

ನವದೆಹಲಿ: ದೆಹಲಿ ಮದ್ಯ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ(ಇಡಿ) ಬಂಧಿಸಿರುವ ಎಎಪಿ ನಾಯಕ ಅರವಿದ್ ಕೇಜ್ರಿವಾಲ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ದೆಹಲಿ ಹೈಕೋರ್ಟ್ ಮಧ್ಯಪ್ರವೇಶಿಸಲು ನಿರಾಕರಿಸಿತು.
ಪ್ರಜಾಪ್ರಭುತ್ವವು ತನ್ನ ಮಾರ್ಗವನ್ನು ತಾನೇ ಕಂಡುಕೊಳ್ಳಬೇಕು. ಅದು ತನ್ನ ಹಾದಿ ಹಿಡಿಯಬೇಕು ಎಂದು ತಿಳಿಸಿತು.
ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಯಬೇಕೇ ಎಂಬುದನ್ನು ಸ್ವತಃ ಕೇಜ್ರಿವಾಲ್ ನಿರ್ಧರಿಸಬೇಕು ಎಂದು ಅಭಿಪ್ರಾಯಪಟ್ಟ ನ್ಯಾಯಾಲಯ, ಅದೇ ಸಮಯದಲ್ಲಿ, ವೈಯಕ್ತಿಕ ಹಿತಾಸಕ್ತಿಗಿಂತ ರಾಷ್ಟ್ರೀಯ ಹಿತಾಸಕ್ತಿ ಮುಖ್ಯ ಎಂದು ಎಂದು ನ್ಯಾಯಾಲಯ ನೆನಪಿಸಿತು.