More

    223 ನೌಕರರು ಔಟ್.. ದೆಹಲಿ ಲೆಫ್ಟಿನೆಂಟ್ ಗವರ್ನರ್ ಆದೇಶ

    ನವದೆಹಲಿ: ಲೋಕಸಭಾ ಚುನಾವಣೆ ಸಂದರ್ಭದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಜೈಲು ಶಿಕ್ಷೆ ಅನುಭವಿಸುತ್ತಿದ್ದು, ಆಮ್ ಆದ್ಮಿ ಪಕ್ಷಕ್ಕೆ ಹಿನ್ನಡೆಯಾಗಿದೆ. ಇದರ ನಡುವೆ ಲೆಫ್ಟಿನೆಂಟ್ ಗವರ್ನರ್ ವಿಕೆ ಸಕ್ಸೇನಾ ಅವರು ಕೇಜ್ರಿವಾಲ್​ ಸರ್ಕಾರ ನೇಮಿಸಿದ್ದ 223 ನೌಕರರನ್ನು ತೆಗೆದುಹಾಕುವ ಮೂಲಕ ಮತ್ತೊಂದು ಶಾಕ್ ನೀಡಿದ್ದಾರೆ.

    ಇದನ್ನೂ ಓದಿ: ಅಮಿತ್ ಶಾ ವಿಡಿಯೋ ಮಾರ್ಫಿಂಗ್ ಪ್ರಕರಣ..ಮೂವರು ಕಾಂಗ್ರೆಸ್ ಮುಖಂಡರ ಬಂಧನ!

    ದೆಹಲಿ ಮಹಿಳಾ ಆಯೋಗದ 223 ಉದ್ಯೋಗಿಗಳನ್ನು ವಜಾಗೊಳಿಸಿ ಲೆಫ್ಟಿನೆಂಟ್ ಗವರ್ನರ್ ಸಕ್ಸೇನಾ ಆದೇಶ ಹೊರಡಿಸಿದ್ದಾರೆ. ಅವರ ಆದೇಶವು ತಕ್ಷಣದಿಂದಲೇ ಜಾರಿಗೆ ಬರಲಿದೆ ಎಂದು ಅವರು ಆದೇಶಿಸಿದ್ದಾರೆ.

    ಈ ಹಿಂದೆ ದೆಹಲಿ ಮಹಿಳಾ ಆಯೋಗದ ಅಧ್ಯಕ್ಷೆಯಾಗಿ ಕೆಲಸ ಮಾಡಿದ್ದ ಸ್ವಾತಿಮಲಿವಾಲ್ ಅಕ್ರಮ ಎಸಗಿದ್ದಾರೆ ಎಂಬ ಆರೋಪಗಳಿವೆ. ಮಹಿಳಾ ಆಯೋಗವು ಕೇವಲ 40 ಉದ್ಯೋಗಿಗಳ ನೇಮಕಾತಿಗೆ ಅನುಮತಿ ನೀಡಿತ್ತು. ಆದರೆ ಲೆಫ್ಟಿನೆಂಟ್ ಗವರ್ನರ್ ಅನುಮೋದನೆಯಿಲ್ಲದೆ 223 ಹೊಸ ಹುದ್ದೆಗಳಳಿಗೆ ನೇಮಕಾತಿ ಮಾಡಲಾಗಿದೆ ಎಂಬುದು ಪ್ರಮುಖ ಆರೋಪವಾಗಿದೆ.

    ಗುತ್ತಿಗೆ ಆಧಾರದ ಮೇಲೆ ಉದ್ಯೋಗಿಗಳನ್ನು ನೇಮಿಸಲು ಮಹಿಳಾ ಆಯೋಗಕ್ಕೆ ಯಾವುದೇ ಅಧಿಕಾರವಿಲ್ಲ ಎಂದು ಸಕ್ಸೇನಾ ತಮ್ಮ ಆದೇಶದಲ್ಲಿ ತಿಳಿಸಿದ್ದಾರೆ.

    ಸರ್ಕಾರದ ಮೇಲೆ ಹೆಚ್ಚುವರಿ ಆರ್ಥಿಕ ಹೊರೆ ಬೀಳುವ ಯಾವುದೇ ಕ್ರಮವನ್ನು ಹಣಕಾಸು ಇಲಾಖೆಯ ಅನುಮೋದನೆಯಿಲ್ಲದೆ ತೆಗೆದುಕೊಳ್ಳಬಾರದು ಎಂದು ಆಯೋಗಕ್ಕೆ ತಿಳಿಸಲಾಗಿದೆ. ಈ ನೇಮಕಾತಿಗಳನ್ನು ನಿಗದಿತ ಕಾರ್ಯವಿಧಾನಗಳ ಪ್ರಕಾರ ಮಾಡಲಾಗಿಲ್ಲ ಎಂದು ತನಿಖೆಯಿಂದ ತಿಳಿದುಬಂದಿದೆ. ಇದಲ್ಲದೆ, ಡಿಸಿಡಬ್ಲ್ಯೂ ಸಿಬ್ಬಂದಿಯ ವೇತನ ಮತ್ತು ಭತ್ಯೆಗಳ ಹೆಚ್ಚಳದ ಮಾನದಂಡಗಳನ್ನು ಸಹ ಅನುಸರಿಸಲಾಗಿಲ್ಲ ಎಂದು ಅದು ಹೇಳಿದೆ.

    ರಾಜ್ಯಸಭಾ ಸಂದಸ್ಯರಾಗುವ ಮೊದಲು ಎಎಪಿಯ ಮಲಿವಾಲ್ ಒಂಬತ್ತು ವರ್ಷ ದೆಹಲಿ ಮಹಿಳಾ ಆಯೋಗದ ಮುಖ್ಯಸ್ಥರಾಗಿದ್ದರು. ಅವರು ನೇಮಕಾತಿಗಳಿಗೆ ಸಂಬಂಧಿಸಿದಂತೆ ತಮ್ಮ ವಿರುದ್ಧದ ಆರೋಪಗಳಿಗೆ ಇನ್ನೂ ಪ್ರತಿಕ್ರಿಯಿಸಿಲ್ಲ. ಇತ್ತೀಚೆಗೆ ಲೆಫ್ಟಿನೆಂಟ್ ಗವರ್ನರ್ ಮೇಲೆ ಎಎಪಿ ಮುಖಂಡರು ವಾಕ್ಸಮರ ನಡೆಸುತ್ತಿದ್ದು, ಬಿಜೆಪಿ ನಾಯಕರಂತೆ ವರ್ತಿಸುತ್ತಿದ್ದಾರೆ ಎಂದಿದ್ದರು. ಮದ್ಯ ಹಗರಣ ಪ್ರಕರಣದಲ್ಲಿ ಸಿಎಂ ಅರವಿಂದ್ ಕೇಜ್ರಿವಾಲ್ ಜೈಲಿನಲ್ಲಿರುವಾಗಲೇ ಈ ಬೆಳವಣಿಗೆ ನಡೆದಿದೆ.

    ಕೋವಿನ್​ಪ್ರಮಾಣ ಪತ್ರದಿಂದ ಪ್ರಧಾನಿ ಮೋದಿ ಫೋಟೋ ತೆಗೆದುಹಾಕಲಾಗಿದೆ..ಕಾರಣ ಇದೇನಾ?

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts