ಟರ್ಕಿ ವಿಮಾನಯಾನ ಸಂಸ್ಥೆ ಸೆಲೆಬಿ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದ ದೆಹಲಿ ಹೈಕೋರ್ಟ್| celebi

Delhi Highcourt 14 jan 20
Published on

ನವದೆಹಲಿ: ರಾಷ್ಟ್ರೀಯ ಭದ್ರತಾ ಆಧಾರದ ಮೇಲೆ ತನ್ನ ಭದ್ರತಾ ಅನುಮತಿಯನ್ನು ರದ್ದುಗೊಳಿಸಿದ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ ಟರ್ಕಿ ವಿಮಾನಯಾನ ಸಂಸ್ಥೆ ಸೆಲೆಬಿ ಸಲ್ಲಿಸಿದ್ದ ಅರ್ಜಿಯನ್ನು ದೆಹಲಿ ಹೈಕೋರ್ಟ್ ಇಂದು (07) ವಜಾಗೊಳಿಸಿದೆ.

ಮೇ 15 ರಂದು ರಾಷ್ಟ್ರೀಯ ಭದ್ರತೆಯ ಹಿತದೃಷ್ಟಿಯಿಂದ ತಕ್ಷಣದಿಂದ ಜಾರಿಗೆ ಬರುವಂತೆ ಕೇಂದ್ರವು ನಾಗರಿಕ ವಿಮಾನಯಾನ ಸಚಿವಾಲಯದ ಮೂಲಕ ಸಂಸ್ಥೆಗೆ ನೀಡಲಾದ ಭದ್ರತಾ ಅನುಮತಿಯನ್ನು ರದ್ದುಗೊಳಿಸಿತ್ತು. ಭಾರತ ಹಾಗೂ ಪಾಕಿಸ್ತಾನ ಸಂಘರ್ಷದ ಸಂದರ್ಭದಲ್ಲಿ ಟರ್ಕಿ ಪಾಕಿಸ್ತಾನಕ್ಕೆ ಬೆಂಬಲ ನೀಡಿತ್ತು. ಈ ಹಿನ್ನೆಲೆ ಮೇ 16ರಂದು ಸೆಲೆಬಿ ಹವಾ ಸರ್ವಿಸಿ ಎಎಸ್ ಕಂಪನಿಗೆ ನೀಡಿದ್ದ ಸೇವಾ ಪರವಾನಗಿಯನ್ನು ರದ್ದುಪಡಿಸುವ ಮೂಲಕ ಕೇಂದ್ರ ಸರ್ಕಾರ ಟರ್ಕಿ ವಿರುದ್ಧ ಕ್ರಮಕ್ಕೆ ಮುಂದಾಗಿತ್ತು.

ವಿವರವಾದ ತೀರ್ಪನ್ನು ಇನ್ನೂ ಬಹಿರಂಗಪಡಿಸಲಾಗಿಲ್ಲವಾದರೂ, ನ್ಯಾಯಮೂರ್ತಿ ಸಚಿನ್ ದತ್ತ ಅವರು ಅರ್ಜಿಯನ್ನು ವಜಾಗೊಳಿಸಲಾಗಿದೆ ಎಂದು ಮುಕ್ತ ನ್ಯಾಯಾಲಯದಲ್ಲಿ ಘೋಷಿಸಿದ್ದಾರೆ.

ಕಳೆದ 15 ವರ್ಷದಿಂದಲೂ ದೇಶದ ವಿಮಾನಯಾನ ವಲಯದಲ್ಲಿ ಸೆಲೆಬಿ ಕಂಪನಿಯು ಸೇವೆ ಒದಗಿಸುತ್ತಿದೆ. ದೆಹಲಿ, ಬೆಂಗಳೂರು, ಕೊಚ್ಚಿನ್, ಹೈದರಾಬಾದ್, ಗೋವಾ, ಕಣ್ಣೂರು, ದೆಹಲಿ, ಮುಂಬೈ, ಅಹಮದಾಬಾದ್ ವಿಮಾನ ನಿಲ್ದಾಣಗಳಲ್ಲಿ ಈ ಕಂಪನಿಯ ಅಂಗಸಂಸ್ಥೆಗಳು ಕಾರ್ಯಾಚರಣೆ ನಡೆಸುತ್ತಿವೆ. 10 ಸಾವಿರಕ್ಕೂ ಹೆಚ್ಚು ಉದ್ಯೋಗಿಗಳು ಇದ್ದಾರೆ.

(ಏಜೆನ್ಸೀಸ್)

ಸೆಲೆಬಿ ಏವಿಯೇಷನ್ ​​ಎರಡು ಪ್ರತ್ಯೇಕ ಘಟಕಗಳನ್ನು ಹೊಂದಿದೆ. ಸೆಲೆಬಿ ಏರ್‌ಪೋರ್ಟ್ ಸರ್ವೀಸಸ್ ಇಂಡಿಯಾ ವಿಮಾನ ನಿಲ್ದಾಣ ನಿರ್ವಹಣೆ ಕಾರ್ಯಾಚರಣೆ ನಡೆಸುತ್ತಿದ್ದರೆ ಸೆಲೆಬಿ ದೆಹಲಿ ಕಾರ್ಗೋ ಟರ್ಮಿನಲ್ ಮ್ಯಾನೇಜ್‌ಮೆಂಟ್ ಇಂಡಿಯಾ ದೆಹಲಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸರಕು ಸೇವೆಗಳನ್ನು ಮೇಲ್ವಿಚಾರಣೆ ಮಾಡುತ್ತಿತ್ತು. ಸೆಲೆಬಿ 2008 ರಲ್ಲಿ ಮುಂಬೈ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಜಂಟಿ ಉದ್ಯಮದ ಮೂಲಕ ಭಾರತವನ್ನು ಪ್ರವೇಶಿಸಿತು. ಸೆಲೆಬಿ ಕಂಪನಿಗೆ ಕೆಲಸ ನಿರ್ವಹಿಸಲು ಯುಪಿಎ ಸರ್ಕಾರ ಅನುಮತಿ ನೀಡಿತ್ತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net