿವಸೇನೆ ಬಣವು ಪಕ್ಷದ ಚಿಹ್ನೆಯನ್ನ 2,000 ಸಾವಿರ ಕೋಟಿ ರೂಪಾಯಿಗೆ ಖರೀದಿಸಿದೆ ಎಂದು ಈ ಮೂವರು ನಾಯಕರು ಹೇಳಿಕೆ ನೀಡಿದ್ದಾರೆಂದು ಆರೋಪಿಸಿ ರಾಹುಲ್​ ಶೆವಾಲೆ ದೆಹಲಿ ಹೈಕೋರ್ಟಿನಲ್ಲಿ ಮಾನನಷ್ಟ ಮೊಕದ್ದಮೆಯನ್ನ ದಾಖಲಿಸಿದ್ದರು.

    ಮಾನಹಾನಿಕಾರಕ ಹೇಳಿಕೆ; ಶಿವಸೇನೆ ನಾಯಕ ಉದ್ಧವ್​ ಠಾಕ್ರೆ ಮತ್ತು ಇತರರಿಗೆ ದೆಹಲಿ ಹೈಕೋರ್ಟ್​ ಸಮನ್ಸ್​

    ಇದನ್ನೂ ಓದಿ: ನಿತಿನ್ ಗಡ್ಕರಿಗೆ ಬೆದರಿಕೆ ಹಾಕಿದ್ದ ಶಂಕಿತನನ್ನು ಬೆಳಗಾವಿಯಿಂದ ಕರೆದೊಯ್ದ ನಾಗ್ಪುರ ಪೊಲೀಸರು

    ಸಂಸದ ರಾಹುಲ್​ ಶೆವಾಲೆ ಪರ ವಾದ ಮಂಡಿಸಿದ ಹಿರಿಯ ವಕೀಲ ರಾಜೀವ್​ ನಾಯ್ಯರ್ ತಮ್ಮ ಕಕ್ಷಿದಾರರ ವಿರುದ್ಧ​ ಯಾವುದೇ ಮಾನಹಾನಿಕಾರಕ ಹೇಳಿಕೆಗಳನ್ನ ನೀಡದಂತೆ ತಡೆಯಾಜ್ಞೆ ನೀಡುವಂತೆ ನ್ಯಾಯಾಲಯಕ್ಕೆ ವಿನಂತಿಸಿದ್ದರು.

    ವಿಚಾರಣೆ ನಡೆಸಿದ ನ್ಯಾಯಮೂರ್ತಿ ಪ್ರತೀಕ್​ ಜಲನ್​ ಅವರಿದ್ದ ಏಕಸದಸ್ಯ ಪೀಠವು ಪ್ರತಿವಾದಿಗಳು ಪ್ರತಿಕ್ರಿಯೆ ನೀಡಿದ ನಂತರವಷ್ಟೇ ಆದೇಶವನ್ನ ಹೊರಡಿಸಲಾಗುವುದು ಎಂದು ತಿಳಿಸಿ ವಿಚಾರಣೆಯನ್ನ ಎಪ್ರಿಲ್​ 17ಕ್ಕೆ ಮುಂದೂಡಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts