ನವದೆಹಲಿ: ಅಬಕಾರಿ ನೀತಿ ಪ್ರಕರಣದಲ್ಲಿ ಕೇಂದ್ರೀಯ ತನಿಖಾ ದಳ (ಸಿಬಿಐ) ತನ್ನನ್ನು ಬಂಧಿಸಿರುವುದನ್ನು ಪ್ರಶ್ನಿಸಿ ಆಮ್ ಆದ್ಮಿ ಪಕ್ಷದ (ಎಎಪಿ) ಮುಖ್ಯಸ್ಥ, ಸಿಎಂ ಅರವಿಂದ್ ಕೇಜ್ರಿವಾಲ್ ಸಲ್ಲಿಸಿದ್ದ ಮನವಿಯನ್ನು ದೆಹಲಿ ಹೈಕೋರ್ಟ್ ಸೋಮವಾರ(ಆಗಸ್ಟ್ 5) ವಜಾಗೊಳಿಸಿದೆ.
ಇದನ್ನು ಓದಿ: ಮುಸ್ಲಿಮರ ಬಗ್ಗೆ ಬಿಜೆಪಿಗಿರುವ ಚಿಂತನೆ ಸಂವಿಧಾನ ವಿರೋಧಿ; ಅಖಿಲೇಶ್ ಯಾದವ್
ಯಾವುದೇ ನ್ಯಾಯಸಮ್ಮತ ಕಾರಣಗಳಿಲ್ಲದೆ, ಕಾನೂನುಬಾಹಿರವಾಗಿ ಅಥವಾ ಅಕ್ರಮವಾಗಿ ಬಂಧನವಾಗಿದೆ ಎಂದು ಹೇಳಲಾಗುವುದಿಲ್ಲ ಎಂದು ನ್ಯಾಯಮೂರ್ತಿ ನೀನಾ ಬನ್ಸಾಲ್ ಕೃಷ್ಣ ಅವರಿದ್ದ ಪೀಠ ಹೇಳಿದೆ. ಪ್ರಕರಣದಲ್ಲಿ ಜಾಮೀನಿಗಾಗಿ ವಿಚಾರಣಾ ನ್ಯಾಯಾಲಯವನ್ನು ಸಂಪರ್ಕಿಸುವಂತೆ ಸಿಎಂ ಅರವಿಂದ್ ಕೇಜ್ರಿವಾಲ್ಗೆ ಹೈಕೋರ್ಟ್ ಸೂಚಿಸಿದೆ.
ತನಿಖಾ ಸಂಸ್ಥೆ ಕೇಜ್ರಿವಾಲ್ ಅವರ ಜಾಮೀನು ಅರ್ಜಿಯನ್ನು ವಿರೋಧಿಸಿದ್ದು, ಅವರು ಅಬಕಾರಿ ಹಗರಣದ ಮಾಸ್ಟರ್ ಮೈಂಡ್ ಮತ್ತು ಇವರು ಬಿಡುಗಡೆಯಾದರೆ ಸಾಕ್ಷಿಗಳ ಮೇಲೆ ಪ್ರಭಾವ ಬೀರಬಹುದು ಎಂದು ಆರೋಪಿಸಿದ್ದರು. ಅವರ ಬಂಧನವಿಲ್ಲದೆ ತನಿಖೆಯನ್ನು ಮುಗಿಸಲು ಸಾಧ್ಯವಿಲ್ಲ. ಒಂದು ತಿಂಗಳೊಳಗೆ ನಾವು ಚಾರ್ಜ್ ಶೀಟ್ ಸಲ್ಲಿಸಿದ್ದೇವೆ ಎಂದು ಸಿಬಿಐ ಪರ ವಕೀಲ ಡಿಪಿ ಸಿಂಗ್ ಹೇಳಿದ್ದಾರೆ.
ಸಿಬಿಐ ಮತ್ತು ಇಡಿ ಪ್ರಕರಣದಲ್ಲಿ ಕೇಜ್ರಿವಾಲ್ ಪ್ರಸ್ತುತ ತಿಹಾರ್ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾರೆ. ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಮಾರ್ಚ್ 21ರಂದು ಜಾರಿ ನಿರ್ದೇಶನಾಲಯ ಮತ್ತು ಭ್ರಷ್ಟಾಚಾರ ಪ್ರಕರಣದಲ್ಲಿ ಸಿಬಿಐ ಜೂನ್ 26 ರಂದು ಅವರನ್ನು ಬಂಧಿಸಿತ್ತು.(ಏಜೆನ್ಸೀಸ್)
ಬಾಂಗ್ಲಾದಲ್ಲಿ ಹಿಂಸಾತ್ಮಕ ಪ್ರತಿಭಟನೆ: ನಟಿ ಸೋನಮ್ ಕಪೂರ್ ಹೇಳಿದ್ದು ಹೀಗೆ