ನವದೆಹಲಿ: ರಾಷ್ಟ್ರ ರಾಜಧಾನಿ ದಿಲ್ಲಿ ರಾಜಕಾರಣದಲ್ಲಿ ಅಲ್ಲೋಲಕಲ್ಲೋಲ ಸೃಷ್ಟಿಸಿರುವ ದೆಹಲಿ ಅಬಕಾರಿ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಸಿಎಂ ಅರವಿಂದ್ ಕೇಜ್ರಿವಾಲ್‌ಗೆ ಜಾಮೀನು ನೀಡಿರುವ ವಿಚಾರಣಾ ನ್ಯಾಯಾಲಯದ ಆದೇಶಕ್ಕೆ ತಡೆ ನೀಡುವಂತೆ ಜಾರಿ ನಿರ್ದೇಶನಾಲಯದ ಮನವಿಯ ಕುರಿತು ದೆಹಲಿ ಹೈಕೋರ್ಟ್ ಮಂಗಳವಾರ ತನ್ನ ತೀರ್ಪು ಪ್ರಕಟಿಸಲಿದೆ. ನಾಳೆ ಮಧ್ಯಾಹ್ನ 2.30ಕ್ಕೆ ಈ ಆದೇಶ ಪ್ರಕಟಿಸಲಿದೆ.
ಇದನ್ನೂ ಓದಿ: ಲೋಕಸಭಾ ಸದಸ್ಯನಾಗಿ ಕನ್ನಡದಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಸಾಗರ್ ಈಶ್ವರ ಖಂಡ್ರೆ
ಇಡಿ ವಿಚಾರಣಾ ನ್ಯಾಯಾಲಯದ ತೀರ್ಪನ್ನು ಪ್ರಶ್ನಿಸಿದ ನಂತರ ನ್ಯಾಯಮೂರ್ತಿ ಸುಧೀರ್ ಕುಮಾರ್ ಜೈನ್ ನೇತೃತ್ವದ ರಜಾಕಾಲದ ಪೀಠವು ಜೂನ್ 21 ರಂದು ತೀರ್ಪನ್ನು ಕಾಯ್ದಿರಿಸಿತು ಮತ್ತು ತೀರ್ಪು ಪ್ರಕಟವಾಗುವವರೆಗೆ ಮಧ್ಯಂತರ ತಡೆಯಾಜ್ಞೆ ನೀಡಿತು.
ಆದೇಶವನ್ನು ಕಾಯ್ದಿರಿಸಿತ್ತು: ಮಾರ್ಚ್ 21 ರಂದು ಇಡಿಯಿಂದ ಬಂಧಿಸಲ್ಪಟ್ಟಿದ್ದ ಕೇಜ್ರಿವಾಲ್ ಅವರಿಗೆ ದೆಹಲಿ ಕೋರ್ಟ್ ಜಾಮೀನು ನೀಡಿತ್ತು. ಅದರ ಪ್ರಕಾರ ಅವರು ಶುಕ್ರವಾರವೇ ಬಿಡುಗಡೆಯಾಗಬಹುದಿತ್ತು. ಆದರೆ. ಅದನ್ನು ಪ್ರಶ್ನಿಸಿ ಇಡಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ್ದ ದೆಹಲಿ ಹೈಕೋರ್ಟ್ ತನ್ನ ಆದೇಶದವರೆಗೆ ಆ ಜಾಮೀನಿಗೆ ತಡೆ ನೀಡಿತ್ತು. ನ್ಯಾ. ಸುಧೀರ್ ಕುಮಾರ್ ಜೈನ್ ಅವರ ರಜಾಕಾಲದ ಪೀಠವು ಜೂನ್ 21ರಂದು ವಿಚಾರಣಾ ನ್ಯಾಯಾಲಯದ ತೀರ್ಪನ್ನು ಪ್ರಶ್ನಿಸಿದ ನಂತರ ಆದೇಶವನ್ನು ಕಾಯ್ದಿರಿಸಿತ್ತು. ತಾನು ತೀರ್ಪು ನೀಡುವವರೆಗೆ ಜಾಮೀನು ಆದೇಶವನ್ನು ತಡೆಹಿಡಿಯಲು ಸೂಚಿಸಿತ್ತು.
ವಿಚಾರಣಾ ನ್ಯಾಯಾಲಯವು ಜೂನ್ 20ರಂದು ಅರವಿಂದ್ ಕೇಜ್ರಿವಾಲ್‌ಗೆ ಜಾಮೀನು ಮಂಜೂರು ಮಾಡಿತು. 1 ಲಕ್ಷ ರೂ.ಗಳ ವೈಯಕ್ತಿಕ ಬಾಂಡ್‌ನಲ್ಲಿ ಅವರನ್ನು ಬಿಡುಗಡೆ ಮಾಡಲು ಆದೇಶಿಸಿತು. ಅದರಲ್ಲಿ ತನಿಖೆಗೆ ಅಡ್ಡಿಪಡಿಸಲು ಅಥವಾ ಸಾಕ್ಷಿಗಳ ಮೇಲೆ ಪ್ರಭಾವ ಬೀರಲು ಪ್ರಯತ್ನಿಸುವುದಿಲ್ಲ ಎಂಬುದು ಸೇರಿದಂತೆ ಕೆಲವು ಷರತ್ತುಗಳನ್ನು ವಿಧಿಸಿತು.
ಕೇಜ್ರಿವಾಲ್ ಮನವಿಯನ್ನುನಿರಾಕರಿಸಿದ ಸುಪ್ರೀಂ ಕೋರ್ಟ್: ದೆಹಲಿ ಕೋರ್ಟ್ ಆದೇಶದ ವಿರುದ್ಧ ಸಿಎಂ ಅರವಿಂದ್ ಕೇಜ್ರಿವಾಲ್ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದಾರೆ. ಪ್ರಕರಣವನ್ನು ಗಮನಿಸಿದ ಸುಪ್ರೀಂ ಅಚ್ಚರಿ ವ್ಯಕ್ತಪಡಿಸಿದೆ. ಏನಾಗಿದೆಯೋ ಅದು ಸಾಮಾನ್ಯ ಎನಿಸುತ್ತಿಲ್ಲ ಎಂದು ಅಭಿಪ್ರಾಯಪಟ್ಟಿದೆ. ಜೊತೆಗೆ ಹೈಕೋರ್ಟ್‌ನ ಮಧ್ಯಂತರ ತಡೆಯಾಜ್ಞೆಯನ್ನು ರದ್ದುಗೊಳಿಸುವ ಕೇಜ್ರಿವಾಲ್ ಮನವಿಯನ್ನು ಸುಪ್ರೀಂ ಕೋರ್ಟ್ ನಿರಾಕರಿಸಿದೆ.
ನ್ಯಾಯಾಲಯವು ಮುಂದಿನ ವಿಚಾರಣೆಯನ್ನು ಬುಧವಾರಕ್ಕೆ ನಿಗದಿಪಡಿಸಿತು. ದೆಹಲಿ ಹೈಕೋರ್ಟ್ ಮಂಗಳವಾರ ತನ್ನ ಸಂಪೂರ್ಣ ತೀರ್ಪು ನೀಡುವ ನಿರೀಕ್ಷೆಯಿದೆ. ಹೈಕೋರ್ಟ್ ತನ್ನ ತೀರ್ಪನ್ನು ಕಾಯ್ದಿರಿಸಿರುವಾಗ ಮಧ್ಯಪ್ರವೇಶಿಸುವುದು ಸರಿಯಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ.
ಅರವಿಂದ್ ಕೇಜ್ರಿವಾಲ್‌ಗೆ ಜಾಮೀನು ನೀಡಿರುವುದನ್ನು ಪ್ರಶ್ನಿಸಿ ಇಡಿ ಸಲ್ಲಿಸಿರುವ ಅರ್ಜಿಯ ಕುರಿತು ದೆಹಲಿ ಹೈಕೋರ್ಟ್ ಅಂತಿಮ ಆದೇಶವನ್ನು ಪ್ರಕಟಿಸುವವರೆಗೆ ನಾವು ಕಾಯುತ್ತೇವೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ.
ಲೋಕಸಭೆ ಚುನಾವಣೆಗೆ ಮುನ್ನ ನಡೆದ ಹೈಡ್ರಾಮಾದಲ್ಲಿ ಮಾರ್ಚ್ 21ರಂದು ಅರವಿಂದ್ ಕೇಜ್ರಿವಾಲ್ ಅವರನ್ನು ಜಾರಿ ನಿರ್ದೇಶನಾಲಯ (ಇಡಿ) ಬಂಧಿಸಿತ್ತು. ಮೇ ತಿಂಗಳಲ್ಲಿ ಸಾರ್ವತ್ರಿಕ ಚುನಾವಣೆಗಳನ್ನು ಗಮನದಲ್ಲಿಟ್ಟುಕೊಂಡು ಸುಪ್ರೀಂ ಕೋರ್ಟ್ ಮಧ್ಯಂತರ ಜಾಮೀನು ನೀಡಿತ್ತು. ಚುನಾವಣಾ ಪ್ರಚಾರದಲ್ಲಿ ಭಾಗಿಯಾಗಿದ್ದ ಅರವಿಂದ್ ಕೇಜ್ರಿವಾಲ್ ಅವರು ಜೂನ್ 2ರಂದು ಮತ್ತೆ ನ್ಯಾಯಾಲಯದ ಮುಂದೆ ಶರಣಾಗಿದ್ದರು.
ಹಂಗಾಮಿ ಸ್ಪೀಕರ್ ವಿವಾದ: ಸಂಸತ್ತಿನ ಹೊರಗೆ ಸಂವಿಧಾನ ಪುಸ್ತಕ ಹಿಡಿದು ಪ್ರತಿಭಟನೆ ನಡೆಸಿದ ಇಂಡಿಯಾ ಬಣ!